12 ಲಕ್ಷ ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ

Team Udayavani, Sep 27, 2017, 9:43 AM IST

27-STATE-11.jpg

ಬೆಂಗಳೂರು: ರಾಜ್ಯದ ಗರ್ಭಿಣಿಯರು, ಬಾಣಂತಿಯರು ಹಾಗೂ ಜನಿಸುವ ಮಕ್ಕಳಲ್ಲಿ ಪೋಷಕಾಂಶ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಗರ್ಭಿಣಿ, ಬಾಣಂತಿಯರಿಗೆ ಮಧ್ಯಾಹ್ನ ಪೌಷ್ಟಿಕ ಬಿಸಿಯೂಟ ಹಾಗೂ ಕಬ್ಬಿಣಾಂಶದ ಮಾತ್ರೆ ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಮಾತೃಪೂರ್ಣ ಯೋಜನೆ’ಗೆ ಮಹಾತ್ಮ ಗಾಂಧಿ ಜಯಂತಿಯಂದು ಚಾಲನೆ ಸಿಗಲಿದೆ. 

ರಾಜ್ಯದ 204 ಶಿಶು ಅಭಿವೃದ್ಧಿ ಯೋಜನೆಗಳ ಲ್ಲಿನ 12 ಲಕ್ಷ ಫ‌ಲಾನುಭವಿಗಳಿಗೆ 65,911 ಅಂಗನ ವಾಡಿ ಕೇಂದ್ರಗಳ ಮೂಲಕ ಮಧ್ಯಾಹ್ನ ಪೌಷ್ಟಿಕ ಬಿಸಿ ಯೂಟ ವಿತರಿಸಲು ಸಿದ್ಧತೆ ನಡೆದಿದೆ. ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯ ರೆಂದು ನೋಂದಣಿ ಯಾದಂದಿನಿಂದ ಹೆರಿಗೆ ಯಾದ 6 ತಿಂಗಳವರೆಗಿನ ಬಾಣಂತಿಯರಿಗೆ ಈ ಸೌಲಭ್ಯ ಸಿಗಲಿದೆ. ಈಗಾಗಲೇ ಎಚ್‌.ಡಿ.ಕೋಟೆ, ಜಮಖಂಡಿ, ಮಧುಗಿರಿ, ಮಾನ್ವಿ ತಾಲೂಕುಗಳ 5 ಯೋಜನಾ ಪ್ರದೇಶಗಳ ಅಂಗನವಾಡಿಗಳಲ್ಲಿ ಪ್ರಾಯೋಗಿಕ ವಾಗಿ ಯೋಜನೆ ಜಾರಿಯಾಗಿದ್ದು, ಉಳಿದೆಡೆ ಅ.2 ರಿಂದ ಆರಂಭವಾಗಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಯುನಿಸೆಫ್ ಸಂಸ್ಥೆ ಸಹಯೋಗದಲ್ಲಿ ಯೋಜನೆ ಜಾರಿಗೊಳಿಸುತ್ತಿದೆ.

