ICC World Cup 2023; ತಂಡ ಬಿಟ್ಟು ಮನೆಗೆ ತೆರಳಿದ ವಿರಾಟ್ ಕೊಹ್ಲಿ; ಆಗಿದ್ದೇನು?
Team Udayavani, Oct 2, 2023, 10:46 AM IST
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನ ತನ್ನ ಮೊದಲ ಅಭ್ಯಾಸ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಎರಡನೇ ಅಭ್ಯಾಸ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿದೆ. ಮಂಗಳವಾರ ನಡೆಯಲಿರುವ ನೆದರ್ಲ್ಯಾಂಡ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ತಿರುವನಂತಪುರಂಗೆ ಬಂದಿಳಿದಿದೆ. ಆದರೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಂಡದೊಂದಿಗೆ ಆಗಮಿಸಿಲ್ಲ.
ವಿರಾಟ್ ಕೊಹ್ಲಿ ಅವರು ಟೀಂ ಮ್ಯಾನೇಜ್ ಮೆಂಟ್ ಬಳಿ ಅನುಮತಿ ಪಡೆದು ವೈಯಕ್ತಿಕ ತುರ್ತು ಕಾರಣಗಳಿಂದ ಮುಂಬೈಗೆ ತೆರಳಿದ್ದಾರೆ. ಗುವಾಹಟಿಯಿಂದ ನೇರ ಮುಂಬೈಗೆ ಹೋಗಿದ್ದು, ಸೋಮವಾರ ತಿರುವನಂತಪುರದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಕ್ರಿಕ್ ಬಜ್ ವರದಿ ಹೇಳಿದೆ.
ತಂಡದ ಇತರ ಸದಸ್ಯರು ಭಾನುವಾರ ಸಂಜೆ ವಿಶೇಷ ವಿಮಾನದಲ್ಲಿ ನಾಲ್ಕು ಗಂಟೆಗಳ ಹಾರಾಟದ ನಂತರ ಕೇರಳದ ರಾಜಧಾನಿಯಲ್ಲಿ ಬಂದಿಳಿದರು ಎಂದು ವರದಿ ಹೇಳಿದೆ.
ಇದನ್ನೂ ಓದಿ:Blcakmail: ವಿಡಿಯೋ ಇಟ್ಟು ಕೊಂಡು ಬ್ಲಾಕ್‌ಮೇಲ್ ಆಟೋ ಚಾಲಕನಿಗೆ ಇರಿತ: ಆರೋಪಿ ಸೆರೆ
ವಿರಾಟ್ ಕೊಹ್ಲಿ ಮತ್ತು ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಎರಡನೇ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂಬ ವರದಿಗಳ ನಡುವೆ ವಿರಾಟ್ ಮನೆಗೆ ತೆರಳಿದ್ದಾರೆ. ವಿರಾಟ್- ಅನುಷ್ಕಾ ದಂಪತಿಗೆ ವಮಿಕಾ ಎಂಬ ಹೆಣ್ಣು ಮಗುವಿದೆ.
ಭಾರತ ತಂಡದ ಮೊದಲ ಅಭ್ಯಾಸ ಪಂದ್ಯವು ಮಳೆಯ ಕಾರಣದಿಂದ ರದ್ದಾಗಿತ್ತು. ಗುವಾಗಟಿಯಲ್ಲಿ ಇಂಗ್ಲೆಂಡ್ ವಿರುದ್ಧ ರೋಹಿತ್ ಬಳಗ ಅಭ್ಯಾಸ ನಡೆಸಬೇಕಿತ್ತು. ಆದರೆ ನಿರಂತರ ಸುರಿದ ಮಳೆಯ ಕಾರಣದಿಂದ ಒಂದೂ ಎಸೆತ ಕಾಣದೆ ಪಂದ್ಯ ರದ್ದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.