ವಿಶ್ವಕಪ್ ಹಾಕಿ-2023: ಒಡಿಶಾ ಆತಿಥ್ಯ
Team Udayavani, Nov 28, 2019, 12:02 AM IST
ಭುವನೇಶ್ವರ: ಪ್ರತಿಷ್ಠಿತ ವಿಶ್ವಕಪ್ ಹಾಕಿ ಪಂದ್ಯಾವಳಿಯ ಆತಿಥ್ಯ ಸತತ 2ನೇ ಸಲ ಭಾರತದ ಪಾಲಾಗಿದೆ. 2023ರ ಪುರುಷರ ವಿಭಾಗದ ವಿಶ್ವಕಪ್ ಪಂದ್ಯಗಳು ಒಡಿಶಾದ ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ನಡೆಯಲಿವೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಘೋಷಿಸಿದರು.
ಈ ಪಂದ್ಯಾವಳಿ 2023ರ ಜ. 13ರಿಂದ 29ರ ತನಕ ನಡೆಯಲಿದೆ.
“ನಾವು 2018ರ ವಿಶ್ವಕಪ್ ಹಾಕಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಈಗ 2023ರಲ್ಲಿ ಮತ್ತೆ ಈ ಪ್ರತಿಷ್ಠಿತ ಕೂಟದ ಆತಿಥ್ಯ ಭಾರತದ್ದಾಗಿದೆ. ಈ ಸ್ಪರ್ಧೆಗಳು ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ನಡೆಯಲಿವೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತದೆ’ ಎಂದು ನವೀನ್ ಪಟ್ನಾಯಕ್ ಇಲ್ಲಿನ “ಕಳಿಂಗ ಸ್ಟೇಡಿಯಂ’ನಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಘೋಷಿಸಿದರು.
ಅಂತಾರಾಷ್ಟ್ರೀಯ ಹಾಕಿ ಫೆಡರೇ ಶನ್ ಹಾಗೂ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ನರೀಂದರ್ ಬಾತ್ರಾ, ಹಾಕಿ ಇಂಡಿಯಾದ ಅಧ್ಯಕ್ಷ ಮೊಹಮ್ಮದ್ ಮುಷ್ತಾಕ್ ಅಹ್ಮದ್, ಒಡಿಶಾದ ಕ್ರೀಡಾ ಸಚಿವ ತುಷಾರ್‌ಕಾಂತಿ ಬೆಹೆರಾ ಉಪಸ್ಥಿತರಿದ್ದರು.
ಹಾಕಿ ಕೇಂದ್ರ ಭುವನೇಶ್ವರ
ದೇಶದ ಪ್ರಮುಖ ಹಾಕಿ ಕೇಂದ್ರವಾಗಿ ಬೆಳೆಯುತ್ತಿರುವ ಭುವನೇಶ್ವರದಲ್ಲಿ 2018ರ ವಿಶ್ವಕಪ್ ಹಾಕಿ ಪಂದ್ಯಾವಳಿ ಯಶಸ್ವಿಯಾಗಿ ನಡೆದಿತ್ತು. ಅಂದು ಬೆಲ್ಜಿಯಂ ಚಾಂಪಿಯನ್ ಆಗಿತ್ತು. 2017ರ ಏಶ್ಯನ್ ಆ್ಯತ್ಲೆಟಿಕ್ಸ್ ಚಾಂಪಿಯನ್‌ಶಿಪ್, ಅದೇ ವರ್ಷದ ಎಫ್ಐಎಚ್ ಹಾಕಿ ವರ್ಲ್ಡ್ ಲೀಗ್ ಫೈನಲ್, 2019ರ ಎಫ್ಐಎಚ್ ಪುರುಷರ ಸೀರಿಸ್ ಫೈನಲ್ಸ್, ಇತ್ತೀಚಿನ ಎಫ್ಐಎಚ್ ಹಾಕಿ ಒಲಿಂಪಿಕ್ ಅರ್ಹತಾ ಪಂದ್ಯಾವಳಿಗಳೆಲ್ಲ ಭುವನೇಶ್ವರದಲ್ಲಿ ಧಾರಾಳ ಯಶಸ್ಸು ಕಂಡಿದ್ದವು.
2020ರ ವನಿತೆಯರ ಫಿಫಾ ಅಂಡರ್-17 ಕೂಟದ ತಾಣಗಳಲ್ಲಿ ಭುವನೇಶ್ವರ ಕೂಡ ಒಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.