ವಿರಾಟ್ ಕೊಹ್ಲಿ ಕ್ಷಮೆಯಾಚಿಸಿದ ಆಸ್ಟ್ರೇಲಿಯದ ಬ್ರಾಡ್ ಹಾಜ್
Team Udayavani, Mar 31, 2017, 7:55 AM IST
ಮುಂಬಯಿ: ಐಪಿಎಲ್‌ನಲ್ಲಿ ಆಡುವ ಉದ್ದೇಶದಿಂದ ವಿರಾಟ್ ಕೊಹ್ಲಿ ಆಸ್ಟ್ರೇಲಿಯ ವಿರುದ್ಧದ 4ನೇ ಟೆಸ್ಟ್‌ನಿಂದ ಹಿಂದೆ ಸರಿದಿದ್ದಾರೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಸ್ಟ್ರೇಲಿಯದ ಮಾಜಿ ಆಟಗಾರ ಬ್ರಾಡ್ ಹಾಜ್ ಈಗ ಕ್ಷಮೆಯಾಚಿಸಿದ್ದಾರೆ.
“ನನಗೆ ಇಂಡಿಯನ್ ಪ್ರೀಮಿ ಯರ್ ಲೀಗ್ ಬಗ್ಗೆ ಗೌರವವಿದೆ. ಅವಿಸ್ಮರಣೀಯ ಕ್ಷಣಗಳನ್ನು ಇಲ್ಲಿ ಕಳೆದಿದ್ದೇನೆ. ನನ್ನ ಹೇಳಿಕೆಗೆ ಸಂಬಂಧಿಸಿದಂತೆ ಭಾರತೀಯ ಜನರ, ಕ್ರಿಕೆಟ್ ಅಭಿಮಾನಿಗಳ, ಭಾರತ ಕ್ರಿಕೆಟ್ ತಂಡ ಮತ್ತು ವಿಶೇಷವಾಗಿ ವಿರಾಟ್ ಕೊಹ್ಲಿಯಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ಹಾಜ್ ತಿಳಿಸಿದ್ದಾರೆ.
ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯ ನಡುವಿನ 3ನೇ ಟೆಸ್ಟ್‌ನಲ್ಲಿ ಕೊಹ್ಲಿ ಭುಜದ ನೋವಿಗೆಒಳಗಾಗಿದ್ದರು. ಹೀಗಾಗಿ ಧರ್ಮಶಾಲಾದಲ್ಲಿ ನಡೆದ ಅಂತಿಮ ಟೆಸ್ಟ್‌ನಲ್ಲಿ ಆಡಿರಲಿಲ್ಲ. ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬ್ರಾಡ್ ಹಾಜ್ ಕೊಹ್ಲಿಯನ್ನು ಟೀಕಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಭಾರತೀಯ ಕ್ರೀಡಾಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಐಪಿಎಲ್ ಎ. 5ರಿಂದ ಆರಂಭವಾಗಲಿದ್ದು, ಬ್ರಾಡ್ ಹಾಜ್ ಗುಜರಾತ್ ಲಯನ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.