ಮಂಕಿಯಲ್ಲಿ 13 ಸೆಂ.ಮೀ. ಮಳೆ
Team Udayavani, Aug 31, 2019, 3:00 AM IST
ಬೆಂಗಳೂರು/ಮಂಗಳೂರು: ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಹಲವೆಡೆ, ದಕ್ಷಿಣ ಒಳನಾಡಿನ ಕೆಲ ವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಯಿತು. ಮಂಕಿಯಲ್ಲಿ ರಾಜ್ಯದಲ್ಲಿ ಯೇ ಅಧಿಕವೆನಿಸಿದ 13 ಸೆಂ. ಮೀ.ಮಳೆ ಸುರಿಯಿತು.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಂಕಿ-ಮಾವಿನಕಟ್ಟಾ, ಗುಳದಕೇರಿ, ಸಾರಸ್ವತಕೇರಿ, ದಾಸನಮಕ್ಕಿ, ಕಾಸರಕೋಡ ಹೊಸಪಟ್ಟಣ, ನಾಜಗಾರ ಮೊದಲಾದ ತಗ್ಗು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಮಳೆ ಸುರಿದು, ಜನಜೀವನ ಅಸ್ತವ್ಯಸ್ತವಾಗಿದೆ. ಗುಳದಕೇರಿಯಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ. 30 ಮನೆಗಳಿಗೆ ನೀರು ನುಗ್ಗಿದ್ದು, ಈ ಕುಟುಂಬದ 50 ಜನರನ್ನು ಸ್ಥಳಾಂತರಿಸಲಾಗಿದೆ.
ಇದೇ ಅವಧಿಯಲ್ಲಿ ಗೋಕರ್ಣದಲ್ಲಿ 11 ಸೆಂ.ಮೀ., ಅಂಕೋಲಾದಲ್ಲಿ 9 ಸೆಂ.ಮೀ., ಕೋಟಾ, ಕುಂದಾಪುರಗಳಲ್ಲಿ ತಲಾ 8 ಸೆಂ.ಮೀ., ಸುಬ್ರಹ್ಮಣ್ಯ, ಕಾರ್ಕಳ, ಸಿದ್ದಾಪುರ, ಹೊನ್ನಾವರಗಳಲ್ಲಿ ತಲಾ 7 ಸೆಂ.ಮೀ. ಮಳೆಯಾದ ವರದಿಯಾಗಿದೆ. ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.