ಡೇವಿಸ್ ಕಪ್: ಪೇಸ್ ವಿಶ್ವದಾಖಲೆಗೆ ಕ್ಷಣಗಣನೆ
Team Udayavani, Apr 6, 2018, 7:20 AM IST
ಹೊಸದಿಲ್ಲಿ: ಶುಕ್ರವಾರದಿಂದ ಭಾರತ ಮತ್ತು ಚೀನ ನಡುವೆ ಡೇವಿಸ್ ಕಪ್‌ನ ಏಷ್ಯಾ-ಒಶಿಯಾನಿಯಾ ಗುಂಪು-1ರ ಪಂದ್ಯಗಳು ಆರಂಭವಾಗಲಿವೆ. ಖ್ಯಾತ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಪಾಲಿಗೆ ವಿಶ್ವದಾಖಲೆಗೈಯುವ ಉತ್ಸಾಹದಲ್ಲಿದ್ದಾರೆ. ಈ ಹೋರಾಟದ ಡಬಲ್ಸ್‌ನಲ್ಲಿ ಒಂದೇ ಒಂದು ಗೆಲುವು ಸಾಧಿಸಿದರೆ ಪೇಸ್ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಪಡೆದಿದ್ದಾರೆ.
44 ವರ್ಷದ ಪೇಸ್ ಇಲ್ಲಿಯವರೆಗೆ ಡೇವಿಸ್ ಕಪ್‌ನಲ್ಲಿ 42 ಡಬಲ್ಸ್ ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಇಟಲಿಯ ಖ್ಯಾತ ಟೆನಿಸ್ ಆಟಗಾರ ನಿಕೊಲಾ ಪೀತ್ರಾಂಜಲಿ ದಾಖಲೆಯನ್ನು ಸಮಗಟ್ಟಿದ್ದಾರೆ. ಹೀಗಾಗಿ ಒಂದು ಪಂದ್ಯ ಗೆದ್ದರೆ ಡೇವಿಸ್ ಕಪ್‌ನಲ್ಲಿ ಗರಿಷ್ಠ ಪಂದ್ಯ ಗೆದ್ದ ಡಬಲ್ಸ್ ಆಟಗಾರ ಎಂಬ ದಾಖಲೆ ನಿರ್ಮಿಸಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪೇಸ್, ನನಗೆ ವಿಶ್ವದಾಖಲೆಯ ಪಂದ್ಯ ಅನ್ನುವುದಕ್ಕಿಂತ ತಂಡದ ಗೆಲುವು ಮುಖ್ಯ. ಈ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ. ಬೋಪಣ್ಣ ಜತೆ ಆಡಲು ಕಾತುರನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಚೀನ ತಂಡಕ್ಕೆ ಹೋಲಿಸಿದರೆ ಭಾರತೀಯ ಆಟಗಾರರು ಶ್ರೇಯಾಂಕದಲ್ಲಿ ಮೇಲಿನ ಕ್ರಮಾಂಕದಲ್ಲಿದ್ದಾರೆ. ಜತೆಗೆ ಪೇಸ್ ಮತ್ತು ಬೋಪಣ್ಣ ಅನುಭವಿ ಆಟಗಾರರಾಗಿರುವುದರಿಂದ ತಂಡಕ್ಕೆ ನೆರವಾಗಲಿದೆ. ಸಿಂಗಲ್ಸ್‌ನಲ್ಲಿ ಯೂಕಿ ಭಾಂಬ್ರಿ ಗಾಯಗೊಂಡು ತಂಡದಿಂದ ಹೊರಬಿದ್ದಿರುವುದರಿಂದ ರಾಮಕುಮಾರ್ (132ನೇ ಶ್ರೇಯಾಂಕ), ಸುಮಿತ್ ನಗಲ್ (213ನೇ ಶ್ರೇಯಾಂಕ) ಮೇಲೆ ಹೆಚ್ಚಿನ ಒತ್ತಡವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.