KSRTC Buses: ಗಣೇಶ ಹಬ್ಬಕ್ಕೆ 1500 ಹೆಚ್ಚುವರಿ ಕೆಎಸ್ಆರ್‌ಟಿಸಿ ಬಸ್
Team Udayavani, Sep 3, 2024, 10:09 AM IST
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಸೆ. 8 ರಂದು ಬೆಂಗಳೂರಿಗೆ ಬರಲು ವಿವಿಧ ರಾಜ್ಯ ಹಾಗೂ ಅಂತಾರಾಜ್ಯ ಗಳಿಂದಲೂ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.
ಯಾವ್ಯಾವ ಜಿಲ್ಲೆಗಳಿಗೆ ಬಸ್ ಸಂಚಾರ: ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ ವಾರಾಂತ್ಯ ಭಾನುವಾರ ರಜೆ ಹಿನ್ನೆಲೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್‌ಗಳು ಸೆ. 5ರಂದು ಕೆಂಪೇಗೌಡ ಬಸ್ ನಿಲ್ದಾಣದಿಂದ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಸಂಚರಿಸಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವೀರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ. ಶಾಂತಿನಗರದ ಬಿಎಂಟಿಸಿ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು ತಿರುಚಿ, ಪಾಲಕ್ಕಾಡ್, ತ್ರಿಶೂಲ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗಲಿದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ರುವ ನಿಗಮದ ಕೌಂಟರ್‌ಗಳ ಮೂಲಕ ಇಲ್ಲಿನ ಸಾರಿಗೆಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.
ಹೆಚ್ಚುವರಿ ಬಸ್‌ಗಳು, ಹೊರಡುವ ಸ್ಥಳ ಹಾಗೂ ವೇಳಾಪಟ್ಟಿ ವಿವರವನ್ನು ಮುಂಗಡ ಆಸನಗಳ ಕಾಯ್ದಿರಿಸುವ ಅಂತರ್ಜಾಲ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿಯೂ ಜನಸಂಚಾರಕ್ಕೆ ಅನುಗುಣವಾಗಿ ವಿಶೇಷ ಸಾರಿಗೆಇರಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4 ಟಿಕೆಟ್ ಖರೀದಿಸಿದರೆ ಶೇ.5 ರಿಯಾಯಿತಿ:
4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5 ರಷ್ಟು ರಿಯಾಯಿತಿ, ಹೋಗುವ, ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದ್ದಲ್ಲಿ ಬರುವಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯಿತಿ ಇರಲಿದೆ. ರಾಜ್ಯ ಮತ್ತು ಅಂತಾರಾಜ್ಯದ ಬುಕ್ಕಿಂಗ್ ಕೌಂಟರ್ ಮೂಲಕ ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ವೆಬ್‌ಸೈಟ್ www.ksrtc.karnataka.gov.in ಮೂಲಕವೂ ಇ-ಟಿಕೆಟ್ ಬುಕ್ಕಿಂಗ್ ಸೌಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.