ಗ್ಯಾರಂಟಿಗಳಿಗೆ 11 ಸಾವಿರ ಕೋಟಿ ರೂ.ಬಳಕೆ

ಎಸ್‌ಸಿ-ಎಸ್‌ಟಿ, ಟಿಎಸ್‌ಪಿಯಡಿ 43,293 ಕೋ.ರೂ. ಕ್ರಿಯಾಯೋಜನೆ

Team Udayavani, Aug 1, 2023, 6:50 AM IST

ಗ್ಯಾರಂಟಿಗಳಿಗೆ 11 ಸಾವಿರ ಕೋಟಿ ರೂ.ಬಳಕೆ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಗೆ ಮೀಸಲಾದ ಅನುದಾನದ ಪೈಕಿ ಒಟ್ಟು 11 ಸಾವಿರ ಕೋಟಿ ರೂ.ಗಳನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಸರಕಾರ ಬಳಸಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಸ್‌ಸಿ- ಎಸ್‌ಟಿ, ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಅವರು ಎಸ್‌ಸಿ-ಎಸ್‌ಟಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರಕಾರ ಬಳಸಿಕೊಳ್ಳುತ್ತಿದೆ ಎಂಬ ಬಿಜೆಪಿ ಆರೋಪವನ್ನು ಮೊದಲಿಗೆ ತಳ್ಳಿಹಾಕಿದರು. ಆದರೆ ಪರಿಷ್ಕೃತ ಬಜೆಟ್‌ನಲ್ಲಿ ನಮೂದಾದ ವಿಚಾರಗಳ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳಿಗೆ ಈ ಅನುದಾನ ಬಳಕೆಯಾಗಲಿದೆ ಎಂದು ಸಮರ್ಥಿಸಿಕೊಂಡರು.

ಎರಡೂ ಸಮುದಾಯಗಳ ಉಪಯೋಜನೆಯಡಿ ಒದಗಿಸಿದ ಅನುದಾನದಲ್ಲಿ ಒಟ್ಟು 11 ಸಾವಿರ ಕೋಟಿ ರೂ. ಹಂಚಿಕೆಯಾಗಿದೆ. ಗ್ಯಾರಂಟಿಗಳಿಗೆ ವಿನಿಯೋಗಿಸಿದ ಅನಂತರ ಇಲಾಖೆವಾರು ಖರ್ಚು ನಿಚ್ಚಳವಾಗಲಿದ್ದು, ಒಟ್ಟು ಶೇ. 24.10ರ ಪ್ರಮಾಣ ಮೀರುವಂತಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಹೊಣೆ ಹೊತ್ತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಮೌಲ್ಯಮಾಪನ
ಒಟ್ಟು 34,293.69 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಸಭೆ ಅನುಮೋದನೆ ನೀಡಿದೆ. ಈ ಪೈಕಿ ಪರಿಶಿಷ್ಟ ಜಾತಿಗಳಿಗೆ 24,333 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡಗಳಿಗೆ 9,961 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.

ಅನುದಾನ ಬಳಸಿದ ಬಗ್ಗೆ ಅಧ್ಯಯನ, ಫ‌ಲಾನುಭವಿಗಳ ಸ್ಥಿತಿಗತಿ ಬದಲಾವಣೆ ಬಗ್ಗೆ ಮೌಲ್ಯಮಾಪನ ವರದಿ ಸಲ್ಲಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. ಕಾಯ್ದೆ ಜಾರಿಯಾಗಿ 10 ವರ್ಷಗಳಾಗಿವೆ. ಯೋಜನೆಯ ಫ‌ಲ ಮತ್ತು ಪರಿಣಾಮಗಳ ಕುರಿತು 22 ಯೋಜನೆಗಳ ಅಧ್ಯಯನ ಮತ್ತು ಮೌಲ್ಯಮಾಪನ ನಡೆಸಿ ಸಾಮಾಜಿಕ, ಆರ್ಥಿಕ ಬದಲಾವಣೆ ಸಂಸ್ಥೆ (ಐಸೆಕ್‌) ಮಧ್ಯಂತರ ವರದಿ ಸಲ್ಲಿಸಿದೆ. ಸಚಿವನಾಗಿ ಎರಡು ತಿಂಗಳುಗಳಷ್ಟೇ ಕಳೆದಿವೆ. ಮಧ್ಯಂತರ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಆದರೆ ಅಂತಿಮ ವರದಿ ಪಡೆಯಲು ಗಂಭೀರ ಪ್ರಯತ್ನ ನಡೆಸಿದ್ದೇನೆ ಎಂದರು.

