ಕೈಕೊಟ್ಟ ಅದೃಷ್ಟ: ಅಜೇಯರಾದರೂ ಶತಕ ವಂಚಿತ ವಾಷಿಂಗ್ಟನ್, ಭಾರತಕ್ಕೆ ಉತ್ತಮ ಮುನ್ನಡೆ
Team Udayavani, Mar 6, 2021, 11:18 AM IST
ಅಹಮದಾಬಾದ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಉತ್ತಮ ಮುನ್ನಡೆ ಸಾಧಿಸಿದೆ. ಅಜೇಯರಾಗಿ ಉಳಿದರೂ ಬಾಲಗೋಂಚಿಗಳು ಕೈಕೊಟ್ಟ ಕಾರಣ ವಾಷಿಂಗ್ಟನ್ ಸುಂದರ್ ಶತಕ ವಂಚಿತರಾದರು.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ 365 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಇದರೊಂದಿಗೆ 160 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಏಳು ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿದ್ದಲ್ಲಿಂದ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆಲ್ ರೌಂಡರ್ ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ನೆರವಾದರು. ಇವರಿಬ್ಬರೂ 106 ರನ್ ಗಳ ಜೊತೆಯಾಟ ನಡೆಸಿದರು. ಅಕ್ಷರ್ ಪಟೇಲ್ 43 ರನ್ ಗಳಸಿ ರನ್ ಔಟಾದರು.
ಇದನ್ನೂ ಓದಿ:ಪರದಾಡುತ್ತಿದ್ದ ಭಾರತಕ್ಕೆ ಪಂತ್ ಶತಕದಾಸರೆ : ಇಂಗ್ಲೆಂಡ್ ಲೆಕ್ಕಾಚಾರ ಬುಡಮೇಲು
96 ರನ್ ಗಳಿಸಿ ಚೊಚ್ಚಲ ಟೆಸ್ಟ್ ಶತಕದ ಆಸೆಯಲ್ಲಿದ್ದ ವಾಷಿಂಗ್ಟನ್ ಸುಂದರ್ ಗೆ ನಿರಾಸೆಯಾಯಿತು. ಅಕ್ಷರ್ ಪಟೇಲ್ ರನ್ ಔಟ್ ಆದರೆ, ಬೆನ್ನು ಬೆನ್ನಲ್ಲೇ ಇಶಾಂತ್ ಶರ್ಮಾ ಮತ್ತು ಸಿರಾಜ್ ಔಟಾದ ಕಾರಣ ತಂಡ ಆಲ್ ಔಟಾಯಿತು. ಕ್ರೀಸ್ ನ ಮತ್ತೊಂದು ತುದಿಯಲ್ಲಿ ನಿಂತಿದ್ದ ವಾಷಿಂಗ್ಟನ್ ಶತಕ ವಂಚಿತರಾಗಿ ನಿರಾಸೆಯಿಂದ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
ಇಂಗ್ಲೆಂಡ್ ಪರ ಸ್ಟೋಕ್ಸ್ ನಾಲ್ಕು ವಿಕೆಟ್ ಕಬಳಿಸಿದರೆ, ಆ್ಯಂಡರ್ಸನ್ ಮೂರು, ಲೀಚ್ ಎರಡು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.