ವಿಂಬಲ್ಡನ್‌: ಅಜರೆಂಕಾ,ವೊಜ್ನಿಯಾಕಿ ಪ್ರೀಕ್ವಾರ್ಟರ್‌ಗೆ

Team Udayavani, Jul 8, 2017, 3:45 AM IST

Caroline-Wozniacki,.jpg

ಲಂಡನ್‌: ಮಾಜಿ ನಂ.1 ಶ್ರೇಯಾಂಕಿತ ಆಟಗಾರ್ತಿಯರಾದ ವಿಕ್ಟೋರಿಯಾ ಅಜರೆಂಕಾ ಮತ್ತು ಕ್ಯಾರೊಲಿನಾ ವೋಜ್ನಿಯಾಕಿ ವಿಂಬಲ್ಡನ್‌ ಸಿಂಗಲ್ಸ್‌ನಲ್ಲಿ ಪ್ರೀಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಆದರೆ ವಿಶ್ವ ನಂ.6 ಶ್ರೇಯಾಂಕಿತ ಸ್ಲೊವೇಕಿಯಾದ ಡೊಮಿನಿಕಾ ಸಿಬುಲ್ಕೊವಾ ಸೋಲುಂಡಿದ್ದಾರೆ.

ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಲಾರಸ್‌ನ ಅಜರೆಂಕಾ 3-6, 6-1, 6-4 ರಿಂದ ಇಂಗ್ಲೆಂಡ್‌ನ‌ ಹೆದರ್‌ ವಾಟ್ಸನ್‌ ವಿರುದ್ಧ ಜಯಸಾಧಿಸಿ ಪ್ರೀಕ್ವಾರ್ಟರ್‌ಗೆ ಪ್ರವೇಶಿಸಿದರು. ಮೊದಲ ಸೆಟ್‌ ಕಳೆದುಕೊಂಡ ಅಜರೆಂಕಾ 2 ಮತ್ತು 3ನೇ ಸೆಟ್‌ನಲ್ಲಿ ಗೆದ್ದು ಮೇಲುಗೈ ಸಾಧಿಸಿದರು.

ಮಹಿಳೆಯರ ಮತ್ತೂಂದು ಸಿಂಗಲ್ಸ್‌ನಲ್ಲಿ ಡೆನ್ಮಾರ್ಕ್‌ನ ಕ್ಯಾರೊಲಿನಾ ವೋಜ್ನಿಯಾಕಿ 6-3, 6-4 ರಿಂದ ಬಲ್ಗೇರಿಯಾದ ಟಿಸ್ವೆಟಾನಾ ಪಿರಂಕೊವಾ ವಿರುದ್ಧ ಸುಲಭ ಜಯ ಸಾಧಿಸಿದರು. ಎರಡೂ ಸೆಟ್‌ನಲ್ಲಿ ಭರ್ಜರಿ ಹೋರಾಟ ಪ್ರದರ್ಶಿಸಿದ ಒಜ್ನಿಯಾಕಿ ಯಾವುದೇ ಹಂತದಲ್ಲಿಯೂ ಎದುರಾಳಿಗೆ ಮೇಲುಗೈ ಸಾಧಿಸಲು ಅವಕಾಶ ನೀಡದೇ ನೇರ ಸೆಟ್‌ನಲ್ಲಿಯೇ ಜಯಗಳಿಸಿದರು. 3ನೇ ಸುತ್ತಿನ ಇನ್ನೊಂದು ಸಿಂಗಲ್ಸ್‌ನಲ್ಲಿ ಭರ್ಜರಿ ಫಾರ್ಮ್ನಲ್ಲಿದ್ದ ಸಿಬುಲ್ಕೊವಾ 6-7(3-7), 6-3, 4-6ರಿಂದ ಕ್ರೊವೇಷ್ಯಾದ 29ನೇ ಶ್ರೇಯಾಂಕಿತ ಅನಾ ಕೊಂಜು ವಿರುದ್ಧ ಆಘಾತಕೊಳಗಾದರು.

ನಿಶಿಕೋರಿಗೆ ಆಘಾತಕಾರಿ ಸೋಲು: ಪುರುಷರ ಸಿಂಗಲ್ಸ್‌ನಲ್ಲಿ ಏಷ್ಯಾದ ನಂ.1 ಆಟಗಾರ ಜಪಾನಿನ ಕೀ ನಿಶಿಕೋರಿ ಆಘಾತಕಾರಿ ಸೋಲು ಕಂಡಿದ್ದಾರೆ.  3ನೇ ಸುತ್ತಿನ ಪಂದ್ಯದಲ್ಲಿ ಬಟಿಸ್ಟಾ ವಿರುದ್ಧ 6-4, 7-6(7-3), 3-6, 6-3ರಿಂದ ಜಪಾನಿನ ಕೀ ನಿಶಿಕೊರಿ ಪರಾಜಯಗೊಂಡರು. ಗೆದ್ದ ಬಟಿಸ್ಟಾ ಪ್ರೀಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. ಮತ್ತೂಂದು ಪಂದ್ಯದಲ್ಲಿ ಮುಲ್ಲರ್‌ 7-6(7-4), 7-5, 6-4ರಿಂದ ಅಲ್‌ಜಾಜ್‌ ಬೆಡೆನೆ ವಿರುದ್ಧ ಗೆಲುವು ಪಡೆದು ಪ್ರೀಕ್ವಾರ್ಟರ್‌ಗೆ ಲಗ್ಗೆ ಹಾಕಿದ್ದಾರೆ.

ಫೆಡರರ್‌ 3ನೇ ಸುತ್ತಿಗೆ: ಮಾಜಿ ವಿಶ್ವ ನಂ.1 ಶ್ರೇಯಾಂಕಿತ, 18 ಗ್ರ್ಯಾನ್‌ಸ್ಲಾಮ್‌ ವಿಜೇತ ರೋಜರ್‌ ಫೆಡರರ್‌ 3ನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಪುರುಷರ 2ನೇ ಸುತ್ತಿನ ಪಂದ್ಯದಲ್ಲಿ ಸ್ವಿಸ್‌ನ ಫೆಡರರ್‌ 7-6(7-0), 6-3, 6-2 ರಿಂದ ಸರ್ಬಿಯಾದ ಡುಸಾನ್‌ ಲಾಜೊವಿಚ್‌ ವಿರುದ್ಧ ಜಯ ಸಾಧಿಸಿ 3ನೇ ಸುತ್ತಿಗೆ ಪ್ರವೇಶಿಸಿದರು. ಮೊದಲ ಸೆಟ್‌ನಲ್ಲಿ ಫೆಡರರ್‌ಗೆ ಸ್ಪರ್ಧೆ ಕಂಡುಬಂತು. ಆದರೂ ಅಂತಿಮವಾಗಿ ಮೇಲುಗೈ ಸಾಧಿಸಿದರು. 2 ಮತ್ತು 3ನೇ ಸೆಟ್‌ ಅನ್ನು ಸುಲಭವಾಗಿ ವಶಪಡಿಸಿಕೊಂಡು ಮುಂದಿನ ಹಂತಕ್ಕೆ ಪ್ರವೇಶಿಸಿದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.