Karnataka ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರು ಅಮಾನತು
Team Udayavani, Jul 19, 2023, 4:36 PM IST
ಬೆಂಗಳೂರು: ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಅಧಿವೇಶನ ಶುಕ್ರವಾರ (ಜುಲೈ 21 ) ಕೊನೆಗೊಳ್ಳಲಿದೆ.
ಅಮಾನತಿಗೊಳಗಾದ ಶಾಸಕರು
ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.
ಸದನದ ಬಾವಿಗಿಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು.
ಸದನದ ಬಾವಿಗಿಳಿದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಧರಣಿ ನಡೆಸಿದರು. ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು. ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು. ರಾಜ್ಯ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದರು.
ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು. ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದರೆರು. ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದರು.ಸಭೆಯನ್ನು 3 ಗಂಟೆಗೆ ಮುಂದೂಡಿದ್ದರು.
ಕಾಂಗ್ರೆಸ್ ಶಾಸಕರು ಮತ್ತು ಸಚಿವರು ದಲಿತ ಸಮುದಾಯಕ್ಕೆ ಸೇರಿದ ಉಪಸಭಾಪತಿ ಅವರ ವಿರುದ್ಧ ಈ ರೀತಿ ವರ್ತನೆ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.