ಪಿಎಂ ಕಿಸಾನ್ ಯೋಜನೆ: 10ನೇ ಕಂತಿನ ಹಣ ಬಿಡುಗಡೆ
Team Udayavani, Jan 1, 2022, 12:26 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು, ಈ 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 3426401 ರೈತರಿಗೆ 685 ಕೋಟಿ 28 ಲಕ್ಷ 2ಸಾವಿರ ರೂ. ಹಣ ಬಿಡುಗಡೆಯಾಗಿದೆ.
2018-19 ರಿಂದ ಜ.1, 2022 ರವರೆಗೆ 10 ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8707 ಕೋಟಿ 97 ಲಕ್ಷ ರೂ. ಮೊತ್ತ ಬಿಡುಗಡೆಯಾದಂತಾಗಿದೆ.
ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಿದ್ದು ,ಯೋಜನೆಯಡಿ ವಾರ್ಷಿಕ ರೂ 6000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಈ ಅನುದಾನವನ್ನು ರೂ .2000 ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ.
ಇದನ್ನೂ ಓದಿ:ಹೊಸ ದಾಖಲೆ :ಒಂದೇ ದಿನ 60 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸಿದ ನಿರಾಣಿ ಶುಗರ್ಸ್
ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ , ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರುವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯದಿಂದ ಆಗಿದಾಗ್ಗೆ ಪರಿಶೀಲಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.