ಸಮಗ್ರ ಅಧ್ಯಯನ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಯುಜಿಸಿ ಮಾಜಿ ಅಧ್ಯಕ್ಷ ಪ್ರೊ| ಸುಖದೇವ್‌ ಥೋರಟ್‌ ಅವರನ್ನು ತೊಡಗಿಸಿಕೊಳ್ಳಬೇಕು ಎಂಬ ಅಪೇಕ್ಷೆಯಿದ್ದು, ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಥೋರಟ್‌ ಸಮ್ಮತಿಸಿದ ಅನಂತರ ಸ್ಥೂಲ ಮೌಲ್ಯಮಾಪನ ಮುಂದುವರಿಯಲಿದೆ. ಈ ವರದಿ ಸಲ್ಲಿಕೆಗೆ ನಿರ್ದಿಷ್ಟ ಕಾಲಮಿತಿ ವಿಧಿಸಲು ಆಲೋಚಿಸಿಲ್ಲ ಎಂದರು.

ಹೊಸರೂಪ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬಲವರ್ಧಿಸಿ ಹೊಸ ರೂಪ ನೀಡಲು ತೀರ್ಮಾನಿಸಿದ್ದು, ಕಾರ್ಯಕ್ಷಮತೆ ಹೆಚ್ಚಳ, ತ್ವರಿತ ಸ್ಪಂದನೆ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಆದ್ಯತೆ ನೀಡಲಾಗುವುದು. ಪ್ರತೀ ಮೂರು ತಿಂಗಳಿಗೊಮ್ಮೆ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ಹಾಗೂ 6 ತಿಂಗಳಿಗೊಮ್ಮೆ ವಿಚಕ್ಷಣ ದಳದ ಸಭೆ ನಡೆಸಲಾಗುತ್ತದೆ. ಶೋಷಿತ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕವಾಗಿ ಸಮಾನತೆ ಸಾಧಿಸಬೇಕು ಎನ್ನುವುದು ಸರಕಾರದ ಸಂಕಲ್ಪವಾಗಿದೆ ಎಂದು ತಿಳಿಸಿದರು.

ಎಸ್‌ಸಿ, ಎಸ್‌ಟಿ ಉಪಯೋಜನೆಯಡಿ ಮೀಸಲಿಟ್ಟ ಅನುದಾನ ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೂ ಬೇರೆ ಉದ್ದೇಶಗಳಿಗೆ ಅನುದಾನ ವಿನಿಯೋಗಿಸಿದ 36 ದೂರುಗಳು ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಯುತ್ತಿದೆ. ಲೋಪ ದೃಢಪಟ್ಟರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಡೀಮ್ಡ್ ಎಕ್ಸ್‌ಪೆಂಡಿಚರ್‌ ಹೆಸರಿನಲ್ಲಿ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು ಅವಕಾಶ ನೀಡುತ್ತಿದ್ದ ಕಾಯ್ದೆಯ 7ಡಿ ಉಪಬಂಧವನ್ನು ಸರಕಾರ ರದ್ದುಗೊಳಿಸಿದೆ ಎಂದರು.

