ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಎಲ್ಲ ಅಧಿಕಾರಿಗಳಿಗೆ ಸಿಎಂ ತಾಕೀತು

ಗಂಧದ ಮರಗಳನ್ನು ಬೆಳೆಸಲು ಕಟ್ಟುಪಾಡುಗಳು ಸಡಿಲ

Team Udayavani, Jun 25, 2022, 5:24 PM IST

cm-bommai

ಬೆಂಗಳೂರು: ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಎಲ್ಲಾ ಹಂತದ ಅಧಿಕಾರಿಗಳು ಕಚೇರಿಗಳನ್ನು ಬಿಟ್ಟು ತಿಂಗಳಿಗೆ 15 ದಿನ ಅರಣ್ಯದಲ್ಲಿರಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ತಾಕೀತು ಮಾಡಿದ್ದಾರೆ.

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನಿಗಮದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದೀರಿ. ಕಚೇರಿ ಬಿಟ್ಟು ಹೊರಗೇ ಬರುತ್ತಿಲ್ಲ. ಅರಣ್ಯ ಕ್ಕೆ ಹೋಗಿ. ತಿಂಗಳಲ್ಲಿ 15 ದಿನ ಅರಣ್ಯದಲ್ಲಿ ಇದ್ಧರೆ ಉಳಿದ ಸಿಬ್ಬಂದಿಗೆ ಆತ್ಮಸ್ಥೈರ್ಯ ಬರುತ್ತದೆ. ಅವರಿಗೆ ಮಾರ್ಗದರ್ಶನ ಸಿಗುತ್ತದೆ. ಹಿರಿಯ ಅಧಿಕಾರಿಗಳು ಅರಣ್ಯ ಕಾಪಾಡುವ ಕೆಲಸದಲ್ಲಿ ಇದ್ದಾರೆ ಎಂಬ ಭಾವನೆ ಬರುತ್ತದೆ. ಹೀಗಾಗಿ 15 ದಿನ ಅರಣ್ಯದಲ್ಲಿ ಇರಿ ಎಂದು ಸೂಚನೆ ನೀಡಿದರು.

ಐದು ವರ್ಷಗಳಲ್ಲಿ ಅರಣ್ಯ ಪ್ರದೇಶವನ್ನು ಕನಿಷ್ಠ ಶೇ. 30ಕ್ಕೆ ಹೆಚ್ವಿಸಲು ಪ್ರಯತ್ನಿಸಿ. ಪ್ರಸ್ತುತ ಶೇ 23 ರಷ್ಟಿರುವ ಅರಣ್ಯ ಪ್ರದೇಶವನ್ನು ಐದು ವರ್ಷಗಳಲ್ಲಿ ಕನಿಷ್ಠ ಶೇ 30ಕ್ಕೆ ಹೆಚ್ವಿಸಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪರಿಸರ ಸಮತೋಲನಕ್ಕೆ ಪರಿಸರ ವಿಸ್ತರಣೆ ಅಗತ್ಯ

