1st ODI;ಕುಲದೀಪ್‌ ದಾಳಿಗೆ ಕುಸಿದ ವೆಸ್ಟ್‌ ಇಂಡೀಸ್‌: ಭಾರತಕ್ಕೆ 5 ವಿಕೆಟ್ ಗಳ ಜಯ


Team Udayavani, Jul 27, 2023, 11:18 PM IST

1-asdad

ಬ್ರಿಡ್ಜ್ಟೌನ್‌: ವೆಸ್ಟ್‌ ಇಂಡೀಸ್‌ ವಿರುದ್ಧ ಗುರುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್ ಗಳ ಜಯ ಸಾಧಿಸಿದೆ.

ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಕುಲದೀಪ್‌, ಜಡೇಜ ಸಹಿತ ಬೌಲರ್‌ಗಳ ಅಮೋಘ ದಾಳಿಗೆ ತತ್ತರಿಸಿದ ಆತಿಥೇಯ ತಂಡವು ಕೇವಲ 23 ಓವರ್‌ಗಳಲ್ಲಿ 114 ರನ್ನಿಗೆ ಆಲೌಟಾಯಿತು.

ಗುರಿ ಬೆನ್ನಟ್ಟಿದ ಭಾರತ 22.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಜಯ ಸಾಧಿಸಿತು. ಇಶಾನ್ ಕಿಶನ್ 52, ಗಿಲ್ 7, ಸೂರ್ಯಕುಮಾರ್19, ಹಾರ್ದಿಕ್ ಪಾಂಡ್ಯ (ರನೌಟ್)5,ಶಾರ್ದೂಲ್ ಠಾಕೂರ್ 1 ರನ್ ಗಳಿಸಿ ಔಟಾದರು.ರವೀಂದ್ರ ಜಡೇಜಾ ಔಟಾಗದೆ 16 ಮತ್ತು 6 ನೇ ವಿಕೆಟ್ ಗೆ ಬ್ಯಾಟಿಂಗ್ ಗೆ ಇಳಿದ ರೋಹಿತ್ ಶರ್ಮಾ ಔಟಾಗದೆ 12 ರನ್ ಗಳಿಸಿದರು.

ಹೋಪ್‌ ಆಸರೆ
ಭಾರತೀಯ ದಾಳಿಗೆ ವೆಸ್ಟ್‌ಇಂಡೀಸ್‌ ಆರಂಭದಿಂದಲೇ ಕುಸಿಯತೊಡಗಿತು. ಮೊತ್ತ 7 ತಲುಪಿದಾಗ ಆರಂಭಿಕ ಕೈಲ್‌ ಮೇಯರ್ ಔಟಾದರು. ಆಬಳಿಕ ಬ್ರ್ಯಾಂಡನ್‌ ಕಿಂಗ್‌ ಮತ್ತು ಅಲಿಕ್‌ ಅಥನಾಝ್ ದ್ವಿತೀಯ ವಿಕೆಟಿಗೆ 38 ರನ್‌ ಪೇರಿಸಿ ತಂಡವನ್ನು ಆಧರಿಸುವ ಪ್ರಯತ್ನ ನಡೆಸಿದರು. ಈ ಜೋಡಿಯನ್ನು ಮುಕೇಶ್‌ ಮುರಿದರು. ಅದೇ ಮೊತ್ತಕ್ಕೆ ಬ್ರ್ಯಾಂಡನ್‌ ಕೂಡ ಔಟಾದ ಕಾರಣ ತಂಡ ಒತ್ತಡಕ್ಕೆ ಬಿತ್ತು.

ನಾಯಕ ಶೈ ಹೋಪ್‌ ಮತ್ತು ಅನುಭವಿ ಶಿಮ್ರನ್‌ ಹೆಟ್‌ಮೈರ್‌ ನಾಲ್ಕನೇ ವಿಕೆಟಿಗೆ ಮತ್ತೆ 43 ರನ್‌ ಪೇರಿಸಿದರು. ಈ ಹಂತದಲ್ಲಿ 11 ರನ್‌ ಗಳಿಸಿದ ಹೈಟ್‌ಮೈರ್‌ ಅವರನ್ನು ಜಡೇಜ ಕ್ಲೀನ್‌ಬೌಲ್ಡ್‌ ಮಾಡಿಸಿದರು. ಆಬಳಿಕ ಹೋಪ್‌ ಮಾತ್ರ ವಿಂಡೀಸ್‌ನ ಆಸರೆಯಾದರು. ಉಳಿದವರು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ವಿಫ‌ಲರಾದರು. ಜಡೇಜ ಹಾಗೂ ಕುಲದೀಪ್‌ ಯಾದವ್‌ ಅವರ ನಿಖರ ಸ್ಪಿನ್‌ ದಾಳಿಗೆ ತತ್ತರಿಸಿದ ವಿಂಡೀಸ್‌ ಆಟಗಾರರು 114 ರನ್‌ ತಲಪುವಷ್ಟರಲ್ಲಿ ಆಲೌಟಾದರು.

45 ಎಸೆತ ಎದುರಿಸಿದ ಹೋಪ್‌ 43 ರನ್‌ ಗಳಿಸಿ ಕುಲದೀಪ್‌ಗೆ ವಿಕೆಟ್‌ ಒಪ್ಪಿಸಿದರು. 4 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದರು. ಉತ್ತಮ ಸ್ಪಿನ್‌ ಸಂಘಟಿಸಿದ ಕುಲದೀಪ್‌ ತನ್ನ ಮೂರು ಓವರ್‌ಗಳ ದಾಳಿಯಲ್ಲಿ ಕೇವಲ 6 ರನ್‌ ನೀಡಿ ನಾಲ್ಕು ವಿಕೆಟ್‌ ಉರುಳಿಸಿದರು. ರವೀಂದ್ರ ಜಡೇಜ 37 ರನ್ನಿಗೆ 3 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರು:
ವೆಸ್ಟ್‌ಇಂಡೀಸ್‌ 23 ಓವರ್‌ಗಳಲ್ಲಿ 114 ಆಲೌಟ್‌ (ಅಲಿಕ್‌ ಅಥನಾಝ್ 22, ಶೈ ಹೋಪ್‌ 43, ರವೀಂದ್ರ ಜಡೇಜ 33ಕ್ಕೆ 3, ಕುಲದೀಪ್‌ ಯಾದವ್‌ 6ಕ್ಕೆ 4). ಭಾರತ 22.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್

ಟಾಪ್ ನ್ಯೂಸ್

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

putin (2)

Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.