ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ
ಶೆಟ್ಟರ್ ಸ್ಥಾನ ಸಹಿತ ಒಟ್ಟು 12 ಸ್ಥಾನಗಳಿಗೆ ಚುನಾವಣೆ ; ಕಾಂಗ್ರೆಸ್‌ಗೆ 7 ಸ್ಥಾನ ಖಚಿತ
Team Udayavani, May 9, 2024, 6:40 AM IST
ಬೆಂಗಳೂರು: ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ಅವರದ್ದು ಸಹಿತ ವಿಧಾನ ಪರಿಷತ್ತಿನ 11 ಸ್ಥಾನಗಳು ಜೂನ್ ತಿಂಗಳಲ್ಲಿ ಖಾಲಿಯಾಗಲಿದ್ದು, ಮೇಲ್ಮನೆ ಪ್ರವೇಶಕ್ಕೆ ಈಗ ಮೂರು ಪಕ್ಷಗಳಲ್ಲೂ ತೆರೆಮರೆಯಲ್ಲಿ ಲಾಬಿ ಪ್ರಾರಂಭಗೊಂಡಿದೆ. ಕೋಟ ಶ್ರೀನಿವಾಸ ಪೂಜಾರಿ ಸಂಸತ್ ಪ್ರವೇಶಿಸಿದರೆ ಪರಿಷತ್ ವಿಪಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕುವ ಅನಿವಾರ್ಯತೆ ಬಿಜೆಪಿಗಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಸಂಖ್ಯಾಬಲದ ಆಧಾರದಲ್ಲಿ ಈ ಬಾರಿ ಸಿಂಹಪಾಲು ಪರಿಷತ್ ಸ್ಥಾನ ಒದಗಿ ಬರಲಿದೆ. ಬಿಜೆಪಿಗೆ ಮೂರು ಸ್ಥಾನ ಖಚಿತ ಆಗಿದೆ. ಕಾಂಗ್ರೆಸ್ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದ ಸಂದರ್ಭದಲ್ಲಿ ಮೈತ್ರಿ ಬಲದಿಂದ ಜೆಡಿಎಸ್‌ನಿಂದ ಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ಕಾಂಗ್ರೆಸ್‌ನ ಅರವಿಂದಕುಮಾರ್ ಅರಳಿ, ಸಚಿವ ಎನ್.ಎಸ್. ಬೋಸರಾಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಕೆ.ಹರೀಶ್ ಕುಮಾರ್, ಬಿಜೆಪಿಯಲ್ಲಿದ್ದು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವ ಡಾ| ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಬಿಜೆಪಿಯ ರಘುನಾಥ್ ರಾವ್ ಮಲ್ಕಾಪೂರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ, ಪಿ.ಎ.ಮುನಿರಾಜುಗೌಡ ಹಾಗೂ ಜೆಡಿಎಸ್‌ನ ಬಿ.ಎಂ.ಫಾರೂಕ್ ಅವರ ಅವಧಿ ಜೂನ್ 6ಕ್ಕೆ ಅಂತ್ಯಗೊಳ್ಳಲಿದೆ. ಜತೆಗೆ ಜಗದೀಶ್ ಶೆಟ್ಟರ್ ರಾಜೀ ನಾಮೆ ನೀಡಿರುವುದರಿಂದ ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ರಮೇಶ್ ಕುಮಾರ್ ಮೇಲ್ಮನೆಗೆ?
