ನೇಕಾರರ ಸಮುದಾಯಗಳ ಒಕ್ಕೂಟದಿಂದ ಸಿಎಂ ಭೇಟಿ
ವಿದ್ಯುತ್ ಮಗ್ಗದ ಘಟಕಗಳಿಗೆ ಯೂನಿಟ್‌ಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ
Team Udayavani, Jul 25, 2023, 6:35 AM IST
ಬೆಂಗಳೂರು: ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಎಚ್.ಪಿ.ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗದ ಘಟಕಗಳಿಗೆ ಪ್ರತಿ ಯೂನಿಟ್‌ಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿದ ಅವರು, ರಿಯಾಯ್ತಿ ದರದಲ್ಲಿ ವಿದ್ಯುತ್ ಪೂರೈಕೆ ಜತೆಗೆ 10 ಎಚ್.ಪಿ.ವರೆಗಿನ ಘಟಕಗಳಿಗೆ 250 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಶೀಘ್ರ ಈ ಸಂಬಂಧ ಆದೇಶ ಹೊರಡಿಸಲಾಗುವುದು. ಅಷ್ಟೇ ಅಲ್ಲ, ಇದಲ್ಲದೆ ಹಿಂದುಳಿದ ವರ್ಗಗಳ 2ಎ ವರ್ಗದಡಿ ಬರುವ ಸಮುದಾಯಗಳ ಗುತ್ತಿಗೆದಾರರಿಗೆ 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಲಾಗಿದೆ ಎಂದೂ ತಿಳಿಸಿದರು.
ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ: ಮುಖ್ಯಮಂತ್ರಿ ಭೇಟಿಯಾದ ನೇಕಾರ ಸಮುದಾಯದ ಮುಖಂಡರು, ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಿದರು. ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡುವುದು, ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶಿವಾನಂದ ಸ್ವಾಮೀಜಿ, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಎಸ್. ಸೋಮಶೇಖರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.