ವನಿತೆಯರ ಏಕದಿನ ರ್‍ಯಾಂಕಿಂಗ್: 7ನೇ ಸ್ಥಾನದಲ್ಲಿ ಮಿಥಾಲಿ ರಾಜ್
Team Udayavani, Jun 7, 2022, 11:05 PM IST
ದುಬಾೖ: ಮಂಗಳವಾರ ಬಿಡುಗಡೆಗೊಂಡ ನೂತನ ಐಸಿಸಿ ವನಿತೆಯರ ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರತದ ಆಟಗಾರ್ತಿ ಮಿಥಾಲಿ ರಾಜ್ ತನ್ನ ಏಳನೇ ಸ್ಥಾನವನ್ನು ಉಳಿಸಿಕೊಂಡಿದ್ದರೆ ಸ್ಮತಿ ಮಂಧಾನ 9ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ರ್‍ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ರೇಲಿಯದ ಅಲಿಸ್ಸಾ ಹೀಲಿ ಅಗ್ರಸ್ಥಾನದಲ್ಲಿದ್ದರೆ ಇಂಗ್ಲೆಂಡಿನ ನಟಾಲಿಯೆ ಸಿವೆರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಅವರಿಬ್ಬರು ಈ ವರ್ಷವೇ ನ್ಯೂಜಿಲ್ಯಾಂಡ್‌ನಲ್ಲಿ ನಡೆದ ವನಿತೆಯರ ವಿಶ್ವಕಪ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.
ಬೌಲಿಂಗ್ ಪಟ್ಟಿಯಲ್ಲಿ ಭಾರತದ ಖ್ಯಾತ ವೇಗಿ ಜೂಲನ್ ಗೋಸ್ವಾಮಿ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಶ್ರೇಷ್ಠ ನಿರ್ವಹಣೆ ದಾಖಲಿಸಿದ್ದ ಪಾಕಿಸ್ಥಾನದ ಖ್ಯಾತ ಆರಂಭಿಕ ಆಟಗಾರ್ತಿ ಸಿದ್ರಾ ಅಮೀನ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ತನ್ನ ಸ್ಥಾನವನ್ನು ಉತ್ತಮಪಡಿಸಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 123 ರನ್ ಬಾರಿಸಿ ಜಯದ ರೂವಾರಿಯಾಗಿ ಕಾಣಿಸಿಕೊಂಡಿದ್ದ ಸಿದ್ರಾ ಅಮೀನ್ ಒಟ್ಟಾರೆ ಸರಣಿಯಲ್ಲಿ 72.66 ಸರಾಸರಿಯಂತೆ 218 ರನ್ ಗಳಿಸಿದ್ದರು. ಈ ಸಾಧನೆಯಿಂದಾಗಿ 30ರ ಹರೆಯದ ಅವರು 19 ಸ್ಥಾನ ಮೇಲಕ್ಕೇರಿದ್ದು ತನ್ನ ಜೀವನಶ್ರೇಷ್ಠ 35ನೇ ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾದ ನಾಯಕಿ ಚಮರಿ ಅತ್ತಪತ್ತು ಕೂಡ ರ್‍ಯಾಂಕಿಂಗ್‌ನಲ್ಲಿ ಗಮನಾರ್ಹ ಪ್ರಗತಿ ಕಂಡಿದ್ದಾರೆ. 6 ಸ್ಥಾನ ಮೇಲಕ್ಕೇರಿರುವ ಅವರು 23ನೇ ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡಿನ ಸೋಫಿ ಎಕ್ಲೆಸ್ಟೋನ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಶಬಿ°ಮ್ ಇಸ್ಮಾಯಿಲ್ ಮತ್ತು ಆಸ್ಟ್ರೇಲಿಯದ ಜೆಸ್ ಜೋನಾಸ್ಸೆನ್ ಅನುಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.