ರಾಣಿ ಚನ್ನಮ್ಮ ವಿವಿಗೆ 1 ಲಕ್ಷ ದಂಡ !
Team Udayavani, Jan 14, 2020, 3:00 AM IST
ಬೆಳಗಾವಿ: ಪದವಿ ಪೂರೈಸಿದ ವಿದ್ಯಾರ್ಥಿನಿಗೆ ಅಂಕಪಟ್ಟಿ ನೀಡದೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸೇವಾ ನ್ಯೂನತೆ ಎಸಗಿದ್ದರಿಂದ ವಿದ್ಯಾರ್ಥಿನಿಗೆ ಲಕ್ಷ ರೂ. ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ಹೊರಡಿಸಿದೆ.ಬಾಗಲಕೋಟೆ ಕೌಲಪೇಟ ಗ್ರಾಮದ ಗೀತಾ ಈರಪ್ಪ ಇಜಾರ್ದಾರ ಬಿ.ಕಾಂ ಪದವಿಗಾಗಿ ರಾಣಿ ಚನ್ನಮ್ಮ ವಿವಿ ಬಾಗಲಕೋಟೆಯ ಬಸವೇಶ್ವರ ವಾಣಿಜ್ಯ ವಿವಿಯಲ್ಲಿ ಪ್ರವೇಶ ಪಡೆದು 2015ರಲ್ಲಿ ಪಾಸಾಗಿದ್ದಳು.
ಆದರೆ ಮಹಾವಿದ್ಯಾಲಯ ಬಿ.ಕಾಂ ಪದವಿ ಪಾಸಾದ ಅಂಕಪಟ್ಟಿ ನೀಡಿರಲಿಲ್ಲ.ಅಂಕಪಟ್ಟಿ ಇಲ್ಲದೇ ವಿದ್ಯಾರ್ಥಿನಿ ಮುಂದಿನ ವಿದ್ಯಾಭ್ಯಾಸಕ್ಕೆ ಮತ್ತು ಉದ್ಯೋಗ ಪಡೆಯಲು ಅರ್ಜಿ ಸಲ್ಲಿಕೆಗೆ ತೊಂದರೆ ಆಗಿತ್ತು. ಇದರಿಂದ ನೊಂದು ಪರಿಹಾರ ಕೋರಿ ಜಿಲ್ಲಾ ಗ್ರಾಹಕರ ವ್ಯಾಜ್ಯ ಗಳ ಪರಿಹಾರ ವೇದಿಕೆ ಎದುರು 2018, ಏ.24ರಂದು ದೂರು ದಾಖಲಿಸಿದ್ದಳು. ವಿದ್ಯಾರ್ಥಿನಿಗೆ 30 ದಿನಗಳೊಳಗೆ ಲಕ್ಷ ರೂ. ಪರಿಹಾರ ಮೊತ್ತವನ್ನು ಶೇ.9ರಂತೆ ಬಡ್ಡಿ ಸೇರಿಸಿ ಕೊಡಲು ವೇದಿಕೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.