WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Team Udayavani, Dec 19, 2024, 8:50 AM IST
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ್ದ ಭಾರತಕ್ಕೆ ಮಳೆ ವರವಾಗಿ ಕಾಡಿತು. ಹೀಗಾಗಿ ಅವಧಿಗೂ ಮುನ್ನವೇ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.
ಬ್ರಿಸ್ಬೇನ್ ಟೆಸ್ಟ್ ಪಂದ್ಯ ಡ್ರಾಗೊಂಡಿರುವ ಕಾರಣ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಕಠಿಣಗೊಂಡಿದೆ. ಫೈನಲ್ ಸಾಧ್ಯತೆಯನ್ನು ಹೆಚ್ಚಿಸಿಕೊಳ್ಳಬೇಕಾದರೆ ಭಾರತ, ಆಸ್ಟ್ರೇಲಿಯಾ ವಿರುದ್ಧದ ಉಳಿದ ಇನ್ನೆರಡು ಪಂದ್ಯಗಳನ್ನು ಗೆಲ್ಲಬೇಕು. ಆಗ ಗೆಲುವಿನ ಶೇಕಡಾ ವಾರನ್ನು 60.52ಕ್ಕೆ ಏರಿಸಲು ಅವಕಾಶವಿದೆ.
ಒಂದು ವೇಳೆ ಮುಂದಿನ 2ರಲ್ಲಿ 1 ಪಂದ್ಯ ಸೋತರೆ ಅಥವಾ ಡ್ರಾಗೊಳಿಸಿಕೊಂಡರೆ, ಆಗ ಭಾರತ ಫೈನಲ್‌ಗೇರಲು ಮುಂದಿನ ಆಸೀಸ್ -ಲಂಕಾ ನಡುವಿನ 2 ಪಂದ್ಯಗಳ ಸರಣಿಯ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ.
ಸದ್ಯ ವಿಶ್ವ ಟೆಸ್ಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ (63.33), ಆಸ್ಟ್ರೇಲಿಯಾ (58.89), ಭಾರತ (55.88) ಅಗ್ರ 3ರಲ್ಲಿದ್ದು, ಆಫ್ರಿಕಾ, ಆಸೀಸ್‌ಗೆ ಫೈನಲ್ ಅವಕಾಶ ಹೆಚ್ಚಿದೆ. ದ.ಆಫ್ರಿಕಾ ತಂಡವು ಪಾಕಿಸ್ತಾನ ವಿರುದ್ದ ಎರಡು ಪಂದ್ಯಗಳನ್ನು ಆಡಲಿದ್ದು, ಅದರಲ್ಲಿ ಒಂದನ್ನು ಗೆದ್ದರೂ ಫೈನಲ್ ಪ್ರವೇಶಿಸಲಿದೆ. ಮತ್ತೊಂದೆಡೆ ಆಸೀಸ್ ಭಾರತದ ವಿರುದ್ದ ಎರಡು ಪಂದ್ಯಗಳ ಬಳಿಕ ಲಂಕಾ ವಿರುದ್ದ ಎರಡು ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.