Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು
Team Udayavani, Jul 2, 2024, 4:01 PM IST
ಮುಂಬೈ: ಜಿಂಬಾಬ್ವೆ ವಿರುದ್ದದ ಟಿ20 ಸರಣಿಗೆ ಆಯ್ಕೆಯಾಗಿರುವ ಭಾರತದ ಯುವ ತಂಡದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಬದಲಿಗೆ ಶಿವಂ ದುಬೆ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಇದೀಗ ಕೊನೆಯ ಕ್ಷಣದಲ್ಲಿ ತಂಡದಲ್ಲಿ ಮತ್ತೆ ಮೂವರು ಬದಲಾಗಿದ್ದಾರೆ.
ಟಿ20 ವಿಶ್ವಕಪ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಅವರು ಜಿಂಬಾಬ್ವೆ ಪ್ರವಾಸದ ಮೊದಲ ಎರಡು ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಕೆರಿಬಿಯನ್ ನಲ್ಲಿ ಚಂಡಮಾರುತದ ಕಾರಣದಿಂದ ವಿಮಾನ ಯಾನಗಳು ರದ್ದಾಗಿದೆ. ಈ ಕಾರಣದಿಂದ ಭಾರತ ತಂಡವು ಇನ್ನೂ ಬಾರ್ಬಡೋಸ್ ನಲ್ಲಿಯೇ ಬಾಕಿಯಾಗಿದೆ. ಹೀಗಾಗಿ ಈ ಮೂವರು ಜಿಂಬಾಬ್ವೆ ವಿಮಾನ ತಪ್ಪಿಸಿಕೊಂಡಿದ್ದಾರೆ.
ಈ ಮೂವರ ಬದಲಿಗೆ ಟೀಂ ಇಂಡಿಯಾಗೆ ಸಾಯಿ ಸುದರ್ಶನ್, ಜಿತೇಶ್ ಶರ್ಮಾ ಮತ್ತು ಹರ್ಷಿತ್ ರಾಣಾ ಅವರನ್ನು ಸೇರಿಸಿಕೊಳ್ಳಲಾಗಿದೆ. ಈ ಮೂವರು ಮೊದಲೆರಡು ಪಂದ್ಯಗಳಿಗೆ ಟೀಂ ಇಂಡಿಯಾದ ಭಾಗವಾಗಲಿದ್ದಾರೆ. ಇವರು ಈಗಾಗಲೇ ಹರಾರೆಗೆ ಪ್ರಯಾಣ ಬೆಳೆಸಿದ್ದಾರೆ.
ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಅವರು ಉಳಿದ ವಿಶ್ವಕಪ್ ತಂಡದ ಜೊತೆಗೆ ಬುಧವಾರ (ಜುಲೈ 3) ಬೆಳಗ್ಗೆ ಹೊಸದಿಲ್ಲಿಗೆ ಬಂದಿಳಿಯಲಿದ್ದಾರೆ. ಬಳಿಕ ಮೂವರು ಹರಾರೆ ವಿಮಾನ ಏರಲಿದ್ದಾರೆ.
“ಪುರುಷರ ಆಯ್ಕೆ ಸಮಿತಿಯು ಜಿಂಬಾಬ್ವೆ ವಿರುದ್ಧದ ಮೊದಲ ಎರಡು ಟಿ20ಗಳಿಗೆ ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್, ಜಿತೇಶ್ ಶರ್ಮಾ ಮತ್ತು ಹರ್ಷಿತ್ ರಾಣಾ ಅವರನ್ನು ಹೆಸರಿಸಿದೆ” ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
🚨 NEWS 🚨
Sai Sudharsan, Jitesh Sharma and Harshit Rana added to India’s squad for first two T20Is against Zimbabwe.
Full Details 🔽 #TeamIndia | #ZIMvINDhttps://t.co/ezEefD23D3
— BCCI (@BCCI) July 2, 2024
ಶುಭ್ಮನ್ ಗಿಲ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ದ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6ರಿಂದ ಸರಣಿ ಆರಂಭವಾಗಲಿದೆ. ಹರಾರೆಯಲ್ಲಿ ಎಲ್ಲಾ ಪಂದ್ಯಗಳು ನಡೆಯಲಿದೆ.
ಮೊದಲೆರಡು ಪಂದ್ಯಗಳಿಗೆ ಟೀಂ ಇಂಡಿಯಾ
ಶುಭ್ಮನ್ ಗಿಲ್ (ನಾಯಕ), ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವಿ.ಕೀ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವಿ.ಕೀ) , ಹರ್ಷಿತ್ ರಾಣಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.