ಭಟ್ಕಳದಲ್ಲಿ 14 ಸೆಂ.ಮೀ. ಮಳೆ

Team Udayavani, Jul 23, 2019, 3:03 AM IST

bhatkal

ಬೆಂಗಳೂರು: ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಎಲ್ಲೆಡೆ ಮತ್ತು ಒಳನಾಡಿನ ಕೆಲವೆಡೆ ಉತ್ತಮ ಮಳೆಯಾಯಿತು. ಭಟ್ಕಳದಲ್ಲಿ ರಾಜ್ಯದಲ್ಲಿಯೇ ಅಧಿಕ 14 ಸೆಂ.ಮೀ.ಮಳೆ ಸುರಿಯಿತು.

ಕಾವೇರಿಯ ಉಗಮ ಸ್ಥಾನ ಕೊಡಗಿನ ತಲಕಾವೇರಿಯಲ್ಲಿ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿಯ ನೀರು ರಸ್ತೆಯನ್ನು ಆವರಿಸಲು ಕೆಲವು ಅಡಿಗಳಷ್ಟೇ ಬಾಕಿ ಇದೆ. ಅಲ್ಲಲ್ಲಿ ಲಘು ಪ್ರಮಾಣದಲ್ಲಿ ಧರೆಗಳು ಕುಸಿಯುತ್ತಲೇ ಇವೆ. ಸೋಮವಾರಪೇಟೆಯ ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕೆಲ ಮನೆಗಳ ಗೋಡೆ ಕುಸಿದಿದೆ.

ಮಂಗಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು, ಕುಂಜತ್ತಬೈಲಿನಲ್ಲಿ ಮನೆ, ಬಿಜೈಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಕಂಕನಾಡಿ ವೃತ್ತದ ಬಳಿ ಬೃಹತ್‌ ಆಲದ ಮರ ಉರುಳಿ ಬಿದ್ದು, ವಿದ್ಯಾರ್ಥಿನಿ ಸಹಿತ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಿದರು.

ಇದೇ ವೇಳೆ, ಫಳ್ನೀರ್‌, ಸುರತ್ಕಲ್‌ನಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಯಿತು. ಪುತ್ತೂರು, ಸುಬ್ರಹ್ಮಣ್ಯ ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಕುಮಾರಧಾರಾ ಮತ್ತು ದರ್ಪಣ ತೀರ್ಥ ನದಿಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ. ಸುಬ್ರಹ್ಮಣ್ಯದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಶೃಂಗೇರಿ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು, ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಬುಧವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

ಮುಂದುವರಿದ ತೆರವು ಕಾರ್ಯಾಚರಣೆ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ- ಸಕಲೇಶಪುರ ರೈಲು ಮಾರ್ಗದ ಮಣಿಬಂಡ ಎಂಬಲ್ಲಿ ಹಳಿಗೆ ಉರುಳಲು ಸಿದ್ಧಗೊಂಡ ಬಂಡೆಗಲ್ಲು ತೆರವು ಕಾರ್ಯಾಚರಣೆ ಸೋಮವಾರವೂ ನಡೆಯಿತು. ಒಂದೆಡೆ ತೆರವು ಕಾಮಗಾರಿ ನಡೆಯುತ್ತಿದ್ದರೆ, ಇನ್ನೊಂದೆಡೆ ಮತ್ತೆ ಬಂಡೆಯ ಛಿದ್ರ ಭಾಗಗಳು ಮತ್ತು ಮಣ್ಣು ಹಳಿಯ ಮೇಲೆ ಕುಸಿಯುತ್ತಿವೆ. ತೆರವು ಕಾರ್ಯ ಮುಗಿಸಲು ಇನ್ನೂ ಮೂರು ದಿನ ಹಿಡಿಯಬಹುದಾಗಿದ್ದು, ರೈಲು ಸಂಚಾರ ವಿಳಂಬವಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.