ಟಿ20 ವಿಶ್ವಕಪ್ ಗೆ ಯುಜಿ ಚಾಹಲ್ ಆಯ್ಕೆ ಯಾಕಿಲ್ಲ: ಕಾರಣ ಹೇಳಿದ ಆಯ್ಕೆ ಸಮಿತಿ ಮುಖ್ಯಸ್ಥ
Team Udayavani, Sep 9, 2021, 3:16 PM IST
ಮುಂಬೈ: ಅಕ್ಟೋಬರ್ ನಲ್ಲಿ ಯುಎಇ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ ನಾಯಕತ್ವದ ತಂಡಕ್ಕೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಾರ್ಗದರ್ಶಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಬಿಸಿಸಿಐ ತಂಡವನ್ನು ಪ್ರಕಟ ಮಾಡಿದೆ.
ತಂಡದಲ್ಲಿನ ಕೆಲವು ಹೆಸರುಗಳು ಅಚ್ಚರಿಗಳಿಗೆ ಕಾರಣವಾಗಿದೆ. ಅದರಲ್ಲಿ ಪ್ರಮುಖವಾಗಿದ್ದು ಕೆಲವು ವರ್ಷಗಳಿಂದ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದ ಯುಜುವೇಂದ್ರ ಚಾಹಲ್ ಅವರ ಅವಗಣನೆ. ತಂಡದಲ್ಲಿ ಯುವ ಸ್ಪಿನ್ನರ್ ಗಳಾದ ರಾಹುಲ್ ಚಹರ್, ವರುಣ್ ಚಕ್ರವರ್ತಿಗೆ ಅವಕಾಶ ನೀಡಲಾಗಿದ್ದು, ಯುಜಿ ಚಾಹಲ್ ರನ್ನು ಕೈಬಿಡಲಾಗಿದೆ.
ಇದನ್ನೂ ಓದಿ:ಟೀಂ ಇಂಡಿಯಾ ಮೆಂಟರ್ ಆಗಿ ಧೋನಿ ಆಯ್ಕೆಯಾಗಿದ್ದು ಹೇಗೆ? ಏನಿದು ಬಿಸಿಸಿಐ ತಂತ್ರ
ಚಾಹಲ್ ರನ್ನು ಕೈಬಿಟ್ಟ ವಿಚಾರ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಆದರೆ ಇದಕ್ಕೆ ಕಾರಣವನ್ನು ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಹೇಳಿದ್ದಾರೆ. ನಾವು ಯುಜುವೇಂದ್ರ ಚಹಲ್ ಬಗ್ಗೆ ಚರ್ಚಿಸಿದ್ದೇವೆ. ನಮಗೆ ವೇಗವಾಗಿ ಬಾಲ್ ಹಾಕುವ ಸ್ಪಿನ್ನರ್ ಬೇಕಾಗಿತ್ತು. ಇತ್ತೀಚೆಗೆ ರಾಹುಲ್ ಚಾಹರ್ ಬೌಲಿಂಗ್, ಅವರು ಬೌಲ್ ಮಾಡುವ ವೇಗವನ್ನು ನೋಡಿದಂತೆ, ನಮಗೆ ಅಂತಹ ಆಟಗಾರ ಬೇಕು ಎಂದು ಆಯ್ಕೆಗಾರರು ಭಾವಿಸಿದ್ದರು. ಚಹಲ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು, ಆದರೆ ನಾವು ರಾಹುಲ್ ಚಹರ್ ರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ.ಎಲ್.ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ರಾಹುಲ್ ಚಹರ್, ಆರ್.ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಹೆಚ್ಚುವರಿ ಆಟಗಾರರು: ಶಾರ್ದೂಲ್ ಠಾಕೂರ್, ಶ್ರೇಯಸ್ ಐಯ್ಯರ್, ದೀಪಕ್ ಚಹರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.