Karnataka: 50 ವರ್ಷ ಮೀರಿದ ಜಲಾಶಯ ದುರಸ್ತಿಗೆ 10 ಸಾವಿರ ಕೋ.ರೂ.
ಕೇಂದ್ರ ಸರಕಾರದಿಂದ ಅನುದಾನ ಕೋರಲು ರಾಜ್ಯ ಸರಕಾರ ತೀರ್ಮಾನ
Team Udayavani, Nov 5, 2024, 7:27 AM IST
ಬೆಂಗಳೂರು: ಐವತ್ತು ವರ್ಷ ಮೀರಿದ ರಾಜ್ಯದ ಎಲ್ಲ ಜಲಾಶಯಗಳ ದುರಸ್ತಿ ಕಾರ್ಯಕ್ಕೆ ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕೆ ಅಂದಾಜು 9ರಿಂದ 10 ಸಾವಿರ ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆ ಇದೆ. ಈ ಸಂಬಂಧ ಅನುದಾನ ಕೋರಿ ಕೇಂದ್ರ ಸರಕಾರಕ್ಕೆ ವಿಸ್ತೃತ ಮನವಿ ಸಲ್ಲಿಸಲು ಜಲಸಂಪನ್ಮೂಲ ಇಲಾಖೆ ನಿರ್ಧರಿಸಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳ ನಿಯೋಗ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ನಿರ್ಧರಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳ ಉಪಚುನಾವಣೆ ಮುಕ್ತಾಯಗೊಂಡ ಬಳಿಕ ಕೇಂದ್ರ ಸಚಿವರ ಭೇಟಿಗೆ ಸಮಯ ಕೋರಲು ತೀರ್ಮಾನಿಸಲಾಗಿದೆ. ಕೆಲವು ತಿಂಗಳುಗಳ ಹಿಂದೆ ತುಂಗಭದ್ರಾ ಜಲಾಶಯದ ಗೇಟ್ ಮುರಿದು ನೀರು ನಷ್ಟವಾದ ಬಳಿಕ ಜಲಾಶಯ ದುರಸ್ತಿಗೆ ಚಿಂತಿಸಲಾಗಿತ್ತು.
ಕೆಲವು ತಿಂಗಳುಗಳ ಹಿಂದೆ ಹಿಂದೆ ತುಂಗಾ ಭದ್ರ ಜಲಾ ಶಯದ 9ನೇ ಗೇಟ್ ಕೊಚ್ಚಿಕೊಂಡು ಹೋಗಿ ಉಂಟಾದ ಅಪಾರ ಜಲನಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಲಾಶಯಗಳ ಸ್ಥಿತಿಗತಿ ಹೇಗಿದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಆ ಸಮಿತಿ ಈಗ ವರದಿ ನೀಡಿದೆ. ಕೆಆರ್‌ಎಸ್ ಹೊರತುಪಡಿಸಿ 50 ವರ್ಷ ಮೇಲ್ಪಟ್ಟ ಎಲ್ಲ ಜಲಾಶಯಗಳ ದುರಸ್ತಿ ನಡೆಸಬೇಕೆಂದು ಅಭಿಪ್ರಾಯ ನೀಡಲಾಗಿದೆ.
ನೆರವಿಗೆ ಪ್ರಸ್ತಾವ
ದುರಸ್ತಿ ಕಾರ್ಯದಪ್ರಸ್ತಾವ ಸಿದ್ಧಪಡಿಸಲಾಗುತ್ತಿದೆ. ಕೇಂದ್ರ ಸರಕಾರದ “ಡ್ರಿಪ್’ ಯೋಜನೆ ಅನ್ವಯ ಹಣಕಾಸು ನೆರವು ಕೋರುವುದಕ್ಕೆ ನಿರ್ಧರಿಸಲಾಗಿದೆ. ಇದರ ಜತೆಗೆ ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಹಾಗೂ ಕೃಷಿ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಅಗತ್ಯವಾದ ಹಣಕಾಸು ನೆರವು ಕೊಡುವಂತೆ ಭೇಟಿಯ ಸಂದರ್ಭದಲ್ಲಿ ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.