Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Team Udayavani, Sep 28, 2024, 3:29 PM IST
ಲಕ್ನೋ: ಮುಂಬೈನ ಯುವ ಪ್ರತಿಭಾನ್ವಿತ ಆಟಗಾರ, ಟೀಂ ಇಂಡಿಯಾ ಆಟಗಾರ ಸರ್ಫರಾಜ್ ಖಾನ್ (Sarfaraz Khan) ಅವರ ಸಹೋದರ ಮುಶೀರ್ ಖಾನ್ (Musheer Khan) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಮುಶೀರ್ ಖಾನ್ ಅವರು ತಂದೆ ನೌಶಾದ್ ಖಾನ್ ಅವರೊಂದಿಗೆ ಅಜಂಗಢದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದಾಗ ಕಾರು ದುರಂತ ನಡೆದಿದೆ. ಅಪಘಾತದ ಪರಿಣಾಮ ಕಾರು ರಸ್ತೆಯಲ್ಲಿ ನಾಲ್ಕೈದು ಬಾರಿ ಪಲ್ಟಿಯಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
19 ವರ್ಷ ವಯಸ್ಸಿನ ಬ್ಯಾಟರ್ ಮುಶೀರ್ ಗಾಯದ ತೀವ್ರತೆ ಮತ್ತು ಅವನ ಚೇತರಿಕೆಯ ಪ್ರಕ್ರಿಯೆಯ ಆಧಾರದ ಮೇಲೆ ಆರು ವಾರಗಳಿಂದ ಮೂರು ತಿಂಗಳವರೆಗೆ ಆಟದಿಂದ ಹೊರಗುಳಿಯುವ ಸಾಧ್ಯತೆಯಿದೆ. ಕಳೆದೊಂದು ವರ್ಷದಿಂದ ದೇಶಿ ಕ್ರಿಕೆಟ್ ನಲ್ಲಿ ಸದ್ದು ಮಾಡುತ್ತಿರುವ ಮುಶೀರ್ ಗೆ ಈ ಗಾಯ ದೊಡ್ಡ ಹಿನ್ನಡೆಯಾಗಿದೆ.
ಮುಂಬೈ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ಸಹೋದರ ಮುಶೀರ್ ಖಾನ್ ಅವರು ಕೆಂಪು-ಬಾಲ್ ಕ್ರಿಕೆಟ್ ನಲ್ಲಿ ಆಕರ್ಷಕ ಫಾರ್ಮ್ ನಲ್ಲಿದ್ದಾರೆ. ಇತ್ತೀಚಿಗೆ ದುಲೀಪ್ ಟ್ರೋಫಿಯಲ್ಲಿ ಭಾರತ ಬಿ ತಂಡದ ಪರವಾಗಿ ಭಾರತ ಎ ವಿರುದ್ದ ಮುಶೀರ್ ಖಾನ್ 181 ರನ್ ಗಳಿಸಿದ್ದರು.
ಯುವ ಬ್ಯಾಟರ್ ಭಾರತೀಯ ದೇಶೀಯ ವಲಯದಲ್ಲಿ ಅತ್ಯಂತ ರೋಚಕ ನಿರೀಕ್ಷೆಯಲ್ಲಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 51.14 ರ ಪ್ರಭಾವಿ ಸರಾಸರಿಯೊಂದಿಗೆ ಮುಶೀರ್ 15 ಇನ್ನಿಂಗ್ಸ್ ಗಳಲ್ಲಿ ಮೂರು ಶತಕ ಮತ್ತು ಒಂದು ಅರ್ಧ ಶತಕ ಸೇರಿದಂತೆ 716 ರನ್ ಗಳಿಸಿದ್ದಾರೆ.
ಮುಶೀರ್ ಖಾನ್ ಅಪಘಾತದ ಬಗ್ಗೆ ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಕೆಲವೇ ದಿನಗಳಲ್ಲಿ ಇರಾನಿ ಕಪ್ ಆರಂಭವಾಗಲಿದೆ. ಇದರಲ್ಲಿ ಮುಂಬೈ ತಂಡದಲ್ಲಿ ಮುಶೀರ್ ಆಡಬೇಕಿತ್ತು. ಆದರೆ ಅಪಘಾತದಿಂದ ಅವರು ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.