ಶೇ. 16 ಮಂದಿಯಲ್ಲಿ ಪ್ರತಿಕಾಯ!
1.93 ಕೋಟಿ ಮಂದಿಗೆ ಸೋಂಕು: ಸಿರೋ ಸಮೀಕ್ಷೆ
Team Udayavani, Nov 5, 2020, 5:45 AM IST
ಬೆಂಗಳೂರು: ರಾಜ್ಯದ ಸುಮಾರು 1.93 ಕೋಟಿ ಮಂದಿಗೆ ಕೋವಿಡ್ ಸೋಂಕು ಬಂದು ಹೋಗಿರುವ ಅಂದಾಜು ಇದೆ. ಹಾಗೆಯೇ ರಾಜ್ಯದ ಶೇ. 16 ಮಂದಿಯಲ್ಲಿ ಕೊರೊನಾ ತಡೆಯುವ ರೋಗ ನಿರೋಧಕ ಶಕ್ತಿ ಸೃಷ್ಟಿಯಾಗಿದೆ!
ಇದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಅವರು ಬಿಡುಗಡೆಗೊಳಿಸಿದ ಸಿರೋ ಸಮೀಕ್ಷೆಯ ಮಾಹಿತಿ. ರಾಜ್ಯದ 30 ಜಿಲ್ಲೆ ಮತ್ತು ಬೆಂಗಳೂರಿನ 8 ವಲಯಗಳಲ್ಲಿ ಸಿರೋ ಸಮೀಕ್ಷೆ ನಡೆಸಲಾಗಿದೆ. ಇದರ ಪ್ರಕಾರ ಶೇ. 16 ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ತಿಳಿದುಬಂದಿದೆ ಎಂದು ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಾ| ಕೆ. ಸುಧಾಕರ್ ಹೇಳಿದರು. 16,585 ಜನರ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಿದ್ದು, 15,624 ಜನರ ಫಲಿತಾಂಶ ಬಂದಿದೆ ಎಂದವರು ವಿವರಿಸಿದರು.
ಈ ಹಿಂದೆ ಸಮೀಕ್ಷೆ ಮಾಡಿದ ಸಂದರ್ಭದಲ್ಲಿ ಸೋಂಕಿಗೆ ಒಳಗಾಗಿದ್ದವರ ಪ್ರಮಾಣ ಶೇ. 27.3ರಷ್ಟಿತ್ತು. ಈಗ ಕಡಿಮೆ ರಿಸ್ಕ್, ಮಧ್ಯಮ ರಿಸ್ಕ್ ಮತ್ತು ಹೆಚ್ಚು ರಿಸ್ಕ್ ಎಂದು ವರ್ಗೀಕರಿಸಿ ಪರೀಕ್ಷೆ ನಡೆಸಲಾಗಿದೆ. ಐಜಿಜಿ (ಇಮ್ಯುನೋಗ್ಲೋಬ್ಯುಲಿನ್ ಜಿ – ರೋಗ ನಿರೋಧಕ ಅಂಶ) ಹೊಂದಿದವರು ಮತ್ತು ಸಕ್ರಿಯ ಸೋಂಕುಪೀಡಿತರನ್ನು ಪತ್ತೆ ಮಾಡುವ ಮೂಲಕ ಕ್ರಮಬದ್ಧವಾಗಿ ಸಮೀಕ್ಷೆ ನಡೆಸಲಾಗಿದೆ ಎಂದರು.
15,624 ಜನರಲ್ಲಿ ಐಜಿಜಿ ಪ್ರತಿಕಾಯ ಇರುವವರ ಪ್ರಮಾಣ ಶೇ. 16.4ರಷ್ಟಿದೆ. ಸಮೀಕ್ಷೆಯನ್ನು ಸೆ. 3ರಿಂದ ಸೆ. 16ರ ವರೆಗೆ ನಡೆಸಲಾಗಿತ್ತು. ಕೋವಿಡ್ ಮರಣ ಪ್ರಮಾಣ ಸೋಂಕುಪೀಡಿತರ ಒಟ್ಟು ಸಂಖ್ಯೆಗೆ ಹೋಲಿಸಿದರೆ ಬಹಳ ಕಡಿಮೆ ಇದ್ದು, ಮರಣ ಪ್ರಮಾಣ ಶೇ. 0.5 ಇದೆ. ಇದೇ ರೀತಿ ಡಿಸೆಂಬರ್ ಅಂತ್ಯ ಮತ್ತು ಮಾರ್ಚ್ ಅಂತ್ಯಕ್ಕೆ ಮತ್ತೂಂದು ಸಮೀಕ್ಷೆ ನಡೆಸಲಾಗುವುದು ಎಂದರು.
ಶೇ. 27.3 ಜನರಿಗೆ ಸದ್ದಿಲ್ಲದೆ ಸೋಂಕು
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ವಿವಿಧ ಹಂತಗಳಲ್ಲಿ ಬಂದು ಹೋಗುತ್ತಿದೆ. ರಾಜ್ಯದ ಅಂದಾಜು 7.07 ಕೋಟಿ ಜನಸಂಖ್ಯೆಯ ಪೈಕಿ ಸೆ. 16ರ ಹೊತ್ತಿಗೆ 1.93 ಕೋಟಿ (ಶೇ. 27.3) ಜನರಿಗೆ ಸೋಂಕು ಬಂದು ಹೋಗಿದೆ. ಕೊರೊನಾದಿಂದ ಉಂಟಾಗುವ ಸಾವಿನ ಪ್ರಮಾಣ ಶೇ. 0.05ರಷ್ಟಿದೆ ಎಂದು ಕೊರೊನಾ ಸಮೀಕ್ಷೆ ಸಮಿತಿಯ ಮುಖ್ಯಸ್ಥ ಡಾ| ಗಿರಿಧರ ಬಾಬು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.