ಭಾರತ -ಮಲೇಶ್ಯ ವನಿತಾ ಹಾಕಿ ಸರಣಿ
Team Udayavani, Apr 2, 2019, 6:02 AM IST
ಹೊಸದಿಲ್ಲಿ: ಭಾರತದ ವನಿತಾ ಹಾಕಿ ತಂಡ ಮಲೇಶ್ಯ ವಿರುದ್ಧ 5 ಪಂದ್ಯಗಳ ಸರಣಿಗಾಗಿ ಕೌಲಾಲಂಪುರಕ್ಕೆ ಪಯಣ ಬೆಳೆಸಲಿದೆ.
ಇದೇ ಗುರುವಾರ ಸರಣಿಯ ಮೊದಲ ಪಂದ್ಯ ನಡೆಯಲಿದ್ದು, ಭಾರತ ತಂಡವನ್ನು ಗೋಲ್ ಕೀಪರ್ ಸವಿತಾ ಮುನ್ನಡೆಸಲಿದ್ದಾರೆ. ಇದು ಜೂನ್ನಲ್ಲಿ ನಡೆಯಲಿರುವ ಎಫ್ಐಎಚ್ ಸಿರೀಸ್ ಫೈನಲ್ ಕೂಟಕ್ಕೆ ತರಬೇತಿಯಾಗಿರಲಿದೆ.
“ಈ ವರ್ಷದ ಆರಂಭದಲ್ಲಿ ಸ್ಪೇನ್ ಹಾಗೂ ಐರ್ಲೆಂಡ್ ವಿರುದ್ಧ ಸರಣಿಯಲ್ಲಿ ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ. ಮಲೇಶ್ಯಕ್ಕೂ ಇದೇ ಆತ್ಮವಿಶ್ವಾಸದಿಂದ ಪಯಣ ಬೆಳೆಸಲಿದ್ದು, ಸ್ಪೇನ್ ಪ್ರವಾಸ ವೇಳೆ ನಾವು ಅರಿತುಕೊಂಡ ತಪ್ಪುಗಳನ್ನು ಸರಿಪಡಿಸಿಕೊಂಡು ಆಡಲಿಳಿಯಲಿದ್ದೇವೆ. ಸದ್ಯ ನಾವು ಆಡುತ್ತಿರುವ ಎಲ್ಲ ಸರಣಿಗಳೂ 2020ರ ಟೋಕಿಯೊ ಒಲಿಂಪಿಕ್ಸ್ ಅರ್ಹತಾ ಸುತ್ತಿನ ಅಭ್ಯಾಸಗಳಾಗಿವೆ. ತಂಡ ಮತ್ತು ವೈಯಕ್ತಿಕ ಪ್ರದರ್ಶನವನ್ನು ಇನ್ನಷ್ಟು ಬಲಿಷ್ಠ ಗೊಳಿಸುವತ್ತ ಗಮನಹರಿಸಲಿದ್ದೇವೆ. ಸದ್ಯ ತಂಡವು ಸಮತೋಲನದಿಂದ ಕೂಡಿದ್ದು, ಕೆಲವು ಯುವ ಆಟಗಾರ್ತಿಯರಿಗೆ ಅವಕಾಶ ದೊರಕಿದೆ’ ಎಂದು ನಾಯಕಿ ಸವಿತಾ ಹೇಳಿದರು.
ಗಾಯಾಳುಗಳಾಗಿರುವ ರಾಣಿ, ನಮಿತಾ ಟೊಪ್ಪೊ, ಗುರ್ಜೀತ್ ಕೌರ್ ಮೊದಲಾದ ಪ್ರಮುಖ ಆಟಗಾರ್ತಿಯರು ಈ ಸರಣಿಯಿಂದ ಹೊರಗುಳಿಯದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್ಗೆ ಸಿಗುವುದು 18.90 ಕೋಟಿ ಮಾತ್ರ!
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್ಸಿಬಿಗೆ ಹೃದಯಸ್ಪರ್ಶಿ ಸಂದೇಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.