ಶ್ರವಣಬೆಳಗೊಳದಲ್ಲಿ ಭಕ್ತರ ವಸತಿಗೆ 12 ಉಪನಗರ ನಿರ್ಮಾಣ
Team Udayavani, Aug 22, 2017, 8:35 AM IST
ಬೆಂಗಳೂರು: ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ವಿಖ್ಯಾತ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ 489 ಎಕರೆ ಪ್ರದೇಶದಲ್ಲಿ ತಾತ್ಕಾಲಿಕವಾಗಿ 12 ಉಪನಗರಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಮಹಾಮಸ್ತಕಾಭಿಷೇಕ ಪೂರ್ವಭಾವಿ ಸಭೆಯಲ್ಲಿ, 2018ರ ಫೆಬ್ರವರಿ 7 ರಿಂದ 26 ರವರೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ 35 ರಿಂದ 40 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ವಸತಿ ಹಾಗೂ ಇತರೆ ಸೌಕರ್ಯ ಒದಗಿಸಲು 12 ಉಪನಗರಗಳನ್ನು ನಿರ್ಮಿಸಲು ನಿರ್ಧರಿಸಲಾಯಿತು.
ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಉಪನಗರಗಳ
ನಿರ್ಮಾಣಕ್ಕೆ 75 ಕೋಟಿ ರೂ. ಮೀಸಲಿಡಲಾಗಿದೆ. 12 ಉಪನಗರಗಳ ನಿರ್ಮಾಣಕ್ಕೆ ಶ್ರವಣಬೆಳಗೊಳ ಸುತ್ತ
ರೈತರಿಂದ ಜಮೀನು ಪಡೆದು ಅವರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
57 ಅಡಿ ಎತ್ತರವಿರುವ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕ ಮಾಡಲು 12 ಕೋಟಿ ರೂ. ವೆಚ್ಚದಲ್ಲಿ ಅಟ್ಟಣಿಗೆ ನಿರ್ಮಾಣ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜರ್ಮನ್ ತಂತ್ರಜ್ಞಾನದಡಿ ಅಟ್ಟಣಿಗೆಯನ್ನು ಲೋಕೋಪಯೋಗಿ ಇಲಾಖೆಯೇ ನಿರ್ಮಾಣ ಮಾಡಲಿದೆ ಎಂದು ತಿಳಿಸಿದರು. ಮಹಾಮಸ್ತಕಾಭಿಷೇಕ ಅಂಗವಾಗಿ ಅಲ್ಲಿರುವ ಕಲ್ಯಾಣಿ ಶುದಿಟಛೀಕರಣ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಶ್ರವಣಬೆಳಗೊಳ ಸುತ್ತಮುತ್ತಲಿನ ರಸ್ತೆ ದುರಸ್ತಿ
ಸೇರಿ ಇತರೆ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಮಹಾಮಸ್ತಕಾಭಿಷೇಕ ಯಶಸ್ವಿಗೆ ಉಪ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ನೆರವು ನೀಡಲು ಕೇಂದ್ರ ನಿರಾಕರಣೆ: 12 ವರ್ಷಕ್ಕೆ ಒಮ್ಮೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ವಿಶ್ವದೆಲ್ಲೆಡೆ ಇರುವ ಜೈನ ಸಮಾಜದವರು ಆಗಮಿಸುತ್ತಾರೆ 2006ರಲ್ಲಿ ಮಹಾಮಸ್ತಕಾಭಿಷೇಕ ನಡೆದಾಗ ಕೇಂದ್ರ ಸರ್ಕಾರ 90 ಕೋಟಿ ರೂ. ಅನುದಾನ ನೀಡಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ನೆರವು ಕೊಡುವುದಿಲ್ಲ ಎಂದು ಹೇಳಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿಯವರನ್ನು ನೇರ ಭೇಟಿ ಮಾಡಿ ಮನವಿ ಮಾಡಿದರೂ ಅನುದಾನ ಕೊಟ್ಟಿಲ್ಲ.
ಕುಂಭಮೇಳಕ್ಕೆ ಅನುದಾನ ಕೊಡುವ ಕೇಂದ್ರ ಸರ್ಕಾರ ಮಹಾಮಸ್ತಕಾಭಿಷೇಕಕ್ಕೆ ಅನುದಾನ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಸಚಿವ ಮಂಜು, ರಾಜ್ಯ ಸರ್ಕಾರ ಈಗಾಗಲೇ 175 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನುಳಿದ ನೆರವನ್ನು ಇತರೆ ಮೂಲಗಳಿಂದ ಕ್ರೋಢೀಕರಿಸಲಾಗುವುದು ಎಂದರು.
ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ, ಪ್ರಧಾನಿಯವರಿಗೆ ಆಹ್ವಾನ ನೀಡಲಾಗುವುದು. ಆಹ್ವಾನ ನೀಡಲು ಕೇಂದ್ರದ ಬಳಿ ಹೋದಾಗ ಮತ್ತೆ ಅನುದಾನಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು. ಶಾಸಕ ಸಿ.ಎನ್.ಬಾಲಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.