ಈ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದೆ. ಅದರಂತೆ ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳುತ್ತೇನೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಸಿಎಂ ಸಂವಿಧಾನದ ಗಂಭೀರ ವಿದ್ಯಾರ್ಥಿ
ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವ ಎಚ್‌.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಸಂವಿಧಾನದ ಗಂಭೀರ ವಿದ್ಯಾರ್ಥಿ’ ಎಂದು ಉಲ್ಲೇಖೀಸಿದರು. ಈ ಕಾಯ್ದೆ ಜಾರಿಗೆ ತರುವ ಹಿಂದೆ ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆಯನ್ನು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳ ಮತ್ತು ಕಾಯ್ದೆಯ ಆಶಯ ಮತ್ತು ಉದ್ದೇಶಕ್ಕೆ ಧಕ್ಕೆ ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯಾವ ಇಲಾಖೆಗೆ ಎಷ್ಟೆಷ್ಟು ಅನುಮೋದನೆ?
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ 34,293.69 ಕೋಟಿ ರೂ. ಮೊತ್ತದ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಒಪ್ಪಿಗೆ ನೀಡಿದೆ.

ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸಚಿವರಾದ ನಾಗೇಂದ್ರ, ಎಚ್‌.ಕೆ. ಪಾಟೀಲ್ , ಪ್ರಿಯಾಂಕ್‌ ಖರ್ಗೆ, ಎಂ.ಸಿ.ಸುಧಾಕರ್‌, ರಾಜ್ಯ ಸಭಾ ಸದಸ್ಯ ಡಾ.ಎಲ್ ಹನುಮಂತಯ್ಯ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಪ್ರಸಾದ್‌ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ- 5790.67 ಕೋಟಿ , ಇಂಧನ ಇಲಾಖೆ- 5400.98 ಕೋಟಿ ರೂ. ಕಂದಾಯ ಇಲಾಖೆಗೆ – 4041.78 ಕೋಟಿ ರೂ. ಪರಿಶಿಷ್ಟ ಜಾತಿ ಕಲ್ಯಾಣಕ್ಕೆ – 3787.29 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ- 2779.97 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಲಾಖೆಗೆ- 2349.85 ಕೋಟಿ ರೂ. ವಸತಿ ಇಲಾಖೆಗೆ- 1431.5 ಕೋಟಿ ರೂ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ- 1387.35 ಕೋಟಿ ರೂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ – 1296.96 ಕೋಟಿ ರೂ. ಆರೋಗ್ಯ ಇಲಾಖೆಗೆ – 1122.25 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಮುಂದುವರೆದ ಯೋಜನೆಗಳಿಗೆ 1897 ಕೋಟಿ ರೂ. ಈ ವರೆಗೆ ವೆಚ್ಚ ಮಾಡಲಾಗಿದೆ. ಮುಂದಿನ ಎಂಟು ತಿಂಗಳಲ್ಲಿ ಅನುಮೋದನೆಗೊಂಡ ಕ್ರಿಯಾ ಯೋಜನೆಯನ್ವಯ ಯೋಜನೆ ಅನುಷ್ಠಾನ ಮಾಡಿ, 34293.69 ಕೋಟಿ ರೂ. ಅನುದಾನ ಸಂಪೂರ್ಣ ವೆಚ್ಚ ಮಾಡಬೇಕು ಎಂದು ಸೂಚಿಸಲಾಗಿದೆ. ಇಲಾಖೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಅನುದಾನ ಉಳಿದರೆ, ಮರು ಹಂಚಿಕೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.

ವಸತಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 60 ಹಾಗೂ ಹೊರಗಿನ ವಿದ್ಯಾರ್ಥಿಗಳಿಗೆ ಶೇ. 40 ರಷ್ಟು ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಲು ಸೂಚಿಸಲಾಯಿತು. ಪರಿಶಿಷ್ಟ ಜಾತಿ, ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೆ ದಲಿತ ವಿದ್ಯಾರ್ಥಿಗಳು ಡ್ರಾಪ್‌ ಔಟ್‌ ಆಗಬಾರದು. ಬೇಡಿಕೆ ಇರುವೆಡೆ ರುದ್ರಭೂಮಿ ಒದಗಿಸಬೇಕು. ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಿಗೆ ಆದ್ಯತೆ ಮೇರೆಗೆ ಜಾಗ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಯಿತು.

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.