![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 12, 2023, 12:00 PM IST
ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ದುನಿಯಾದ ಅತ್ಯಂತ ಜನಪ್ರಿಯ ಆಟಗಾರ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ವಿರಾಟ್ ಕೊಹ್ಲಿ 256 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಅಂದರೆ ವಿಶ್ವದಲ್ಲಿ ಅತ್ಯಂತ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ಕ್ರೀಡಾಪಟುಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಕೆಲ ದಿನಗಳ ಹಿಂದೆ ವಿರಾಟ್ ಕೊಹ್ಲಿ ಅವರು ಸಾಮಾಜಿಕ ಜಾಲತಾಣಗಳ ಪೋಸ್ಟ್ ನಿಂದ ಕೋಟಿಗಟ್ಟಲೆ ಹಣ ಪಡೆಯುತ್ತಾರೆ ಎಂದು ವರದಿಯಾಗಿತ್ತು. ವಿರಾಟ್ ಅವರು ಒಂದು ಇನ್ಸ್ಟಾಗ್ರಾಮ್ ಪೋಸ್ಟ್ ನಿಂದ 11.45 ಕೋಟಿ ಪಡೆಯುತ್ತಾರೆ ಎಂದು ವರದಿ ತಿಳಿಸಿತ್ತು. ಇದು ದೊಡ್ಡ ಸುದ್ದಿಯಾಗಿತ್ತು.
ಆದರೆ ಇದೀಗ ಸ್ವತಃ ವಿರಾಟ್ ಕೊಹ್ಲಿ ಅವರೇ ಇದರ ಬಗ್ಗೆ ಸ್ವಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರಾಟ್, ‘’ನಾನು ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ, ನನ್ನ ಸಾಮಾಜಿಕ ಮಾಧ್ಯಮ ಗಳಿಕೆಯ ಬಗ್ಗೆ ಸುತ್ತುತ್ತಿರುವ ಸುದ್ದಿ ನಿಜವಲ್ಲ” ಎಂದಿದ್ದಾರೆ.
While I am grateful and indebted to all that I’ve received in life, the news that has been making rounds about my social media earnings is not true. 🙏
— Virat Kohli (@imVkohli) August 12, 2023
ವಿರಾಟ್ ಕೊಹ್ಲಿ ಸದ್ಯ ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಿಂದ ಬ್ರೇಕ್ ಪಡೆದಿದ್ದಾರೆ. ಮುಂದಿನ ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್ ನ ತಯಾರಿ ನಡೆಸುತ್ತಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.