ಕಠಿಣ ಶಿಕ್ಷೆಯಿಂದ ಪಾರಾದ ವಿನೇಶ್ ಫೊಗಾಟ್
Team Udayavani, Aug 26, 2021, 9:43 PM IST
ನವದೆಹಲಿ: ಅಶಿಸ್ತಿನಿಂದ ಅಮಾನತಿಗೆ ಒಳಗಾಗಿದ್ದ ಪ್ರತಿಭಾನ್ವಿತ ಕುಸ್ತಿಪಟುಗಳಾದ ವಿನೇಶ್ ಫೊಗಾಟ್, ಸೋನಂ ಮತ್ತು ದಿವ್ಯಾ ಈಗ ನಿರಾಳರಾಗಿದ್ದಾರೆ. ಅವರಿಗೆ ಎಚ್ಚರಿಕೆ ನೀಡಿ ಶಿಕ್ಷೆಯನ್ನು ಹಿಂಪಡೆಯಲಾಗಿದೆ ಎಂದು ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ) ತಿಳಿಸಿದೆ.
ಟೋಕ್ಯೊ ಒಲಿಂಪಿಕ್ಸ್ ವೇಳೆ ವಿನೇಶ್ ಸಹವರ್ತಿಗಳೊಡನೆ ವಾಸ್ತವ್ಯ ಹೂಡಲು ನಿರಾಕರಿಸಿದ್ದರು. ಜತೆಗೆ ಪಂದ್ಯದ ವೇಳೆ ತಂಡದ ಪ್ರಾಯೋಜಕರು ನೀಡಿದ್ದ ಜೆರ್ಸಿಯನ್ನು ಧರಿಸದೆ ಬೇರಾವುದೋ ಜೆರ್ಸಿಯನ್ನು ತೊಟ್ಟಿದ್ದರು. ಹೀಗಾಗಿ ಅವರನ್ನು ಡಬ್ಲ್ಯುಎಫ್ಐ ಅಮಾನತು ಮಾಡಿತ್ತು.
ಇದೀಗ ಡಬ್ಲ್ಯುಎಫ್ಐ ವಿಚಾರಣೆ ಮುಗಿಸಿದ್ದು, ವಿನೇಶ್ ಜತೆ ಕುಸ್ತಿಪಟುಗಳಾದ ಸೋನಂ ಮತ್ತು ದಿವ್ಯಾ ಅವರಿಗೂ ಅಶಿಸ್ತು ತೋರದಂತೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಇಂಥ ಘಟನೆ ಮರುಕಳಿಸಿದಲ್ಲಿ ಆಜೀವ ನಿಷೇಧ ಹೇರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.