ವಿಶ್ವಕಪ್ ಗೆ ವಿರಾಟ್ ಸೈನ್ಯ ರೆಡಿ: ನಾಲ್ಕನೇ ಸ್ಥಾನಕ್ಕೆ ಯಾರು?
ವಿಶ್ವಕಪ್ ಗೆ ತಂಡ ಪ್ರಕಟಿಸಿದ ಬಿಸಿಸಿಐ: ರಾಹುಲ್ ಗೆ ಚಾನ್ಸ್
Team Udayavani, Apr 15, 2019, 3:25 PM IST
ಮುಂಬೈ: ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಪ್ರತಿಷ್ಠಿತ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟವಾಗಿದ್ದು , ವಿರಾಟ್ ಬಳಗದ ಬಹು ನಿರೀಕ್ಷಿತ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
ಎಂ ಎಸ್ ಕೆ ಪ್ರಸಾದ್ ನೇತೃತ್ವದಲ್ಲಿ ಮುಂಬೈಯಲ್ಲಿ ಸೋಮವಾರ ಸಭೆ ಸೇರಿದ ಆಯ್ಕೆ ಸಮಿತಿ ವಿಶ್ವ ಕಪ್ ಗಾಗಿ 15ಸದಸ್ಯರ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ . ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ವಿಶ್ವಕಪ್ ಆಡಲಿದ್ದು, ರೋಹಿತ್ ಶರ್ಮ ಉಪನಾಯಕನ ಜವಾಬ್ದಾರಿ ಹೊರಲಿದ್ದಾರೆ . ಬಹುತೇಕ ಕೊನೆಯ ವಿಶ್ವಕಪ್ ಆಡುತ್ತಿರುವ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಕೀಪರ್ ಆಗಿದ್ದು, ಎರಡನೇ ಕೀಪರ್ ಆಗಿ ದಿನೇಶ್ ಕಾರ್ತಿಕ್ಆಯ್ಕೆಯಾಗಿದ್ದಾರೆ
ನಾಲ್ಕನೇ ಸ್ಥಾನಕ್ಕೆ ಯಾರು?
ಟೀಮ್ ಇಂಡಿಯಾದ ಬಹು ಚರ್ಚಿತ ನಾಲ್ಕನೇ ಕ್ರಮಾಂಕಕ್ಕೆ ಆಯ್ಕೆಯಾಗಿದ್ದು ಒಂದು ವರ್ಷಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಬ್ ಪಂತ್ , ಅಂಬಾಟಿ ರಾಯುಡು, ವಿಜಯ್ ಶಂಕರ್, ಶ್ರೇಯಸ್ ಅಯ್ಯರ್ ನಡುವೆ ಸ್ಪರ್ಧೆ ಇದ್ದು, ಅಂತಿಮವಾಗಿ ವಿಜಯ್ ಶಂಕರ್ ಆಯ್ಕೆಯಾಗಿದ್ದಾರೆ . ಕನ್ನಡಿಗ ಕೆ.ಎಲ್ ರಾಹುಲ್ ತೃತೀಯ ಆರಂಭಿಕನಾಗಿ ಆಯ್ಕೆ ಆಗಿದ್ದಾರೆ .
ರವೀಂದ್ರ ಜಡೇಜಾ ಆಯ್ಕೆ
ತಂಡದಲ್ಲಿ ಮುಖ್ಯ ಸ್ಪಿನ್ನರ್ ಗಳಾಗಿ ಚಾಹಲ್ ಮತ್ತು ಕುಲದೀಪ್ ಯಾದವ್ ಇದ್ದು, ಮತ್ತೊಬ್ಬ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾ ಇಂಗ್ಲೆಂಡ್ ವಿಮಾನ ಏರಲಿದ್ದಾರೆ . ಆಲ್ ರೌಂಡರ್ ಆಗಿರುವುದು ಜಡ್ಡು ಆಯ್ಕೆಗೆ ಇನ್ನೊಂದು ಕಾರಣ ಎನ್ನಬಹುದು
ಮೇ 30ರಿಂದ ಜೂನ್ 14ರವೆರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯಲಿದೆ. ಭಾರತ ಈ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ( ನಾಯಕ), ರೋಹಿತ್ ಶರ್ಮ (ಉಪ ನಾಯಕ), ಮಹೇಂದ್ರ ಸಿಂಗ್ ಧೋನಿ ( ವಿಕೆಟ್ ಕೀಪರ್), ಶಿಖರ್ ಧವನ್, ಕೆ ಎಲ್ ರಾಹುಲ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ , ದಿನೇಶ್ ಕಾರ್ತಿಕ್ , ರವೀಂದ್ರ ಜಡೇಜಾ, ವಿಜಯ್ ಶಂಕರ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
India’s squad for the ICC #CWC19 announced: Virat Kohli (Capt), Rohit Sharma (vc), Shikhar Dhawan, KL Rahul, Vijay Shankar, MSD (wk), Kedar Jadhav, Dinesh Karthik, Yuzvendra Chahal, Kuldeep Yadav, Bhuvneshwar Kumar, Jasprit Bumrah, Hardik Pandya, Ravindra Jadeja, Mohd Shami
— BCCI (@BCCI) April 15, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.