ವನಿತಾ ಟಿ20 ವಿಶ್ವಕಪ್: ಕೌರ್ ನಾಯಕಿ; ರಿಚಾ ಘೋಷ್ ಹೊಸಮುಖ
Team Udayavani, Jan 13, 2020, 5:30 AM IST
ಮುಂಬಯಿ: ಫೆಬ್ರವರಿ 21ರಿಂದ ಆಸ್ಟ್ರೇಲಿಯ ಆತಿಥ್ಯದಲ್ಲಿ ಆರಂಭವಾಗಲಿರುವ ವನಿತಾ ಟಿ20 ವಿಶ್ವಕಪ್ ಪಂದ್ಯಾವಳಿಗೆ ರವಿವಾರ ಭಾರತ ತಂಡವನ್ನು ಪ್ರಕಟಿಸಲಾಯಿತು. 15 ಸದಸ್ಯರ ಪಡೆಯನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಬಂಗಾಲದ ಬೀಸು ಹೊಡೆತಗಳ ಆಟಗಾರ್ತಿ ರಿಚಾ ಘೋಷ್ ಈ ತಂಡದ ಏಕೈಕ ಹೊಸಮುಖವಾಗಿದ್ದಾರೆ.
ತಂಡದಲ್ಲಿ ಕರ್ನಾಟಕದ ಇಬ್ಬರು ಕ್ರಿಕೆಟಿಗರಿದ್ದಾರೆ. ಇವರೆಂದರೆ, ಮಧ್ಯಮ ಕ್ರಮಾಂಕದ ಆಟಗಾರ್ತಿ, ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಮತ್ತು ವಿಜಯಪುರದ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್.
ವನಿತಾ ಕ್ರಿಕೆಟಿನ ನವತಾರೆ, ಹರ್ಯಾಣದ 15ರ ಹರೆಯದ ವಿದ್ಯಾರ್ಥಿನಿ ಶಫಾಲಿ ವರ್ಮ ಈ ತಂಡ ದಲ್ಲಿ ಸ್ಥಾನ ಸಂಪಾದಿಸಿದ್ದಾರೆ. ಅವರು ವಿಶ್ವ ಮಟ್ಟದ ಪಂದ್ಯಾವಳಿಯಲ್ಲಿ ಭಾರತವನ್ನು ಮೊದಲ ಸಲ ಪ್ರತಿನಿಧಿಸುತ್ತಿದ್ದಾರೆ.
ರಿಚಾ ಘೋಷ್ ಕಳೆದ ಚಾಲೆಂಜರ್ ಟ್ರೋಫಿ ಸರಣಿಯಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು.
ತ್ರಿಕೋನ ಸರಣಿಗೆ ನುಜತ್
ಇದೇ ವೇಳೆ ಟಿ20 ವಿಶ್ವಕಪ್‌ಗ್ೂ ಮೊದಲು ನಡೆಯುವ ಟಿ20 ತ್ರಿಕೋನ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಯಿತು. ವಿಶ್ವಕಪ್ ತಂಡಕ್ಕೆ ಹೆಚ್ಚುವರಿಯಾಗಿ ನುಜತ್ ಪರ್ವೀನ್ ಅವರನ್ನು ಸೇರಿಸಿಕೊಳ್ಳಲಾಗಿದೆ. ವಿಕೆಟ್ ಕೀಪರ್ ಆಗಿರುವ ಅವರು ಮಧ್ಯಮ ಕ್ರಮಾಂಕದ ಬಲಗೈ ಆಟಗಾರ್ತಿಯಾಗಿದ್ದಾರೆ.
ತ್ರಿಕೋನ ಸರಣಿ ಜ. 31ರಿಂದ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಳ್ಳಲಿರುವ ತಂಡಗಳೆಂದರೆ ಭಾರತ, ಇಂಗ್ಲೆಂಡ್ ಮತ್ತು ಆತಿಥೇಯ ಆಸ್ಟ್ರೇಲಿಯ.
ಪ್ರತಿಭೆಗಳ ಮಹಾಪೂರ
“ಕಳೆದ ಒಂದು ವರ್ಷದಿಂದ ವನಿತಾ ಕ್ರಿಕೆಟ್‌ನಲ್ಲಿ ಪ್ರತಿಭೆಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಅವಧಿ ಯಲ್ಲಿ ಐದಾರು ಆಟಗಾರ್ತಿಯರು ಭಾರತವನ್ನು ಮೊದಲ ಸಲ ಪ್ರತಿನಿಧಿಸುವ ಅವಕಾಶ ಪಡೆದರು. ಈ ಬಾರಿ ರಿಚಾ ಘೋಷ್ ಅವರಿಗೆ ಬಾಗಿಲು ತೆರೆದಿದೆ’ ಎಂಬುದಾಗಿ ಆಯ್ಕೆ ಸಮಿತಿ ಅಧ್ಯಕ್ಷೆ ಹೇಮಲತಾ ಕಲಾ ಹೇಳಿದರು.
ವನಿತಾ ಟಿ20 ವಿಶ್ವಕಪ್ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಜೆಮಿಮಾ ರೋಡ್ರಿಗಸ್, ಹಲೀìನ್ ದೇವಲ್, ದೀಪ್ತಿ ಶರ್ಮ, ವೇದಾ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ.
ತ್ರಿಕೋನ ಸರಣಿ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಜೆಮಿಮಾ ರೋಡ್ರಿಗಸ್, ಹಲೀìನ್ ದೇವಲ್, ದೀಪ್ತಿ ಶರ್ಮ, ವೇದಾ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ನುಜತ್ ಪರ್ವೀನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.