ಒಂದೇ ದಿನ 1243 ಆಸ್ತಿ ನೋಂದಣಿ
Team Udayavani, Apr 30, 2020, 1:00 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭವಾಗಿದ್ದು, ಬುಧವಾರ 1243 ಆಸ್ತಿ ನೋಂದಣಿಯಾಗಿದೆ. 3.23 ಕೋಟಿ ರೂ. ಮುದ್ರಾಂಕ ಶುಲ್ಕ ಹಾಗೂ 69 ಲಕ್ಷ ರೂ. ನೋಂದಣಿ ಶುಲ್ಕ ಸೇರಿದಂತೆ ಒಟ್ಟು 3.92 ಕೋಟಿ ರೂ. ಸಂಗ್ರಹವಾಗಿದೆ. ಬೆಂಗಳೂರು ಸೇರಿದಂತೆ ಕೆಂಪು ವಲಯದಲ್ಲಿದ್ದ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆಯ ಉಪನೋಂದಣಾಧಿಕಾರಿ ಕಚೇರಿಗಳು ಕಳೆದ ಶುಕ್ರವಾರದಿಂದ (ಏ.24) ಕಾರ್ಯಾರಂಭವಾಗಿದ್ದವು. ಇದೀಗ ಬೆಂಗಳೂರಿನ 42 (ಕಂಟೈನ್ ಮೆಂಟ್ ವಲಯದಲ್ಲಿರುವರಿಂದ ಬೇಗೂರು ಉಪನೋಂದಣಾಧಿಕಾರಿ ಕಚೇರಿ ತೆರೆದಿಲ್ಲ) ಸೇರಿದಂತೆ ರಾಜ್ಯಾದ್ಯಂತ ಇರುವ ಎಲ್ಲ ಉಪನೋಂದಣಾಧಿಕಾರಿ ಕಚೇರಿಗಳು ಕಾರ್ಯಾರಂಭವಾಗಿವೆ.
ಏ. 24ರಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನ ಕೇವಲ 10 ಲಕ್ಷ ರೂ. ಶುಲ್ಕ ಸಂಗ್ರಹವಾಗಿತ್ತು. ಮಂಗಳವಾರ ಕೂಡ ಒಂದು ಕೋಟಿ ರೂ. ಶುಲ್ಕ ಸಂಗ್ರಹವಾಗಿತ್ತು. ಬುಧವಾರ ರಾಜ್ಯಾದ್ಯಂತ 1242 ಆಸ್ತಿ ನೋಂದಣಿಯಾಗಿದ್ದು, ಒಟ್ಟು 3.92 ಕೋಟಿ ರೂ. ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಆಸ್ತಿ ನೋಂದಣಿ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಮೂಲಗಳು ತಿಳಿಸಿವೆ. ಸಾಮಾನ್ಯ ಸಂದರ್ಭದಲ್ಲಿ ಮಾಸಿಕ ಸುಮಾರು 1000 ಕೋಟಿ ರೂ.ನಷ್ಟು ಮುಂದ್ರಾಂಕ ಮತ್ತು ನೋಂದಣಿ ಶುಲ್ಕ ಸಂಗ್ರಹವಾಗುತ್ತಿತ್ತು. ನಿತ್ಯ 7000ಕ್ಕೂ ಹೆಚ್ಚು ಆಸ್ತಿ ನೋಂದಣಿ ಮೂಲಕ 30ರಿಂದ 40 ಕೋಟಿ ರೂ. ಶುಲ್ಕ ಸಂಗ್ರಹವಾಗುತ್ತಿತ್ತು. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನೋಂದಣಿ ಕಡಿಮೆ
ಇದೆ. ಬೆಂಗಳೂರಿನಲ್ಲೂ ಆಸ್ತಿ ನೋಂದಣಿ ಕಡಿಮೆ ಇದೆ ಎಂದು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.