ಟ್ವಿಟರ್‌ನಲ್ಲಿ ಭಾರತ-ಪಾಕಿಸ್ಥಾನ ಶಾಂತಿ ಸಂದೇಶ ಸಾರಿದ ವಕಾರ್
Team Udayavani, Jun 4, 2018, 9:03 AM IST
ಕರಾಚಿ: ಒಂದು ಕಡೆ ಪಾಕಿಸ್ಥಾನ ಗಡಿಯಲ್ಲಿ ಅಪ್ರಚೋದಿತ ಗುಂಡಿದ ದಾಳಿ ಮುಂದುವರಿ ಸುತ್ತಿದ್ದರೆ ಇತ್ತ ಪಾಕಿಸ್ಥಾನದ ಮಾಜಿ ವೇಗಿ ವಕಾರ್ ಯೂನಿಸ್ ಟ್ವಿಟರ್‌ನಲ್ಲಿ ಭಾರತ-ಪಾಕಿಸ್ಥಾನ ಶಾಂತಿ ಸಂದೇಶವನ್ನು ರವಾನಿಸಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಭಾರತದ ಜೆರ್ಸಿ ತೊಟ್ಟ ಬಾಲಕನೊಂದಿಗೆ ಸಂಭಾಷಣೆ ನಡೆಸುತ್ತಿರುವ ಫೋಟೋವೊಂದನ್ನು ವಕಾರ್ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ. ಜತೆಗೆ ಕ್ರಿಕೆಟ್ ವಿಶ್ವಕಪ್‌ಗೆ ಯಾವ ಗಡಿಯ ಮಿತಿಯೂ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನು ಅನೇಕ ಪಾಕ್ ಕ್ರಿಕೆಟ್ ಅಭಿಮಾನಿಗಳು ಹಾಗೂ ಟ್ವಿಟರ್ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.
2019ರಲ್ಲಿ ವಿಶ್ವಕಪ್ ಕ್ರಿಕೆಟ್ ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ನಡೆಯಲಿದೆ. ಪ್ರಸ್ತುತ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ, ಪಾಕ್ ಸೈನಿಕರ ನಿರಂತರ ಗುಂಡಿನ ದಾಳಿ ನಡೆಯುತ್ತಿದೆ. ಇಂಥ ಸಂದರ್ಭದಲ್ಲೇ ವಕಾರ್ ಈ ಸಂದೇಶ ಬಿತ್ತರಿಸಿದ್ದಾರೆ. 2012ರ ಬಳಿಕ ಉಭಯ ರಾಷ್ಟ್ರಗಳ ನಡುವೆ ಯಾವುದೇ ಕ್ರಿಕೆಟ್ ಕೂಟ ನಡೆದಿಲ್ಲ. ಆದರೆ ಮುಂದಿನ ವರ್ಷದ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ಥಾನ ಮುಖಾಮುಖಿ ಆಗುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.