ಗುಜರಾತ್ ನಲ್ಲಿ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ !
Team Udayavani, Jan 7, 2019, 10:47 AM IST
ಅಹ್ಮದಾಬಾದ್: ವಿಶ್ವದಲ್ಲಿಯೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ ಗುಜರಾತ್ ನಲ್ಲಿ ನಿರ್ಮಾಣವಾಗುತ್ತಿದೆ. ಅಹ್ಮದಾಬಾದ್ ನ ಮೊಟೇರಾ ಕ್ರೀಡಾಂಗಣ ವಿಶ್ವ ಕ್ರಿಕೆಟ್ ನ ಅತೀ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರೀಡಾಂಗಣ ಸದ್ಯ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಮ್. ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಒಮ್ಮೆಗೆ ಒಂದು ಲಕ್ಷ ಜನರು ಕುಳಿತು ಪಂದ್ಯ ವೀಕ್ಷಿಸುವ ಅವಕಾಶವಿದೆ. ಆದರೆ ಭಾರತದಲ್ಲಿ ನಿರ್ಮಾಣವಾಗಲಿರುವ ಮೊಟೇರಾ ಕ್ರೀಡಾಂಗಣದಲ್ಲಿ ಒಮ್ಮೆಗೆ ಒಂದು ಲಕ್ಷ ಹತ್ತು ಸಾವಿರ ಅಭಿಮಾನಿಗಳು ಕುಳಿತು ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬಹುದು. ಈ ಬಗ್ಗೆ ಟ್ವೀಟ್ ಮಾಡಿರುವ ಗುಜರಾತ್ ರಾಜ್ಯ ಕ್ರಿಕೆಟ್ ಸಂಸ್ಥೆ ಉಪಾಧ್ಯಕ್ಷ ಪರಿಮಾಲ್ ನತ್ವಾನಿ, ಹೊಸ ಸ್ಟೇಡಿಯಮ್ ನ ಮಾಹಿತಿ ಜೊತೆಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
World’s Largest Cricket Stadium, larger than #Melbourne, is under construction at #Motera in #Ahmedabad,#Gujarat. Once completed the dream project of #GujaratCricketAssociation will become pride of entire India. Sharing glimpses of construction work under way. @BCCI @ICC #cricket pic.twitter.com/WbeoCXNqRJ
— Parimal Nathwani (@mpparimal) January 6, 2019
ಈ ಹಿಂದೆ ಮೊಟೇರಾದಲ್ಲಿದ್ದ ಕ್ರೀಡಾಂಗಣದಲ್ಲಿ 54 ಸಾವಿರ ಜನರು ಕುಳಿತು ಪಂದ್ಯ ವೀಕ್ಷಣೆ ಮಾಡಲು ಸಾಧ್ಯವಾಗುತ್ತಿತ್ತು. ಹೊಸ ಕ್ರೀಡಾಂಗಣ ನಿರ್ಮಿಸುವ ಸಲುವಾಗಿ ಇದನ್ನು 2016ರಲ್ಲಿ ನೆಲಸಮ ಮಾಡಲಾಗಿತ್ತು. ಸುಮಾರು 700 ಕೋಟಿ ರೂಪಾಯಿ ವೆಚ್ಛದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸ್ಟೇಡಿಯಮ್ ನಲ್ಲಿ ನಾಲ್ಕು ಡ್ರೆಸ್ಸಿಂಗ್ ರೂಮ್, 50 ಕೊಠಡಿಗಳು, ಒಳಾಂಗಣ ಕ್ರಿಕೆಟ್ ತರಬೇತಿ ಕೇಂದ್ರಗಳು ಇರಲಿವೆ. ಸ್ಟೇಡಿಯಮ್ ಹೊರಗೆ ಸುಮಾರು ಮೂರು ಸಾವಿರ ಕಾರ್ ಗಳು ಮತ್ತು ಹತ್ತು ಸಾವಿರ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.