ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗಿಲ್ಲ ಅವಕಾಶ!
Team Udayavani, Feb 26, 2022, 4:43 PM IST
ಚಂಡೀಗಢ: ಮಾರ್ಚ್ 4 ರಿಂದ ಪ್ರಾರಂಭವಾಗುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್‌ಗೆ ಯಾವುದೇ ಪ್ರೇಕ್ಷಕರಿಗೆ ಅವಕಾಶ ನೀಡುವುದಿಲ್ಲ ಎಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸಿಇಒ ದೀಪಕ್ ಶರ್ಮಾ ಖಚಿತಪಡಿಸಿದ್ದಾರೆ. ಹೀಗಾಗಿ ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮುಚ್ಚಿದ ಬಾಗಿಲುಗಳ ಹಿಂದೆ ವಿರಾಟ್ ಕೊಹ್ಲಿ ತಮ್ಮ 100 ನೇ ಟೆಸ್ಟ್ ಪಂದ್ಯವನ್ನು ಆಡಬೇಕಾಗಿದೆ.
ಗಮನಾರ್ಹವೆಂದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಕೊಹ್ಲಿ ತಮ್ಮ 100 ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾವನ್ನು ಭಾರತ ಮೊಹಾಲಿಯಲ್ಲಿ ಎದುರಿಸಲಿದ್ದು, ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
“ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟನ್ನು ಯಾವುದೇ ಪ್ರೇಕ್ಷಕರಿಗೆ ಅನುಮತಿಸದೆ ಮುಚ್ಚಿದ ಬಾಗಿಲಿನ ಹಿಂದೆ ಆಡಲಾಗುತ್ತದೆ” ಎಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸಿಇಒ ದೀಪಕ್ ಶರ್ಮಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ:ರಣಜಿ ಟ್ರೋಫಿ: ಮಗಳ ನಿಧನದ ದುಃಖದ ನಡುವೆಯೂ ಶತಕ ಸಿಡಿಸಿದ ವಿಷ್ಣು ಸೋಲಂಕಿ
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ 2-1 ಅಂತರದಿಂದ ಸೋಲನುಭವಿಸಿದ ನಂತರ, ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದರು. ಇದೀಗ ಮೂರು ಮಾದರಿ ತಂಡಕ್ಕೆ ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ನಾಯಕನಾಗಿ ಮೊದಲ ಟೆಸ್ಟ್ ಪಂದ್ಯವನ್ನು ಅವರು ಲಂಕಾ ವಿರುದ್ಧ ಮೊಹಾಲಿಯಲ್ಲಿ ಆಡಲಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು 68 ಟೆಸ್ಟ್ ಪಂದ್ಯಗಳಲ್ಲಿ 40 ಗೆಲುವು ಕಂಡಿತ್ತು. ಸ್ಟೀವ್ ವಾ, ಡಾನ್ ಬ್ರಾಡ್ಮನ್ ಮತ್ತು ರಿಕಿ ಪಾಂಟಿಂಗ್ ನಂತರ ಕೊಹ್ಲಿ ನಾಲ್ಕನೇ ಅತ್ಯುತ್ತಮ ಗೆಲುವಿನ ಶೇಕಡಾವಾರು ಹೊಂದಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ ತಂಡ 2021 ರಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೇರಿತ್ತು.
ಇದುವರೆಗೆ 99 ಟೆಸ್ಟ್ ಪಂದ್ಯವಾಡಿರುವ ವಿರಾಟ್ ಕೊಹ್ಲಿ 50.4ರ ಸರಾಸರಿಯಲ್ಲಿ 7962 ರನ್ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.