ಸಂಸ್ಥೆಯೊಂದು ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಸಾಧನೆಯ ಸಂಕೇತ. ವಿಶೇಷವಾಗಿ ಪರಿಸರ ರಕ್ಷಣೆ ಮಾಡಿ , ಅರಣ್ಯ ಉತ್ಪನ್ನಗಳನ್ನು ನಾಗರಿಕ ಸಮಾಜಕ್ಕೆ ಸಮರ್ಪಕವಾಗಿ ಬಳಸಿಕೊಳ್ಳುವ ಕೆಲಸವನ್ನು ಮಾಡುವ ದೊಡ್ಡ ಹೊಣೆಗಾರಿಕೆ ನಿಗಮಕ್ಕಿದೆ. ನಿಗಮ ಪ್ರಾರಂಭವಾದ ಸಂದರ್ಭದಲ್ಲಿ ಕರ್ನಾಟಕದ ಜನಸಂಖ್ಯೆ ಇಷ್ಟಿರಲಿಲ್ಲ. ಅರಣ್ಯ ಹಾಗೂ ಮನುಷ್ಯನ ಸಂಬಂಧ, ಅರಣ್ಯ ಹಾಗೂ ನಾಗರಿಕತೆಯ ಸಂಬಂಧ ಇನ್ನಷ್ಟು ಗಟ್ಟಿಯಾಗಲು ಅರಣ್ಯ ಉತ್ಪಾದನೆ ಗಳನ್ನು ನಾಗರಿಕರ ಉಪಯೋಗಕ್ಕಾಗಿ ಯಾವ ರೀತಿ ಬಳಸಿಕೊಳ್ಳಬಹುದು, ಆ ರೀತಿಯ ಅರಣ್ಯವನ್ನು ಯಾವ ರೀತಿ ಬೆಳೆಸಬಹುದೆಂಬ ಚಿಂತನೆಯಿಂದ ಇದನ್ನು ಮಾಡಲಾಗಿದೆ. ಈಗ ಜನಸಂಖ್ಯೆ ಹೆಚ್ಚಾಗಿದ್ದು, ಅರಣ್ಯ ಪ್ರದೇಶ ಕಡಿಮೆಯಾಗಿದೆ. ನಮ್ಮ ಮುಂದಿರುವ ಸವಾಲು ಪರಿಸರ ಸಮತೋಲನವಾಗಬೇಕಾದರೆ ನಮ್ಮ ನಿಸರ್ಗದತ್ತ ಸಂಪತನ್ನು ಇನ್ನಷ್ಟು ವಿಸ್ತರಿಸುವ ಅವಶ್ಯಕತೆ ಮತ್ತು ಅನಿವಾರ್ಯತೆ ಇದೆ. ಮನುಷ್ಯ ಮತ್ತು ನಿಸರ್ಗ ಕೂಡಿ ಬಾಳಿದರೆ ವಾತಾವರಣ ಪರಿಸರ ಬದುಕು, ಜೀವನ ಗುಣಮಟ್ಟ ಉತ್ತಮವಾಗಿರುತ್ತದೆ. ನಿಸರ್ಗಕ್ಕೆ ವಿರುದ್ಧವಾಗಿ ನಮ್ಮ ಚಟುವಟಿಕೆ ಗಳನ್ನು ಮಾಡಿದಾಗ ಅದು ದೊಡ್ಡ ಪ್ರಮಾಣದ ಅನಾಹುತಗಳಿಗೆ ಕಾರಣವಾಗಿರುವುದನ್ನು ಕಾಣುತ್ತಿದ್ದೇವೆ. ಹವಾಮಾನ ಬದಲಾವಣೆಯಾಗುತ್ತಿದೆ. ನಮ್ಮ ಮುಂದಿರುವ ಸವಾಲುಗಳನ್ನು ಎದುರಿಸಲು ಈ ನಿಗಮದ ಧ್ಯೇಯ ಉದ್ದೇಶಗಳನ್ನು ಸ್ವಲ್ಪ ಮಟ್ಟಿಗೆ ಬದಲಾವಣೆ ಮಾಡುವ ಅಗತ್ಯವಿದೆ. ನೀಲಗಿರಿ ಮರಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಿ, ಕಾಗದ ಮಾಡಲು ಬಳಕೆ ಮಾಡಲಾಗುತ್ತಿತ್ತು. ಅದರಿಂದ ಲಾಭವೂ ಆಗುತ್ತಿತ್ತು.ಆ ರೀತಿಯ ಲಾಭದ ಅವಶ್ಯಕತೆ ಇಲ್ಲ. ಅರಣ್ಯ ಬೆಳೆಸುವುದರ ಜೊತೆಗೆ ಅದರ ಚಕ್ರದಲ್ಲಿ ಅರಣ್ಯ ಉತ್ಪನ್ನಗಳನ್ನು ತಯಾರಿಸಲು ನೀಲಗಿರಿ, ಅಕೇಶಿಯಾ ಬಿಟ್ಟು, ಹೊಸ ತಳಿಗಳನ್ನು ಬೆಳೆಸಲು ಚಿಂತನೆ ಮಾಡಬೇಕು. ನೀಲಗಿರಿಯ ದುಷ್ಪರಿಣಾಮ ಭೂಮಿಯ ಮೇಲಾಗುತ್ತಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ ಎಂದರು.