ಕಾಂಗ್ರೆಸ್ ಮೂಲಗಳ ಪ್ರಕಾರ ಕನಿಷ್ಠ 7 ಸ್ಥಾನಗಳು ಲಭಿಸಲಿದ್ದು, ಮಾಜಿ ಸಚಿವ ಕೆ.ರಮೇಶ್ ಕುಮಾರ್ ಅವರನ್ನು ಮೇಲ್ಮನೆಗೆ ಕಳುಹಿಸುವ ಬಗ್ಗೆ ಸಿದ್ದರಾಮಯ್ಯ ಪಾಳಯದಲ್ಲಿ ಲೆಕ್ಕಾಚಾರಗಳು ನಡೆಯುತ್ತಿವೆ. ಇದರೊಂದಿಗೆ ಪರಿಷತ್ ಸಂಖ್ಯಾಬಲ ಹೆಚ್ಚಳಕ್ಕೂ ಕಾಂಗ್ರೆಸ್ ತಂತ್ರಗಾರಿಕೆ ಹೆಣೆಯುತ್ತಿದ್ದು ಸಭಾಪತಿ ಪೀಠದ ಮೇಲೂ ಕಣ್ಣಿಟ್ಟಿದೆ. ಬೋಸರಾಜ್ ಹಾಗೂ ಗೋವಿಂದರಾಜ್ ಅವರು ಮತ್ತೂಂದು ಆವರ್ತಿಗೆ ಆಯ್ಕೆಗೊಳ್ಳುವುದು ನಿಶ್ಚಿತ ಎಂದು ಹೇಳಲಾಗುತ್ತಿದ್ದು ಲೋಕಸಭಾ ಫಲಿತಾಂಶದ ಬಳಿಕ ಸೃಷ್ಟಿಯಾಗುವ ರಾಜಕೀಯ ಅನಿವಾರ್ಯತೆ ಆಧರಿಸಿ ಜಾತಿವಾರು ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ವಿಪಕ್ಷ ನಾಯಕನೂ ಬದಲು?
ಲೋಕಸಭಾ ಚುನಾವಣೆಯಲ್ಲಿ ಒಂದೊಮ್ಮೆ ಕೋಟ ಶ್ರೀನಿವಾಸ್ ಪೂಜಾರಿ ಗೆದ್ದು ಸಂಸತ್ ಪ್ರವೇಶಿಸಿದರೆ ಪರಿಷತ್ತಿನಲ್ಲಿ ವಿಪಕ್ಷ ನಾಯಕ ಸ್ಥಾನವೂ ಬದಲಾಗಲಿದೆ. ಹೀಗಾಗಿ ಮೇಲ್ಮನೆಯಲ್ಲಿ ಸರಕಾರವನ್ನು ಕಟ್ಟಿ ಹಾಕಬಲ್ಲ ಸಮರ್ಥರನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ನೇಮಕ ಮಾಡುವ ಅನಿವಾರ್ಯತೆಯಲ್ಲಿ ಬಿಜೆಪಿ ಇದೆ. ಮಾಜಿ ಸಚಿವ ಸಿ.ಟಿ.ರವಿ ಸಹಿತ ಹಲವರ ಹೆಸರು ಕೇಳಿ ಬರುತ್ತಿದ್ದು, ಮಲ್ಕಾಪೂರೆ ಹಾಗೂ ರವಿಕುಮಾರ್ ಪುನರಾಯ್ಕೆ ಸಾಧ್ಯತೆ ಇದೆ. ಒಂದೊಮ್ಮೆ ಈ ಮೂರು ಹೆಸರುಗಳಿಗೆ ವರಿಷ್ಠರು ಒಪ್ಪಿಗೆ ಸೂಚಿಸದೇ ಇದ್ದರೆ ವಿಪಕ್ಷ ನಾಯಕ ಸ್ಥಾನಕ್ಕೆ ಛಲವಾದಿ ನಾರಾಯಣಸ್ವಾಮಿ ಹೆಸರು ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ಖಾಲಿಯಾಗುವ ಸ್ಥಾನ
– ಅರವಿಂದ ಕುಮಾರ್ ಅರಳಿ, ಸಚಿವ ಎನ್.ಎಸ್.ಬೋಸರಾಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಕೆ.ಹರೀಶ್ ಕುಮಾರ್- ಕಾಂಗ್ರೆಸ್
-ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವ ಡಾ| ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ.
-ರಘುನಾಥ್ ರಾವ್ ಮಲ್ಕಾಪೂರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ, ಪಿ.ಎ.ಮುನಿರಾಜುಗೌಡ- ಬಿಜೆಪಿ
– ಬಿ.ಎಂ.ಫಾರೂಕ್-ಜೆಡಿಎಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.