Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್ ಜಯ
Team Udayavani, Apr 29, 2024, 1:06 AM IST
ಸಿಲ್ಹೆಟ್ (ಬಾಂಗ್ಲಾದೇಶ): ಬಾಂಗ್ಲಾದೇಶ ವಿರುದ್ಧದ ವನಿತಾ ಟಿ20 ಸರಣಿಯನ್ನು ಭಾರತ ಗೆಲುವಿನೊಂದಿಗೆ ಆರಂಭಿಸಿದೆ. ರವಿವಾರ ನಡೆದ ಮೊದಲ ಪಂದ್ಯವನ್ನು 44 ರನ್ನುಗಳಿಂದ ತನ್ನದಾಗಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಭಾರತ 7 ವಿಕೆಟಿಗೆ 145 ರನ್ ಮಾಡಿದರೆ, ಬಾಂಗ್ಲಾ 8 ವಿಕೆಟಿಗೆ ಕೇವಲ 101 ರನ್ ಗಳಿಸಿತು.
ಭಾರತದ ಪರ ಯಾಸ್ತಿಕಾ ಭಾಟಿಯಾ 36, ಶಫಾಲಿ ವರ್ಮ 31, ನಾಯಕಿ ಹರ್ಮನ್ಪ್ರೀತ್ ಕೌರ್ 30 ಹಾಗೂ ರಿಚಾ ಘೋಷ್ 23 ರನ್ ಮಾಡಿದರು.
ಚೇಸಿಂಗ್ ವೇಳೆ ಬಾಂಗ್ಲಾ ನಾಯಕಿ ನಿಗಾರ್ ಸುಲ್ತಾನಾ ಏಕಾಂಗಿಯಾಗಿ ಹೋರಾಡಿ ಈ ಪಂದ್ಯದ ಏಕೈಕ ಅರ್ಧ ಶತಕ ದಾಖಲಿಸಿದರು (51). ಭಾರತ ಸಾಂ ಕ ಬೌಲಿಂಗ್ ದಾಳಿಯ ಮೂಲಕ ಗಮನ ಸೆಳೆಯಿತು. ರೇಣುಕಾ ಠಾಕೂರ್ ಸಿಂಗ್ 3, ಪೂಜಾ ವಸ್ತ್ರಾಕರ್ 2, ಶ್ರೇಯಾಂಕಾ ಪಾಟೀಲ್, ದೀಪ್ತಿ ಶರ್ಮ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಉರುಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.