ಪರಿಸರ ಆಯವ್ಯಯ

ಈ ಬಾರಿಯ ಬಜೆಟ್ ನಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಪರಿಸರ ಆಯವ್ಯಯವನ್ನು ರೂಪಿಸಲಾಗಿದೆ. ಪ್ರತಿ ವರ್ಷ ಪರಿಸರ ಹಾನಿಯಾಗುತ್ತದೆ.ಅರಣ್ಯ, ಗಾಳಿ, ಭೂಮಿ, ನೀರು, ಮಣ್ಣು, ಹಾನಿಯಾದಾಗ ಮಾನವನ ಜೀವನ ಸಂಕಷ್ಟಕ್ಕೆ ಈಡಾಗುತ್ತದೆ. ಪ್ರತಿ ವರ್ಷ ಉಂಟಾಗುವ ಹಾನಿಯನ್ನು ಅದೇ ವರ್ಷದಲ್ಲಿ ಸರಿದೂಗಿಸುವ ಕೆಲಸವನ್ನು ಮಾಡಲಾಗುತ್ತದೆ. ಇದನ್ನು ನಿರಂತರವಾಗಿ ಮಾಡಿದಾಗ ಮಾತ್ರ ನಮ್ಮ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು. ಈ ಮೂಲಕ ಉತ್ತಮ ಪರಿಸರ ನಿರ್ಮಾಣ ಸಾಧ್ಯವಿದೆ. ಈ ದೂರದೃಷ್ಟಿ ಇಟ್ಟುಕೊಂಡು ಸುಮಾರು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅರಣ್ಯಗಳ ಸರ್ವೆ ಕೈಗೊಂಡು ನಿರ್ದಿಷ್ಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಬೇಕು. ಅನುದಾನವಿರುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದು ಮಾತ್ರವಲ್ಲ, ಪರಿಸರ ಉಳಿಸುವ, ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಭೂಮಿಗೆ ಒಳಿತಾಗುವ ಕಾರ್ಯಕ್ರಮ ಗಳ ರೂಪಿಸಿದರೆ ಅಗತ್ಯ ನೆರವನ್ನು ಸರ್ಕಾರ ನೀಡುತ್ತದೆ. ಈ ವರ್ಷ ಒದಗಿಸಿರುವ 100 ಕೋಟಿ ರೂ. ಗಳನ್ನು ಸಮರ್ಪಕವಾಗಿ ಬಳಸಿದರೆ ಇನ್ನು 100 ಕೋಟಿಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

ನಿಗಮದ ಆರ್ಥಿಕ ಸಬಲೀಕರಣ
ನಿಗಮ ತನ್ನ ಗುರಿ ಧ್ಯೇಯೋದ್ದೇಶಗಳನ್ನು ಇಂದಿನ ಅವಶ್ಯಕತೆ ಮತ್ತು ಸವಾಲುಗಳಿಗೆ ತಕ್ಕಂತೆ ಬದಲಾಯಿಸಿಕೊಳ್ಳಬೇಕು. ನಿಗಮವನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಸರ್ಕಾರ ಸಿದ್ಧವಿದ್ದು, ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

ಅರಣ್ಯ ಸಂಪತ್ತನ್ನು ಗಳಿಸಲು ಮೊದಲ ಆದ್ಯತೆ ನೀಡಬೇಕು. ಬಂಜರು ಭೂಮಿಯಲ್ಲಿ, ವಿಶೇಷವಾಗಿ ಹೈದರಾಬಾದ್ ಕರ್ನಾಟಕದಲ್ಲಿ ಹಸಿರು ಬೆಳಸಬೇಕು. ಹಸಿರು ಪದರವನ್ನು ಹೆಚ್ವಿಸುವುದರಿಂದ ಮಣ್ಣು ಹಾಗೂ ಪರಿಸರವನ್ನು ರಕ್ಷಿಸಬಹುದು. ಈ ಬಗ್ಗೆ ಹೆಚ್ಚಿನ ಗಮನ ನೀಡಲು ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಕಟ್ಟುಪಾಡುಗಳು ಸಡಿಲ
ಗಂಧದ ಮರಗಳನ್ನು ಬೆಳೆಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ರೈತರು ಬೆಳೆದು ಅದರಿಂದ ಆದಾಯ ಪಡೆದುಕೊಳ್ಳಯುವಂತಾಗಬೇಕು. ಗಂಧದ ಮರ ಕಳ್ಳತನ ನಿಲ್ಲಿಸಲು ಹೆಚ್ಚಾಗಿ ಬೆಳೆಯಬೇಕು ಹಾಗೂ ಹಲವಾರು ವರ್ಷಗಳಿಂದ ಇರುವ ಕಟ್ಟುಪಾಡುಗಳನ್ನು ಸಡಿಲಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದರು.

