ಐಫೋನ್‌ ತಯಾರಿಕಾ ಘಟಕಕ್ಕೆ ತುಮಕೂರು ಬಳಿ 100 ಎಕರೆ ಜಾಗ

Team Udayavani, Jul 18, 2023, 6:20 AM IST

ಐಫೋನ್‌ ತಯಾರಿಕಾ ಘಟಕಕ್ಕೆ ತುಮಕೂರು ಬಳಿ 100 ಎಕರೆ ಜಾಗ

ಬೆಂಗಳೂರು: ದೇವನಹಳ್ಳಿಯ ಐಟಿಐಆರ್‌ ವಲಯದಲ್ಲಿ ಫಾಕ್ಸ್‌ಕಾನ್‌ ಕಂಪನಿ ಸ್ಥಾಪಿಸಲು ಉದ್ದೇಶಿಸಿರುವ ಐಫೋನ್‌ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೂಂದು ಘಟಕ ಸ್ಥಾಪಿಸಲು ಈ ಕಂಪೆನಿಗೆ ಸರ್ಕಾರ 100 ಎಕರೆ ಜಾಗ ನೀಡಲು ಮುಂದೆ ಬಂದಿದೆ.

ಫಾಕ್ಸ್‌ಕಾನ್‌ ಕಂಪನಿಯ ಅಂಗಸಂಸ್ಥೆ ಫಾಕ್ಸ್‌ಕಾನ್‌ ಇಂಡಸ್ಟ್ರಿಯಲ್‌ ಇಂಟರ್ನೆಟ್‌ (ಎಫ್ಐಐ) ಈ ಯೋಜನೆಗೆ 8,800 ಕೋಟಿ ರೂ. ಹೂಡಿಕೆ ಮಾಡಲಿದ್ದು 14 ಸಾವಿರ ಉದ್ಯೋಗ ಸೃಷ್ಟಿಸಲಿದೆ. ಘಟಕ ಸ್ಥಾಪನೆಗೆ 100 ಎಕರೆ ಜಾಗ ಅಗತ್ಯವಿದ್ದು ತುಮಕೂರಿನ ಜಪಾನ್‌ ಇಂಡಸ್ಟ್ರಿಯಲ್‌ ಟೌನ್‌ಷಿಪ್‌ನಲ್ಲಿ ಈ ಜಾಗ ನೀಡಲು ಸರ್ಕಾರ ಬಯಸಿದೆ.

ಫೋನ್‌ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ‌…ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್‌ ತಯಾರಿಕಾ ಘಟಕವು “ಎಂಡ್‌ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್‌ ಚೆಂಗ್‌ ನೇತೃತ್ವದ ಎಫ್ಐಐ ನಿಯೋಗದ ಜೊತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಈ ಸಂದರ್ಭದಲ್ಲಿ ಭಾರಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್‌ ಮಾತನಾಡಿ, ನಮ್ಮ ರಾಜ್ಯದಲ್ಲಿ ಫಾಕ್ಸ್‌ ಕಾನ್‌ ಕಂಪನಿಯು ಸೆಮಿ ಕಂಡಕ್ಟರ್‌ ಸೇರಿದಂತೆ ಬೇರೆ ಯಾವುದೇ ಉದ್ದಿಮೆ ಸ್ಥಾಪಿಸಲು ಬಯಸಿದರೆ ಅಗತ್ಯ ಎÇÉಾ ನೆರವನ್ನೂ ಒದಗಿಸುವ ಭರವಸೆ ನೀಡಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಎಫ‌…ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್‌ ಲಿಂಗ್‌, ಜೇಸನ್‌ ಲಾವು, ಆಂಜಿ ಲಿನ್‌, ನಿರ್ದೇಶಕರಾದ ಸೆಂಥಿಲ್‌ ಕುಮಾರ, ಭರತ್‌ ದಂಡಿ, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತರಾದ ಗುಂಜನ್‌ ಕೃಷ್ಣ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.