ಯೋಜನೆ ಜಾರಿಗೆ ಪೂರ್ವಭಾವಿಯಾಗಿ ಮಂಗಳವಾರ ಮಾಹಿತಿ ನೀಡಿದ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌, “ಗರ್ಭಿಣಿ ಯರು, ಬಾಣಂತಿಯರು ಹಾಗೂ ಮಕ್ಕಳಲ್ಲಿ ಪೌಷ್ಟಿಕಾಂಶ ಪ್ರಮಾಣ ಹೆಚ್ಚಿಸಲು ಮಾತೃಪೂರ್ಣ ಯೋಜನೆ ಜಾರಿಗೆ ಸಿದ್ಧತೆ ನಡೆದಿದೆ. ರಾಜ್ಯದಲ್ಲಿ ವಯಸ್ಸಿಗೆ ತಕ್ಕಂತೆ ಎತ್ತಕ್ಕೆ ಬೆಳೆಯದ ಮಕ್ಕಳ ಸಂಖ್ಯೆ ದಶಕದಿಂದೀಚೆಗೆ ಶೇ.10ರಷ್ಟು ಕಡಿಮೆಯಾಗಿ ದ್ದರೂ ಇನ್ನೂ  .36ರಷ್ಟು ಮಕ್ಕಳ ಎತ್ತರ ಸಹಜಕ್ಕಿಂತ ಕಡಿಮೆ ಇದೆ. ಆ ಹಿನ್ನೆಲೆಯಲ್ಲಿ ವಯಸ್ಸಿಗೆ ಸಹಜವಾದ ಎತ್ತರ ಪಡೆಯುವುದಕ್ಕೆ ಪೂರಕವಾಗಿ ಪೌಷ್ಟಿಕಾಂಶ ನೀಡಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇಲಾಖೆ ನಿರ್ದೇಶಕಿ ದೀಪಾ ಚೋಳನ್‌, ಯುನಿಸೆಫ್ ಸಂಸ್ಥೆಯ ಪೌಷ್ಟಿಕಾಂಶ ತಜ್ಞೆ ಡಾ.ಖ್ಯಾತಿ ತಿವಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ರಾಜ್‌ಕುಮಾರ್‌ ಇತರರು ಉಪಸ್ಥಿತರಿದ್ದರು. 

ಬಿಸಿಯೂಟದಲ್ಲಿ ಏನಿರುತ್ತೆ?
ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ನ್ಯೂಟ್ರಿಷನ್‌ (ಎನ್‌ಐಎನ್‌) ಪ್ರಕಾರ ಗರ್ಭಿಣಿಯರು ನಿತ್ಯ ಊಟದಲ್ಲಿ 2,580 ಕ್ಯಾಲರಿ, 78 ಗ್ರಾಂ ಪ್ರೋಟಿನ್‌ ಹಾಗೂ 1,200 ಮಿ.ಗ್ರಾಂನಷ್ಟು ಕ್ಯಾಲ್ಸಿಯಂ  ಸೇವಿಸುವ ಅಗತ್ಯವಿದೆ. ಅದರಂತೆ ಮಾತೃಪೂರ್ಣ ಯೋಜನೆಯಡಿ ಪೌಷ್ಟಿಕ ಬಿಸಿಯೂಟದಲ್ಲಿ ಗರ್ಭಿಣಿಯರಿಗೆ 1342 ಕ್ಯಾಲರಿ, 41 ಗ್ರಾಂ ಪ್ರೋಟಿನ್‌ ಹಾಗೂ 578 ಮಿ.ಗ್ರಾಂ. ಕ್ಯಾಲ್ಸಿಯಂ ಸಿಗಲಿದೆ. ಅನ್ನ, ಸಾಂಬಾರ್‌, ಪಲ್ಯದ ಜತೆಗೆ ಬೇಯಿಸಿದ ಮೊಟ್ಟೆ ಹಾಗೂ 200. ಮಿ.ಲೀ. ಹಾಲು, ಬೆಲ್ಲ ಹಾಗೂ ಕಡಲೆಬೀಜದ ಬμì ನೀಡಲಾಗುತ್ತದೆ.  ತಿಂಗಳಿಗೆ 25 ದಿನ ಊಟ ವಿತರಿಸಲಾಗುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆಕಾಳು ವಿತರಿಸಲಾಗುತ್ತದೆ. 100 ದಿನ ಕಬ್ಬಿನಾಂಶ ಮಾತ್ರೆ ನೀಡಲಾಗುವುದು. 8 ತಿಂಗಳು ತುಂಬಿದ ಹಾಗೂ ಹೆರಿಗೆಯಾದ 45 ದಿನದ ಬಾಣಂತಿಯರಿಗೆ ಮನೆಗೆ ಊಟ ತಲುಪಿಸುವ ವ್ಯವಸ್ಥೆ ಇರಲಿದೆ.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.