World Cup; ಆಸೀಸ್ ಸಂಭಾವ್ಯರ ತಂಡ ಪ್ರಕಟ: ಸ್ಮಿತ್,ಸ್ಟಾರ್ಕ್,ಮ್ಯಾಕ್ಸ್ವೆಲ್ ಸೇರ್ಪಡೆ
Team Udayavani, Sep 6, 2023, 11:41 PM IST
ಮೆಲ್ಬರ್ನ್: ಗಾಯಗೊಂಡಿದ್ದರೂ ಪ್ಯಾಟ್ ಕಮಿನ್ಸ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಆಸ್ಟ್ರೇಲಿಯದ 15 ಸದಸ್ಯರ ವಿಶ್ವಕಪ್ ಸಂಭಾವ್ಯದ ತಂಡದಲ್ಲಿ ಸೇರ್ಪಡೆಗೊಳಿಸಲಾಗಿದೆ. ಆಲ್ರೌಂಡರ್ ಸೀನ್ ಅಬೋಟ್ ಚೊಚ್ಚಲ ಬಾರಿ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕಮಿನ್ಸ್ ಮತ್ತು ಸ್ಮಿತ್ ಅವರು ಆ್ಯಶಸ್ ಸರಣಿ ವೇಳೆ ಕೈಯ ಗಾಯಕ್ಕೆ ಒಳಗಾಗಿದ್ದರೆ ಸ್ಟಾರ್ಕ್ ಮತ್ತು ಮ್ಯಾಕ್ಸ್ವೆಲ್ ತೊಡೆಸಂದು ಮತ್ತು ಪಾದದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ನಾಲ್ವರಲ್ಲಿ ಕಮಿನ್ಸ್ ಮಾತ್ರ ಗುರುವಾರದಿಂದ ಆರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ವೇಳೆ ಆಸ್ಟ್ರೇಲಿಯ ತಂಡದಲ್ಲಿ ಇರಲಿದ್ದಾರೆ. ಆದರೆ ಅವರು ಆಡುವುದು ಅನುಮಾನವೆಂದು ಹೇಳಲಾಗಿದೆ.
ಈ ನಾಲ್ವರು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳುವ ವಿಶ್ವಾಸವಿದೆ ಮತ್ತು ಭಾರತದ ವಿರುದ್ದ ಸರಣಿ ವೇಳೆ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಯಿದೆ. ವಿಶ್ವಕಪ್ಗೆ ಅಂತಿಮ ತಂಡ ಪ್ರಕಟಿಸುವ ಮೊದಲು ಆಸ್ಟ್ರೇಲಿಯವು ದಕ್ಷಿಣ ಆಫ್ರಿಕಾ ಮತ್ತು ಭಾರತ ವಿರುದ್ಧ ಎಂಟು ಪಂದ್ಯಗಳನ್ನು ಆಡಲಿದೆ. ಆಬಳಿಕ ಎರಡು ವಿಶ್ವಕಪ್ ಅಭ್ಯಾಸ ಪಂದ್ಯಗಳು ನಡೆಯಲಿದೆ.
ಸಂಭಾವ್ಯ ಆಸ್ಟ್ರೇಲಿಯ ತಂಡ
ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬೋಟ್, ಆಸ್ಟನ್ ಅಗರ್, ಅಲೆಕ್ಸ ಕ್ಯಾರೆ, ಕ್ಯಾಮರಾನ್ ಗ್ರೀನ್, ಜೋಸ್ ಹೇಝಲ್ವುಡ್, ಟ್ರ್ಯಾವಿಸ್ ಹೆಡ್, ಜೋಶ್ ಇಂಗ್ಲಿಷ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯಿನಿಸ್, ವಾರ್ನರ್, ಝಂಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.