ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು
Team Udayavani, Oct 24, 2021, 10:52 AM IST
ಬೆಂಗಳೂರು: ಕೋವಿಡ್ ಕಾರಣದಿಂದ ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿವೆ.
ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಕೆಲವು ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿವೆ.
ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ ಸರ್ಕಾರ ಶಾಲೆಗಳಿಗೆ ಅವಕಾಶ ಕೊಟ್ಟಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್ಗೆ ಅವಕಾಶ ನೀಡಬೇಕು.
ಇನ್ನು ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
ಅಲ್ಲದೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ. 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ.
ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ.
ಮತ್ತೊಂದು ಪ್ರಮುಖ ಅಂಶ ಅಂದ್ರೆ ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತೆರೆಯಲು ಅವಕಾಶ ನೀಡಿಲ್ಲ.ಹಾಗೂ 25 ರಿಂದ ನವೆಂಬರ್ 2ರವರೆಗೂ ಅರ್ಧ ದಿನ ಮಾತ್ರ ತರಗತಿ, ನವೆಂಬರ್ 2 ರಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.