ಕೋಟಾದಲ್ಲಿ 12 ಸೆಂ.ಮೀ.ಮಳೆ
Team Udayavani, Aug 25, 2019, 3:00 AM IST
ಬೆಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಯಿತು. ಕೋಟಾದಲ್ಲಿ ರಾಜ್ಯದಲ್ಲಿಯೇ ಅಧಿಕ ವೆನಿಸಿದ 12 ಸೆಂ.ಮೀ.ಮಳೆ ಸುರಿಯಿತು.
ಇದೇ ಅವಧಿಯಲ್ಲಿ ಪಣಂಬೂರಿನಲ್ಲಿ 9 ಸೆಂ.ಮೀ., ಮಂಗಳೂರು, ಮಂಗ ಳೂರು ವಿಮಾನ ನಿಲ್ದಾಣ, ಹೊನ್ನಾವರಗಳಲ್ಲಿ ತಲಾ 7 ಸೆಂ.ಮೀ., ಕುಂದಾಪುರ, ಕಾರವಾರಗಳಲ್ಲಿ ತಲಾ 6 ಸೆಂ.ಮೀ. ಮಳೆಯಾದ ವರದಿಯಾಗಿದೆ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಆರೆಂಜ್ ಅಲರ್ಟ್: ಕರಾವಳಿ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದೆ. ಆ.26 ಮತ್ತು 27ರಂದು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ “ಆರೆಂಜ್ ಅಲರ್ಟ್’ ನೀಡಿದೆ. ಶನಿವಾರ ದ.ಕ.ಜಿಲ್ಲೆಯ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಯಿತು. ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಧರ್ಮಸ್ಥಳ, ಬಂಟ್ವಾಳ, ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.