ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ವೆಸ್ಟ್ ಇಂಡೀಸ್
Team Udayavani, Jul 18, 2022, 2:29 PM IST
ಜಮೈಕಾ: ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಯನ್ನು 3-0 ಅಂತರದಿಂದ ಕಳೆದುಕೊಂಡು ಅವಮಾನ ಅನುಭವಿಸಿದ ವೆಸ್ಟ್ ಇಂಡೀಸ್ ಮುಂದೆ ಭಾರತ ತಂಡವನ್ನು ಎದುರಿಸಲಿದೆ. ಜುಲೈ 22ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟವಾಗಿದೆ.
ಇದೇ ವರ್ಷದ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ತಲಾ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯ ಎಲ್ಲಾ ಪಂದ್ಯಗಳಲ್ಲಿ ವಿಂಡೀಸ್ ಸೋಲನುಭವಿಸಿತ್ತು. ಇದೀಗ ತವರಿನಲ್ಲಿ ಇದರ ಸೇಡು ತೀರಿಸಲು ಪೂರನ್ ಪಡೆ ಸಜ್ಜಾಗಿದೆ.
ಜು.22, 24 ಮತ್ತು 27ರಂದು ಏಕದಿನ ಪಂದ್ಯಗಳು ನಡೆಯಲಿದೆ. ಮೂರೂ ಪಂದ್ಯಗಳು ಟ್ರಿನಿಡಾಡ್ ನ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7 ಗಂಟೆಗೆ ಪಂದ್ಯಗಳು ಆರಂಭವಾಗಲಿದೆ.
ಇದನ್ನೂ ಓದಿ:ಮೊದಲ ಏಕದಿನ ಶತಕದಲ್ಲೇ ಹೊಸ ದಾಖಲೆ ಬರೆದ ರಿಷಭ್ ಪಂತ್
ಭಾರತದ ಏಕದಿನ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಅವರು ಟಿ20 ತಂಡಕ್ಕೆ ಸೇರಿಕೊಳ್ಳಲಿದ್ದಾರೆ.
ವೆಸ್ಟ್ ಇಂಡೀಸ್ ಏಕದಿನ ತಂಡ: ನಿಕೋಲಸ್ ಪೂರನ್ (ನಾ), ಶಮರ್ ಬ್ರೂಕ್ಸ್, ಬ್ರಾಂಡನ್ ಕಿಂಗ್, ರೋಮನ್ ಪೊವೆಲ್, ಕೀಸಿ ಕಾರ್ಟಿ, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ಶಾಯ್ ಹೋಪ್, ಅಕೈಲ್ ಹೋಸೇನ್, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್.
ಭಾರತ ಏಕದಿನ ತಂಡ: ಶಿಖರ್ ಧವನ್ (ನಾ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.