ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕಾದರೆ ಈ ಸೂತ್ರ ಪಾಲಿಸಿ: ವಾಸಿಂ ಜಾಫರ್ ಸಲಹೆ
Team Udayavani, Dec 24, 2021, 2:32 PM IST
ಮುಂಬೈ: ವಿದೇಶಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಗೆ ಸಿದ್ದತೆ ನಡೆಸುತ್ತಿದೆ. ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಗಳಲ್ಲಿ ಉತ್ತಮ ಪ್ರದರ್ಶನ ತೋರಿರುವ ವಿರಾಟ್ ಕೊಹ್ಲಿ ಬಳಗ ಇದೇ ಮೊದಲ ಬಾರಿಗೆ ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.
2018ರ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನದ ಹೊರತಾಗಿಯೂ ಸರಣಿ ಗೆಲ್ಲಲು ವಿಫಲವಾಗಿತ್ತು. ಈ ಬಾರಿ ಟೆಸ್ಟ್ ಸರಣಿಯನ್ನು ಗೆದ್ದೇ ಗೆಲ್ಲಬೇಕು ಎಂದು ಪಣತೊಟ್ಟಿರುವ ಕೊಹ್ಲಿ ಬಳಗ, ಸದ್ಯ ಸೆಂಚೂರಿಯನ್ ನಲ್ಲಿ ಅಭ್ಯಾಸ ನಡೆಸುತ್ತಿದೆ.
ಇದನ್ನೂ ಓದಿ:ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬೇಕಿತ್ತು.: ನಾಯಕತ್ವ ಬದಲಾವಣೆ ಕುರಿತು ಶಾಸ್ತ್ರಿ ಮಾತು
ಟೀಂ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಅವರು ವಿರಾಟ್ ಕೊಹ್ಲಿ ಬಳಗಕ್ಕೆ ಸಲಹೆ ನೀಡಿದ್ದಾರೆ. “2018 ರಲ್ಲಿ ಭಾರತವು ದಕ್ಷಿಣ ಆಫ್ರಿಕಾದಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ ಒಮ್ಮೆ ಮಾತ್ರ 250+ ರನ್ ಗಳಿಸಿದೆ. ಅದಕ್ಕಾಗಿಯೇ ನಾವು ಎಲ್ಲಾ ಮೂರು ಟೆಸ್ಟ್‌ಗಳಲ್ಲಿ 20 ವಿಕೆಟ್‌ಗಳನ್ನು ಪಡೆದರೂ ಸರಣಿಯನ್ನು ಕಳೆದುಕೊಂಡಿದ್ದೇವೆ. ದ.ಆಫ್ರಿಕಾದಲ್ಲಿ ಹೆಚ್ಚುವರಿ ಬ್ಯಾಟರ್ ಅತ್ಯಗತ್ಯವಾಗಿರುತ್ತದೆ. ನಾನು ಬುಮ್ರಾ, ಶಮಿ, ಸಿರಾಜ್ ಮತ್ತು ಅಶ್ವಿನ್ 4 ಬೌಲರ್‌ಗಳೊಂದಿಗೆ 7+4 ಕಾಂಬಿನೇಶನ್ ನಲ್ಲಿ ಆಡಬೇಕು” ಎಂದು ವಾಸಿಂ ಜಾಫರ್ ‘ಕೂ’ ಮಾಡಿದ್ದಾರೆ.
ಭಾರತ ತಂಡದಲ್ಲಿ ಅನುಭವಿ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ಶ್ರೇಯಸ್ ಅಯ್ಯರ್ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿಯಿದೆ. ಕಳಪೆ ಪ್ರದರ್ಶನದ ಕಾರಣದಿಂದ ರಹಾನೆ ಈಗಾಗಲೇ ಉಪನಾಯಕ ಸ್ಥಾನ ಕಳೆದುಕೊಂಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಪದಾರ್ಪಣೆ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ಕೂಡಾ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.