ಆಗ್ರೋ ಫಾರೆಸ್ಟರಿಗೆ ಅತಿ ಹೆಚ್ಚಿನ ಆದ್ಯತೆ ನೀಡಿ
ಆಗ್ರೋ ಫಾರೆಸ್ಟರಿ ಅರಣ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ತಳಮಟ್ಟದಲ್ಲಿದೆ. ಅದಕ್ಕೆ ಆದ್ಯತೆ ನೀಡಬೇಕು. ರೈತ ಮಾತ್ರ ಪರಿಸರವನ್ನು ಉಳಿಸಲು ಸಾಧ್ಯ. ಭೂಮಿಯ ಜೊತೆಗೆ ನಿರಂತರವಾಗಿ ಸಂಪರ್ಕವಿರುವವನು ರೈತ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಗ್ರೋ ಫಾರೆಸ್ಟರಿಯತ್ತ ಗಮನ ಹರಿಸಬೇಕು. ಮಣ್ಣಿನ ಸಂರಕ್ಷಣೆಗೆ ಆಗ್ರೋ ಫಾರೆಸ್ಟರಿ ಯಿಂದ ಸಾಧ್ಯ. ವನಮಹೋತ್ಸವಕ್ಕೆ 13 ಲಕ್ಷ ಸಸಿಗಳನ್ನು ನೆಡಲಾಗುತ್ತಿರುವುದು ಸ್ವಾಗತಾರ್ಹ. ಇದನ್ನು ಇನ್ನಷ್ಟು ಹೆಚ್ಚಿಸಬೇಕು. ಸಸಿಗಳ ಉತ್ಪಾದನೆಯೂ ರಾಜ್ಯದಲ್ಲಿ ಹೆಚ್ಚಾಗಬೇಕು. ಆಗ ಮಾತ್ರ ಅರಣ್ಯ ಪ್ರದೇಶವನ್ನು ಹೆಚ್ಚಿಸಬಹುದು. ಸಸಿಗಳ ಸಂಖ್ಯೆ ಹೆಚ್ಚಾದಾಗ ಅವುಗಳನ್ನು ನೆಟ್ಟು ಉಳಿಸಲು ಅಗತ್ಯವಿರುವ ಯೋಜನೆಯನ್ನು ರೂಪಿಸೋಣ. ಎನ್.ಆರ್. ಇ. ಜಿ.ಎ ಯೋಜನೆಗಳನ್ನು ಸಂಯೋಜಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಅರಣ್ಯ ಇಲಾಖೆ ಹಾಗೂ ಅರಣ್ಯ ಸಂರಕ್ಷಕರ ಸೇವಾ ವಿಚಾರಗಳನ್ನು ಪರಿಗಣಿಸಿ ಅಗತ್ಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ತಿಳಿಸಿದರು.

ಅರಣ್ಯ ಸಂರಕ್ಷಣೆಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿ
ಪಶ್ಚಿಮ ಘಟ್ಟಗಳು ಜೀವ ವೈವಿಧ್ಯತೆವುಳ್ಳ ಪ್ರದೇಶವಾಗಿದ್ದು ಅದನ್ನು ವಿಸ್ತರಣೆ ಮಾಡಬೇಕು. ಅರೆಮಲೆನಾಡು ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರೂ ಸಹಭಾಗಿತ್ವದಲ್ಲಿ ಕೈಗೊಳ್ಳಬೇಕು. 50 ವರ್ಷಗಳ ಸಾಧನೆಯನ್ನು ಮೆಲುಕು ಹಾಕಲು ಹಾಗೂ ಆತ್ಮಾವಲೋಕನ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಮುಂದಿನ 50 ವರ್ಷಗಳು ಹೇಗಿರಬೇಕೆಂದು ಚಿಂತನೆ ಮಾಡಿ. ಒಂದು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲು ತಿಳಿಸಿದರು.

ಟಾಪ್ ನ್ಯೂಸ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

ವಾಲ್ಮೀಕಿ ಹಗರಣ ಮಾದರಿ ನಗರೋತ್ಥಾನದಲ್ಲೂ ನಿಧಿ ತಿರುವು!

ವಾಲ್ಮೀಕಿ ಹಗರಣ ಮಾದರಿ ನಗರೋತ್ಥಾನದಲ್ಲೂ ನಿಧಿ ತಿರುವು!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.