WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?
Team Udayavani, Jun 3, 2023, 6:38 PM IST
ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.
ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.
ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.
ಇದನ್ನೂ ಓದಿ:India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್‌ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.