ಕೆಂಪೇಗೌಡರ ಅಭಿವೃದ್ಧಿ ಕೆಲಸ ಸರ್ವ ಸಮುದಾಯಕ್ಕೂ ಸಲ್ಲುವಂತದ್ದು: ಸಿ.ಎನ್‌.ಅಶ್ವತ್ಥನಾರಾಯಣ

ಪವಿತ್ರ ಮೃತ್ತಿಕೆ ಸಂಗ್ರಹ ರಥಗಳಿಗೆ ಚಾಲನೆ

Team Udayavani, Oct 21, 2022, 11:50 PM IST

ಕೆಂಪೇಗೌಡರ ಅಭಿವೃದ್ಧಿ ಕೆಲಸ ಸರ್ವ ಸಮುದಾಯಕ್ಕೂ ಸಲ್ಲುವಂತದ್ದು: ಸಿ.ಎನ್‌.ಅಶ್ವತ್ಥನಾರಾಯಣ

ಬೆಂಗಳೂರು: ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂಭಾಗ ಅನಾವರಣಗೊಳಿಸಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರಗತಿ ಪ್ರತಿಮೆ ಕಾರ್ಯಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹ ರಥಗಳಿಗೆ ಶುಕ್ರವಾರ ವಿಧಾನಸೌಧ ಮುಂಭಾಗ ಸಿಎಂ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿದರು.

ಈ ಐತಿಹಾಸಿಕ ಕ್ಷಣಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವರಾದ ಡಾ.ಸಿ.ಎನ್‌.ಅಶ್ವತ್ಥ ನಾರಾ ಯಣ, ಆರ್‌.ಅಶೋಕ್‌, ನಾರಾಯಣಗೌಡ, ಬೈರತಿ ಬಸವರಾಜ್‌, ಸುನಿಲ್‌ಕುಮಾರ್‌, ಮುನಿ ರತ್ನ, ಸಂಸದರಾದ ಪಿ.ಸಿ.ಮೋಹನ್‌, ಸಂದಾನಂದ ಗೌಡ , ತೇಜಸ್ವಿ ಸೂರ್ಯ ಸಾಕ್ಷಿಯಾದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೆರಿಕಾದ ಸ್ವಾತಂತ್ರ ಪ್ರತಿಮೆ, ಗುಜ  ರಾತಿನ ಏಕತಾ ಪ್ರತಿಮೆಗಳಂತೆ ನಮ್ಮಲ್ಲಿ ಕೆಂಪೇ ಗೌಡರ ಪ್ರತಿಮೆಗೆ “ಪ್ರಗತಿ ಪ್ರತಿಮೆ” ಎಂದು ಹೆಸ ರಿಸಲಾಗಿದೆ. ಅವರ 108 ಅಡಿ ಎತ್ತರದ ಪ್ರತಿಮೆಗೆ ತಕ್ಕಂತೆ ರಾಜ್ಯವು ಇಡೀ ದೇಶದಲ್ಲಿ ನಂ.1 ಸ್ಥಾನಕ್ಕೆ ಏರಬೇಕು ಎಂದರು. ಈ ಪ್ರತಿಮೆ ಸ್ಥಾಪನೆ ರಾಜ್ಯದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ಬೆಂಗಳೂರಿಗೆ ಬರುವ ಸಾವಿರಾರು ವಿದೇಶಿಗರು ಕೂಡ ಕೆಂಪೇ   ಗೌಡರಿಗೆ ನಮಸ್ಕರಿ ಸುವಂತೆ ಆಗಬೇಕು ಎಂದು ಹೇಳಿದರು.

ಸರ್ವ ಸಮುದಾಯಕ್ಕೆ ಸಲ್ಲುವಂತದ್ದು: ಕಾರ್ಯಕ್ರಮದ ರೂವಾರಿ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ನಾಡಪ್ರಭು ಕೆಂಪೇಗೌಡರು ಮಾಡಿದ ಕೆಲಸಗಳು ಎಲ್ಲ ಜಾತಿ, ಜನಾಂಗಕ್ಕೂ ಸಲ್ಲುವಂತವು. ಆ ಹಿನ್ನೆಲೆಯಲ್ಲಿ 500 ವರ್ಷಗಳ ನಂತರ ಈಗಲೂ ಕೂಡ ಕೆಂಪೇಗೌಡ ಅವರು ಪ್ರಸ್ತುತವಾಗಿ ನಮ್ಮ ಮುಂದೆ ನಿಲ್ಲುತ್ತಾರೆಂದು ಹೇಳಿದರು.

