“ಒಂದು ವೇಳೆ ನಾನು ಬಾಯಿ ಬಿಟ್ಟರೆ ಸುನಾಮಿ …”: ಬ್ರಿಜ್ ಭೂಷಣ್ ಶರಣ್ ಸಿಂಗ್
Team Udayavani, Jan 20, 2023, 7:38 PM IST
ನವದೆಹಲಿ: ಆಪಾದಿತ ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟಿಸುತ್ತಿರುವ ಕುಸ್ತಿಪಟುಗಳು ರಾಜೀನಾಮೆಯ ಬೇಡಿಕೆಗಳ ಮೇಲೆ ದೃಢವಾಗಿ ಉಳಿದುಕೊಂಡಿರುವಂತೆ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ”ನಾನು ಬಾಯಿ ಬಿಟ್ಟರೆ ಸುನಾಮಿ ಬರುತ್ತದೆ” ಎಂದಿದ್ದಾರೆ.
“ನಾನು ಹೇಳಿಕೆ ನೀಡಿದರೆ, ಸುನಾಮಿ ಬರುತ್ತದೆ. ನಾನು ಯಾರ ಸಹಾಯಾರ್ಥವಾಗಿ ಇಲ್ಲಿದ್ದೇನೆ. ನಾನು ಚುನಾಯಿತ ಪ್ರತಿನಿಧಿ” ಎಂದು ಸಿಂಗ್ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಪ್ರಸಿದ್ಧ ಭಾರತೀಯ ಕುಸ್ತಿಪಟುಗಳು ಭಾಗಿಯಾಗಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.
ಮೀ ಟೂ ಆರೋಪಗಳ ಕಾರಣದಿಂದಾಗಿ ಸಿಂಗ್ ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥರಾಗಿ ತಕ್ಷಣವೇ ವಜಾಗೊಳಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.
”ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಪ್ರಧಾನಿ ಕಾರ್ಯಾಲಯ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.
ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬ್ರಿಜ್ ಭೂಷಣ್ ಅವರನ್ನು ಕರೆಸಿ ಉದ್ವಿಗ್ನತೆಯನ್ನು ಉಲ್ಬಣಗೊಳಿಸಬಹುದು ಎಂಬ ಆತಂಕದಿಂದ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದರು. ಅನುರಾಗ್ ಠಾಕೂರ್ ಅವರು ಯಾವುದೇ ನಿರ್ಣಯವಿಲ್ಲದೆ ನಿನ್ನೆ ರಾತ್ರಿ 2 ಗಂಟೆಯವರೆಗೆ ಪ್ರತಿಭಟನಾ ನಿರತ ಕ್ರೀಡಾಪಟುಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ್ದರು.
ಇಂದು, ಕುಸ್ತಿಪಟುಗಳು ಭಾರತೀಯ ಒಲಿಂಪಿಕ್ ಸಂಸ್ಥೆಯ ಮುಖ್ಯಸ್ಥೆ ಪಿಟಿ ಉಷಾ ಅವರಿಗೆ ಪತ್ರ ಬರೆದು, ಬ್ರಿಜ್ ಭೂಷಣ್ ಸಿಂಗ್ ಅವರು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.