ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ: ತಂಡಕ್ಕೆ ಮರಳಿದ ಹೆಟ್ಮೈರ್, ಒಶಾನೆ ಥೋಮಸ್
Team Udayavani, Jul 25, 2023, 2:35 PM IST
ಬಾರ್ಬಡೋಸ್: ಭಾರತದ ವಿರುದ್ಧದ ಟೆಸ್ಟ್ ಸರಣಿಯನ್ನು ಕಳೆದುಕೊಂಡ ವೆಸ್ಟ್ ಇಂಡೀಸ್ ಸೀಮಿತ ಓವರ್ ಕೂಟಕ್ಕೆ ಸಿದ್ದತೆ ನಡೆಸಿದೆ. ಏಕದಿನ ಸರಣಿಗೆ ತಂಡ ಪ್ರಕಟ ಮಾಡಿದ್ದು, ಶಿಮ್ರನ್ ಹೆಟ್ಮೈರ್ ಮತ್ತು ಒಶಾನೆ ಥೋಮಸ್ ತಂಡಕ್ಕೆ ಮರಳಿದ್ದಾರೆ.
15 ಜನರ ತಂಡ ಪ್ರಕಟ ಮಾಡಲಾಗಿದ್ದು, ಗಾಯದಿಂದ ಹೊರಬಿದ್ದಿದ್ದ ವೇಗದ ಬೌಲರ್ ಜೇಡನ್ ಸೀಲ್ಸ್ ಮತ್ತು ಲೆಗ್ಸ್ಪಿನ್ನರ್ ಯಾನಿಕ್ ಕ್ಯಾರಿಯಾ ಮತ್ತು ಎಡಗೈ ಸ್ಪಿನ್ನರ್ ಗುಡಾಕೇಶ್ ಮೋಟಿ ಅವರು ತಂಡಕ್ಕೆ ಮರಳಿದ್ದಾರೆ.
ಮಾಜಿ ನಾಯಕರಾದ ನಿಕೋಲಸ್ ಪೂರನ್ ಮತ್ತು ಜೇಸನ್ ಹೋಲ್ಡರ್ ಆಯ್ಕೆಗೆ ಅಲಭ್ಯರಾಗಿದ್ದರೆ, ಗಾಯಗೊಂಡ ಆಲ್ ರೌಂಡರ್ ಕೀಮೊ ಪೌಲ್ ಸರಣಿ ತಪ್ಪಿಸಿಕೊಂಡಿದ್ದಾರೆ.
ಜುಲೈ 27 ರಂದು ಸರಣಿ ಪ್ರಾರಂಭವಾಗಲಿದ್ದು, ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ನಲ್ಲಿ ಮೊದಲ ಎರಡು ಪಂದ್ಯಗಳು ನಡೆಯಲಿದೆ. ಮೂರನೇ ಪಂದ್ಯವು ಟ್ರಿನಿಡಾಡ್ ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದೆ.
ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ), ರೋವ್ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋಟಿ, ಜೇಯ್ಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್, ಒಶಾನೆ ಥೋಮಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.