ಇಡೀ ಕರ್ನಾಟಕವೇ ಒಂದು ಎನ್ನುವ ಉದಾತ್ತ ಸಂದೇಶ ಸಾರುವ ಈ ರಥಗಳನ್ನು ಹಳ್ಳಿ, ಹಳ್ಳಿ ಗಳಲ್ಲಿ ಗ್ರಾಮ ಗ್ರಾಮಗಳಲ್ಲಿ ಭವ್ಯ ಸ್ವಾಗತ ನೀಡಿ ಬರ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಾನು ಯೋಜನೆಯ ಸಾಕಾರಕ್ಕೆ ಕೆಲಸ ಮಾಡಿ ದ್ದೇವೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಹಾಕಿದ ಶ್ರೀಕಾರದ ಬಲವೂ ಇದೆ. ಕೆಂಪೇಗೌಡರ ಸಂದೇಶವನ್ನು ಜನರಿಗೆ ತಲುಪಿಸಲು ಮುಂದೆಯೂ ನಾವು ಶ್ರಮಿಸಲಿದ್ದೇವೆ. ನಾವು ಕೆಂಪೇಗೌಡರನ್ನು ಕಟ್ಟುತ್ತ, ನಾಡನ್ನು ಕಟ್ಟೋಣ ಎಂದು ಭಾವನಾತ್ಮಕವಾಗಿ ನುಡಿದರು.

ಚಿರಸ್ಥಾಯಿ: ಕಂದಾಯ ಸಚಿವ ಆರ್‌.ಅಶೋಕ್‌ ಮಾತನಾಡಿ, ಕರ್ನಾಟಕ ಇತಿಹಾಸದಲ್ಲಿ ಕೆಂಪೇಗೌಡ ಅವರ ಹೆಸರನ್ನು ಚಿರಸ್ಥಾಯಿ ಆಗಿ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆಯಿರಿಸಿದೆ. 2009ರಲ್ಲಿ ಕೆಂಪೇ ಗೌಡರ ಜಯಂತಿಯನ್ನು ವಾರ್ಡ್‌ ಮಟ್ಟ ದಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು ಎಂದು ಹೇಳಿದರು.

ಎಲ್ಲ ತಾಲೂಕುಗಳಿಂದ ಮಣ್ಣು ತರುವಂತಹ ಉದ್ದೇಶ ಕೆಂಪೇಗೌಡರ ಜೀವನದ ಸಾಧನೆಗಳು ಕೂಡ ನಮ್ಮ ಜನರಿಗೆ ಗೊತ್ತಾಗಬೇಕು ಎನ್ನುವುದಾ ಗಿದೆ. ಐಟಿ ಬಿಟಿ ಸೇರಿದಂತೆ ಮತ್ತಿತರ ತಂತ್ರಜ್ಞಾನ ಗಳು ಈ ನಗರದಲ್ಲಿವೆ ಎಂದರೆ ಕೆಂಪೇಗೌಡರು ನಿರ್ಮಿ ಸಿದ ಪ್ರಗತಿಪರ ಚಿಂತನೆಗೆ ಕಾರಣವಾಗಿವೆ ಎಂದರು.

