2 nd ಮಗುವಿನ ನಿರೀಕ್ಷೆಯಲ್ಲಿ ಕೊಹ್ಲಿ-ಅನುಷ್ಕಾ!: ಎಬಿಡಿ ವಿಲಿಯರ್ಸ್ ಹೇಳಿಕೆ
Team Udayavani, Feb 3, 2024, 9:25 PM IST
ಹೊಸದಿಲ್ಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎ ಬಿ ಡಿ ವಿಲಿಯರ್ಸ್ ಅಚ್ಚರಿಯ ಹೇಳಿಕೆ ನೀಡಿ ಭಾರೀ ಕುತೂಹಲ ಮೂಡಿಸಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಡೆಯುತ್ತಿರುವ 5 ಪಂದ್ಯಗಳ ಸರಣಿಯ ಮೊದಲ ಎರಡು ಟೆಸ್ಟ್ಗಳಿಂದ ಭಾರತ ಸ್ಟಾರ್ ಬ್ಯಾಟ್ಸ್ ಮ್ಯಾನ್ ವಿರಾಟ್ ಕೊಹ್ಲಿ ಹಿಂದೆ ಸರಿದಿರುವ ವೇಳೆಯೇ ಆರ್ ಸಿಬಿ ತಂಡದ ಜತೆಗಾರ, ಗೆಳೆಯ ಡಿ ವಿಲಿಯರ್ಸ್ ಶನಿವಾರ YouTube ಶೋ ಒಂದರಲ್ಲಿ ಹೇಳಿಕೆ ನೀಡಿ ಕುತೂಹಲ ಹೆಚ್ಚಿಸಿದ್ದಾರೆ.
”ಕೊಹ್ಲಿ ಎರಡು ಪಂದ್ಯಗಳಲ್ಲಿ ಆಡದೇ ಇರುವುದನ್ನು ಪರಿಶೀಲಿಸಿದ್ದೇನೆ. ವಿರಾಟ್ ಕೊಹ್ಲಿ ಉತ್ತಮವಾಗಿದ್ದು, ಅವರ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ” ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಎರಡು ಟೆಸ್ಟ್ಗಳಿಂದ ಹಿಂದೆ ಸರಿದಿದ್ದಾರೆ ಎಂದು ಬಿಸಿಸಿಐ ಹೇಳಿದ್ದು, ವಿವರವಾದ ಹೇಳಿಕೆಯಲ್ಲಿ ಅವರ ನಿರ್ಧಾರಕ್ಕೆ ಕಾರಣಗಳನ್ನು ಊಹಿಸಬೇಡಿ ಎಂದು ಅಭಿಮಾನಿಗಳು ಮತ್ತು ಮಾಧ್ಯಮಗಳನ್ನು ಕೋರಿದೆ. ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹಿಂದೆ ಸರಿಯುವ ಮೊದಲು ಕೊಹ್ಲಿ ನಾಯಕ ರೋಹಿತ್ ಶರ್ಮಾ ಮತ್ತು ತಂಡದೊಂದಿಗೆ ಚರ್ಚಿಸಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.