Mumbai Indians ತೊರೆಯುತ್ತಾರಾ ಬುಮ್ರಾ? ಇನ್ಸ್ಟಾಗ್ರಾಮ್ ಸ್ಟೋರಿಯ ಅರ್ಥವೇನು?
Team Udayavani, Nov 28, 2023, 3:58 PM IST
ಮುಂಬೈ: ಐಪಿಎಲ್ ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೇಡಿಂಗ್ ಮಾತುಕತೆಗಳು ಇನ್ನೂ ನಡೆಯುತ್ತಿವೆ. ಅತ್ಯಂತ ಅಚ್ಚರಿಯ ಟ್ರೇಡಿಂಗ್ ನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ತಂಡ ಸೇರಿದ್ದಾರೆ. ಇದರ ಬಳಿಕ ಮುಂಬೈ ಕ್ಯಾಂಪ್ ನಲ್ಲಿದ್ದ ಕ್ಯಾಮರೂನ್ ಗ್ರೀನ್ ಅವರು ಬೆಂಗಳೂರು ತಂಡಕ್ಕೆ ಸೇರಿಕೊಂಡಿದ್ದಾರೆ.
ಇದೀಗ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ ಒಂದು ಭಾರೀ ಚರ್ಚೆಗೆ ಕಾರಣವಾಗಿದೆ. ಜಸ್ಪ್ರೀತ್ ಬುಮ್ರಾ ಅವರು ಇನ್ಸ್ಟಾಗ್ರಾಮ್ ನಲ್ಲಿ Silence is sometimes the best answer ಎಂದು ಸ್ಟೋರಿ ಹಾಕಿದ್ದಾರೆ. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಹಾರ್ದಿಕ್ ಪಾಂಡ್ಯ ಮುಂಬೈಗೆ ಮರಳಿದ ವಿಚಾರಕ್ಕೆ ಈ ಸ್ಟೋರಿಯನ್ನು ಅಭಿಮಾನಿಗಳು ಲಿಂಕ್ ಮಾಡುತ್ತಿದ್ದಾರೆ. ಪಾಂಡ್ಯ ವಾಪಸಾತಿಯಿಂದ ಬುಮ್ರಾ ಸಂತಸಗೊಂಡಿಲ್ಲ ಅಥವಾ ಮುಂಬೈ ಇಂಡಿಯನ್ಸ್ ಕ್ಯಾಂಪ್ ನಿಂದ ಬುಮ್ರಾ ಹೊರ ನಡೆದಿದ್ದಾರೆ ಎಂಬ ಭಾವನೆ ಅಭಿಮಾನಿಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.
Jasprit Bumrah’s Instagram story. pic.twitter.com/EgpAirzwai
— Mufaddal Vohra (@mufaddal_vohra) November 28, 2023
ಅಷ್ಟೇ ಅಲ್ಲದೆ ಮುಂಬೈ ಇಂಡಿಯನ್ಸ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಬುಮ್ರಾ ಅನ್‌ಫಾಲೋ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಆದರೆ ಸತ್ಯವೆಂದರೆ ಬುಮ್ರಾ ಅವರು ಮುಂಬೈ ಫ್ರಾಂಚೈಸಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಈ ಹಿಂದೆಯೂ ಫಾಲೋ ಮಾಡುತ್ತಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.