ಅಶ್ವತ್ಥನಾರಾಯಣಗೆ ಶಹಬ್ಟಾಸ್‌ಗಿರಿ
ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲ ಗಣ್ಯರು ಯೋಜನೆಯ ರೂವಾರಿ ಸಚಿವ ಅಶ್ವತ್ಥ ನಾರಾಯಣ ಅವರಿಗೆ ಶಹಬ್ಟಾಸ್‌ಗಿರಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಯೋಜನೆಯ ರೂಪುರೇಷೆ, ವಿನ್ಯಾಸ, ಪ್ರಗತಿ ಎಲ್ಲವನ್ನೂ ಉತ್ತಮವಾಗಿ ನಿರ್ವಹಣೆ ಮಾಡಿದ ಶ್ರೇಯಸ್ಸು ಸಚಿವ ಅಶ್ವತ್ಥನಾರಾಯಣ ಅವರಿಗೆ ಸಲ್ಲುತ್ತದೆ. ಅವರು ಇದಕ್ಕಾಗಿ ಹಗಲಿ ರುಳೂ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವ ಅಶ್ವತ್ಥನಾರಾಯಣ ನೇತೃತ್ವದ ನಿಯೋಗ ಭೇಟಿ ಮಾಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಮತ್ತು ಪಾರ್ಕ್‌ ನಿರ್ಮಾಣಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಮ್ಮತಿಸಿ ಅನುದಾನವನ್ನು ಕೂಡ ನೀಡಿದ್ದೆ. ಇಂದು ಸಾಕಾರಗೊಳ್ಳುತ್ತಿರುವುದಕ್ಕೆ ಅಶ್ವತ್ಥನಾರಾಯಣ ಅವರೇ ಕಾರಣ ಎಂದು ಶ್ಲಾ ಸಿದರು. ಈ ಯೋಜನೆಯು ಅಶ್ವತ್ಥನಾರಾಯಣ ಅವರ ಕನಸಿನ ಕೂಸಾಗಿದೆ. ಇದಕ್ಕಾಗಿ ಅವರು ಹಗಲಿರುಳೂ ಶ್ರಮಿಸಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಜನರ ಬದುಕು ಕಟ್ಟಿದರು: ಸಿಎಂ
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರು ನಾಡು ಕಟ್ಟುವ ಕೆಲಸವನ್ನಷ್ಟೇ ಮಾಡಿಲ್ಲ. ಇದರ ಜತೆಗೆ ಜನರ ಬದುಕನ್ನು ಕೂಡ ಕಟ್ಟಿದರು. ಸರ್ವಜನಾಂಗದವರನ್ನು ಒಗ್ಗೂಡಿಸುವ ಕೆಲಸ ಮಾಡಿ ಸಾಮಾಜಿಕ ಹರಿಕಾರ ಎಸಿನಿಕೊಂಡರು ಎಂದು ಹೇಳಿದರು. ಆ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ‌ರಿಗೆ ಸರಿಯಾದ ಗೌರವ ಸಿಗಬೇಕೆಂಬ ಸಂಕಲ್ಪದ ಹಿನ್ನೆಲೆಯಲ್ಲಿ ಸರ್ಕಾರ ಪ್ರಗತಿ ಪಥ ಪ್ರತಿಮೆ ನಿರ್ಮಿಸುವತ್ತ ಹೆಜ್ಜೆಯಿರಿಸಿದೆ. ಅನೇಕ ದಶಕಗಳ ಕನಸು ನನಸಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ವಿಧಾನಸೌಧ ದಲ್ಲಿ ಒಂದೆ ಕಡೆ ಸಾಮಾಜಿಕ ಹರಿಕಾರ ಬಸವಣ್ಣ ಅವರ ಪ್ರತಿಮೆಯನ್ನು ಮತ್ತೊಂದು ಕಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಾಣ ಮಾಡಬೇಕು. ಈ ಇಬ್ಬರೂ ಕೂಡ ನಾಡನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ, ಜತೆಗೆ ಸರ್ವಜನಾಂಗದ ತೋಟವಾಗಿ ಕಟ್ಟಿದ್ದಾರೆ.
-ಡಾ| ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠ

ಕೆಂಪೇಗೌಡರ ಕೊಡುಗೆಯನ್ನು ಈ ನಾಡು ಮರೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಂಟ್ರಲ್‌ ಪಾರ್ಕ್‌ ಮತ್ತು ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಘೋಷಣೆ ಮಾಡಿದೆ.
-ಬಿ.ಎಸ್‌.ಯಡಿಯೂರಪ್ಪ ಮಾಜಿ ಸಿಎಂ

 

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.