ನಾವು ವಿಶ್ವ ಕನ್ನಡಿಗರು ಒಕ್ಕೂಟದಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ
Team Udayavani, May 31, 2020, 1:31 PM IST
ಅಮೆರಿಕದ ಕನ್ನಡ ಒಕ್ಕೂಟ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡರು
ಬೆಂಗಳೂರು: ಕೋವಿಡ್-19 ಸೋಂಕು ನಿಭಾಯಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಭಾರತದಲ್ಲಿರುವ ನಿಮ್ಮವರ ಕಾಳಜಿ ರಕ್ಷಣೆ ಬಗ್ಗೆ ಆತಂಕ ಬೇಡ ನಮ್ಮ ಸರ್ಕಾರ ಇದೆ. ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅಮೆರಿಕದಲ್ಲಿರುವ ಅನಿವಾಸಿ ಕನ್ನಡಿಗರಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
ನಾವು ವಿಶ್ವ ಕನ್ನಡಿಗರು (ನಾವಿಕ) ಅಮೆರಿಕದ ಕನ್ನಡ ಒಕ್ಕೂಟ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಾವಿಕದ ಬಂಧುಗಳು ನೀಡಿರುವ 10 ಲಕ್ಷ ರೂ. ದೇಣಿಗೆಗೆ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಕೋವಿಡ್ ಲಾಕ್‌ಡೌನ್, ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸಂದರ್ಭದಲ್ಲಿ ಅಮೆರಿಕದಲ್ಲಿರುವ ನಮ್ಮವರಿಗೆ ಧೈರ್ಯ ಹೇಳಿ, ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿರುವ ನಾವಿಕ ಬಳಗಕ್ಕೆ ಅಭಿನಂದನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ‘ನಾವಿಕ’, ಅಮೆರಿಕ ಕನ್ನಡಿಗರ ಕೈ ಹಿಡಿಯುತ್ತಿದೆ. ಪರಿಣಿತರಿಂದ ಕೋವಿಡ್ ಮಾಹಿತಿ, ಮುನ್ನೆಚ್ಚರಿಕಾ ಸಲಹೆಗಳನ್ನು ನೀಡುತ್ತಿರುವುದು ಒಳ್ಳೆಯ ಕೆಲಸ. ಸೋಂಕು ದೀರ್ಘಕಾಲ ನಮ್ಮೊಂದಿಗೆ ಇರುವುದರಿಂದ ಆರೋಗ್ಯ, ಆರ್ಥಿಕ ಸಮಸ್ಯೆ ಎದುರಿಸಲು ಪರಸ್ಪರ ಸಹಕಾರ ಬಹಳ ಮುಖ್ಯ. ಇಂಥ ಸನ್ನಿವೇಶದಲ್ಲಿ ನಮ್ಮ ಬೆಂಬಲ ನಿಮಗೆ ಸದಾ ಇರುತ್ತದೆ. ಇಲ್ಲಿರುವ ನಿಮ್ಮ ಆಪ್ತರ ರಕ್ಷಣೆ ನಮ್ಮ ಜವಾಬ್ದಾರಿಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಮೂಲಸೌಕರ್ಯದ ಕೊರತೆಯನ್ನು ಹಿಮ್ಮೆಟ್ಟಿ ಇಡೀ ವಿಶ್ವದ ಗಮನ ಸೆಳೆದಿರುವ ಭಾರತ, ಇಂದು ಇತರ ರಾಷ್ಟ್ರಗಳಿಗೆ ಪ್ರೇರಣೆ ನೀಡುವಂತಾಗಿದೆ. ನಿಮ್ಮ ಜನ್ಮಭೂಮಿ ಬಗ್ಗೆ ಹೆಮ್ಮೆ ಪಡುವಂತ ಕೆಲಸ ಆಗುತ್ತಿದೆ ಎಂದು ಹೇಳಿದರು.
ಲಾಕ್‌ಡೌನ್ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ. ವೈರಾಣು ಪತ್ತೆ ಪ್ರಯೋಗಾಲಯದ ಸಂಖ್ಯೆ 3 ತಿಂಗಳ ಅವಧಿಯಲ್ಲಿ 2ರಿಂದ 60ಕ್ಕೆ ಹೆಚ್ಚಿಸಲಾಗಿದೆ. ಪಿಪಿಇ ಕಿಟ್, ಎನ್ 95 ಮಾಸ್ಕ್, ವೆಂಟಿಲೇಟರ್‌ಗಳ ತಯಾರಿಕೆಯಲ್ಲಿ ಸ್ವಾಲಂಬನೆ ಸಾಧಿಸಿ, ಬೇರೆ ದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದ್ದೇವೆ. ತಂತ್ರಜ್ಞಾನ ಬಳಸಿಕೊಂಡು ಆರೋಗ್ಯ ಸಿಬ್ಬಂದಿ ಕೊರತೆ ನೀಗಿಸಲಾಗಿದೆ. ಟೆಲಿಮೆಡಿಸನ್, ಟೆಲಿಕನ್ಸಲ್ಟೇಷನ್ ಮೂಲಕ ವೈದ್ಯಕೀಯ ಸಲಹೆ ನೀಡಲಾಗುತ್ತಿದೆ. ರಿಮೋಟ್ ಐಸಿಯು ವ್ಯವಸ್ಥೆ ಇದೆ. ಜತೆಗೆ ಹೊಸ ಟೆಸ್ಟಿಂಗ್ ವಿಧಾನ, ಹೊಸ ಉಪಕರಣಗಳ ಸಂಶೋಧನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ,”ಎಂದು ಮಾಹಿತಿ ನೀಡಿದರು.
ಲಾಕ್‌ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ಮುಂದೆಯೂ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಲಾಗಿದೆ. ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲೂ ಆರೋಗ್ಯ ಸಮೀಕ್ಷೆ ನಡೆಸಿ ಆ ಮಾಹಿತಿಯನ್ನು ಡಿಜಿಟಲೈಸ್ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.