Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್ ಸಿಬಂದಿ
Team Udayavani, May 7, 2024, 11:43 PM IST
ಬೆಂಗಳೂರು: ಮೂರು ತಿಂಗಳ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ 108 ಆರೋಗ್ಯ ಕವಚದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಸಿಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಮಂಗಳವಾರ ಕೈ ಬಿಟ್ಟಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಡಾ| ರಣದೀಪ್ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108 ಸಿಬಂದಿ, ತಮ್ಮ ಸಮಸ್ಯೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಯಾಗಿ ಸರಕಾರದ ನಿಲುವನ್ನು ಪ್ರತಿಪಾದಿಸಿದ ಆಯುಕ್ತರು, ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ. ಸಿಬಂದಿಗೆ ವೇತನ ಪಾವತಿ ಮಾಡಬೇಕಿರುವ ಜಿವಿಕೆ ಇಎಂಆರ್ ಸಂಸ್ಥೆಯಿಂದ ಸಮಸ್ಯೆಗಳಾಗಿದ್ದರೆ, ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬೇಕು. ಇದಕ್ಕೆ ಸರಕಾರ ಸಹಕಾರ ಕೊಡಲಿದೆ ಎಂದು ಸಮಜಾಯಿಷಿ ನೀಡಿದರು.
ಈ ಸಂಬಂಧ ಪ್ರತ್ಯೇಕ ಪ್ರಕಟನೆ ಹೊರಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸರಕಾರದಿಂದ ಯಾವುದೇ ವೇತನ ಬಾಕಿ ಇಲ್ಲ. ಸಂಸ್ಥೆ ಜತೆಗೆ ಒಡಂಬಡಿಕೆಯ ಪ್ರಕಾರ ಸರಕಾರದಿಂದ ಕೊಡಬೇಕಾದ ಅನುದಾನವನ್ನು ಪಾವತಿಸಲಾಗಿದೆ. ಯೋಜನೆ ನಿರ್ವಹಿಸುತ್ತಿರುವ ಜಿವಿಕೆ ಇಎಂಆರ್ ಸಂಸ್ಥೆ ವೇತನ ಬಾಕಿಯಿರಿಸಿದೆ ಎಂದಿದ್ದಾರೆ.
ಆ್ಯಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ಪರಮ ಶಿವಯ್ಯ ಮಾತನಾಡಿ, ಆರೋಗ್ಯ ಇಲಾಖೆ ವಲಯವಾರು ವೇತನ ಪಾವತಿಯನ್ನು ತಡೆಹಿಡಿದು, ರಾಜ್ಯಾದ್ಯಂತ ಏಕ ರೂಪದ ವೇತನ ಪಾವತಿಸುವಂತೆ ಜಿವಿಕೆ ಇಎಂಆರ್ ಸಂಸ್ಥೆಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ. ಬಾಕಿ ಹಾಗೂ ಕಡಿತಗೊಂಡ ವೇತನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.